Homeಚಳವಳಿತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಂದ ಜೈಲ್‌ಭರೋ ಚಳವಳಿ ಎಚ್ಚರಿಕೆ...

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಂದ ಜೈಲ್‌ಭರೋ ಚಳವಳಿ ಎಚ್ಚರಿಕೆ…

- Advertisement -
- Advertisement -

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಬೇಡಿಕೆಗಳನ್ನು ಈಡೇರಿಸಲು ಮತ್ತು ಹೈಕೋರ್ಟ್ ಆದೇಶದಂತೆ ಸಂಧಾನಕ್ಕೆ ಸರ್ಕಾರ ಒಪ್ಪಿಕೊಳ್ಳದಿದ್ದರೆ ನಾವು ಜೈಲ್ ಭರೋ ಚಳವಳಿಗೂ ಸಿದ್ದರಿದ್ದೇವೆ ಎಂದು ಜಂಟಿ ಕ್ರಿಯಾ ಸಮಿತಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ನಮಗೆ ಮೊದಲು 825 ಕೋಟಿ ಭವಿಷ್ಯ ನಿಧಿ ಹಣ ಹಾಗೂ ಸಹಕಾರಿ ಸಂಸ್ಥೆಯ 547 ಕೋಟಿ ನಿಧಿಯನ್ನು ಬಿಡುಗಡೆ ಮಾಡಬೆಕು. ಇದು ನಮ