Homeಮುಖಪುಟತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಕಾಂಗ್ರೆಸ್‌ಗೆ ನಿಷ್ಠೆ ಬದಲಿಸಿದ 10 ಶಾಸಕರ ಅನರ್ಹತೆ ಕೋರಿದ ಬಿಆರ್‌ಎಸ್‌. 5 ಅರ್ಜಿಗಳ ನಿರ್ಧಾರ ಪ್ರಕಟ

- Advertisement -
- Advertisement -

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ.

ಶಾಸಕರ ಅನರ್ಹತೆ ಅರ್ಜಿಗಳ ಮೇಲಿನ ಆದೇಶಗಳನ್ನು ಪ್ರಕಟಿಸಿದ ಸ್ಪೀಕರ್, ಐವರು ಶಾಸಕರು ಬಿಆರ್‌ಎಸ್‌ನಿಂದ ಕಾಂಗ್ರೆಸ್‌ಗೆ ಔಪಚಾರಿಕವಾಗಿ ಪಕ್ಷಾಂತರಗೊಂಡಿದ್ದಾರೆ ಎಂಬುದಕ್ಕೆ ಅರ್ಜಿದಾರರು ಪುರಾವೆಗಳನ್ನು ಒದಗಿಸಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಹಾಗಾಗಿ, ಪಕ್ಷಾಂತರ ನಿಷೇಧ ಕಾನೂನು ಶಾಸಕರಾದ ತೆಲ್ಲಂ ವೆಂಕಟ್ ರಾವ್, ಬಂಡ್ಲಾ ಕೃಷ್ಣ ಮೋಹನ್ ರೆಡ್ಡಿ, ಟಿ ಪ್ರಕಾಶ್ ಗೌಡ್, ಗುಡೆಮ್ ಮಹಿಪಾಲ್ ರೆಡ್ಡಿ ಮತ್ತು ಅರೆಕಪುಡಿ ಗಾಂಧಿ ಅವರಿಗೆ ಅನ್ವಯಿಸುವುದಿಲ್ಲ ಎಂದು ಸ್ಪೀಕರ್ ತೀರ್ಪು ನೀಡಿದ್ದಾರೆ.

ಶಾಸಕರು ತಾಂತ್ರಿಕವಾಗಿ ಇನ್ನೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್)ನಲ್ಲಿದ್ದಾರೆ ಎಂದು ಹೇಳಿದ್ದಾರೆ.

ಆಡಳಿತ ಪಕ್ಷಕ್ಕೆ ನಿಷ್ಠೆಯನ್ನು ಬದಲಾಯಿಸಿದ ಆರೋಪದ ಮೇಲೆ 10 ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಲಾಗಿತ್ತು. ಈ ಪೈಕಿ ಐವರ ಕುರಿತು ಸ್ಪೀಕರ್ ಆದೇಶ ಪ್ರಕಟಿಸಿದ್ದಾರೆ. ಒಟ್ಟು ಎಂಟು ಶಾಸಕರ ಅನರ್ಹತೆ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಸ್ಪೀಕರ್ ಆದೇಶಗಳನ್ನು ಕಾಯ್ದಿರಿಸಿದ್ದರು.

ಇತರ ಇಬ್ಬರು ಶಾಸಕರಾದ ದಾನಂ ನಾಗೇಂದರ್ ಮತ್ತು ಕಡಿಯಂ ಶ್ರೀಹರಿ ಅವರಿಗೆ ನೀಡಲಾದ ನೋಟಿಸ್‌ಗಳಿಗೆ ಉತ್ತರಗಳನ್ನು ಸಲ್ಲಿಸಿದ ನಂತರ, ಅವರ ಅನರ್ಹತೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕಳೆದ ತಿಂಗಳು ಸ್ಪೀಕರ್ ಕಳುಹಿಸಿದ್ದ ನೋಟಿಸ್‌ಗೆ ಉತ್ತರಿಸಲು ಅವರು ಹೆಚ್ಚಿನ ಸಮಯ ಕೋರಿದ್ದರು.

2023ರ ಚುನಾವಣೆಯಲ್ಲಿ ತನ್ನ ಟಿಕೆಟ್‌ನಿಂದ ವಿಧಾನಸಭೆಗೆ ಆಯ್ಕೆಯಾಗಿ 2024ರಲ್ಲಿ ಕಾಂಗ್ರೆಸ್‌ಗೆ ನಿಷ್ಠೆ ಬದಲಿಸಿದ 10 ಶಾಸಕರನ್ನು ಅನರ್ಹಗೊಳಿಸುವಂತೆ ಬಿಆರ್‌ಎಸ್ ಅರ್ಜಿಗಳನ್ನು ಸಲ್ಲಿಸಿತ್ತು.

ಈ ಶಾಸಕರು ಬಹಿರಂಗವಾಗಿ ಕಾಂಗ್ರೆಸ್ ಸೇರಿದ್ದಾರೆ ಮತ್ತು ವಿಧಾನಸಭೆಯಲ್ಲೂ ಅವರ ಜೊತೆ ಕುಳಿತಿದ್ದಾರೆ ಎಂದು ಬಿಆರ್‌ಎಸ್ ದೂರಿದೆ. ಆದರೆ, ಶಾಸಕರು ಆಡಳಿತ ಪಕ್ಷ ಸೇರಿರುವುದನ್ನು ನಿರಾಕರಿಸಿದ್ದಾರೆ. ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ನಿಧಿ ಕೇಳಲು ಮಾತ್ರ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾಗಿ ವಾದಿಸಿದ್ದಾರೆ.

ಶಾಸಕ ನಾಗೇಂದರ್ ಕಾಂಗ್ರೆಸ್ ಸೇರಿದ್ದಲ್ಲದೆ, 2024ರ ಲೋಕಸಭಾ ಚುನಾವಣೆಯಲ್ಲಿ ಸಿಕಂದರಾಬಾದ್‌ನಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು ಎಂದು ಬಿಆರ್‌ಎಸ್ ಸ್ಪೀಕರ್ ಗಮನಕ್ಕೆ ತಂದಿತ್ತು.

ಕಾಂಗ್ರೆಸ್ ಅಭ್ಯರ್ಥಿಯಾಗಿ ವಾರಂಗಲ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದ ತಮ್ಮ ಪುತ್ರಿ ಕಡಿಯಂ ಕವಿಯಾ ಪರ ಕಡಿಯಂ ಶ್ರೀಹರಿ ಬಹಿರಂಗ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿತ್ತು.

10 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ನಿರ್ಧರಿಸಲು ತಾನು ನೀಡಿದ್ದ ನಿರ್ದೇಶನವನ್ನು ಪಾಲಿಸದಿದ್ದಕ್ಕಾಗಿ ನವೆಂಬರ್ 17 ರಂದು ಸುಪ್ರೀಂ ಕೋರ್ಟ್ ತೆಲಂಗಾಣ ಸ್ಪೀಕರ್‌ಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿತ್ತು.

ಜುಲೈ 31ರಂದು, ಆಗಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು 10 ಶಾಸಕರ ಅನರ್ಹತೆಯ ವಿಷಯವನ್ನು ಮೂರು ತಿಂಗಳಲ್ಲಿ ನಿರ್ಧರಿಸುವಂತೆ ಸ್ಪೀಕರ್‌ಗೆ ಸೂಚಿಸಿತ್ತು.

ಬಿಆರ್‌ಎಸ್ ನಾಯಕರು ಸಲ್ಲಿಸಿದ ಅರ್ಜಿಗಳ ಕುರಿತು ಸ್ಪೀಕರ್ ಮತ್ತು ಇತರರಿಗೆ ನೋಟಿಸ್ ನೀಡುವಾಗ, ಪೀಠವು ತನ್ನ ಹಿಂದಿನ ನಿರ್ದೇಶನಗಳನ್ನು ಪಾಲಿಸದಿರುವುದನ್ನು ಅತ್ಯಂತ ಗಂಭೀರವಾದ ನ್ಯಾಯಾಂಗ ನಿಂದನೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...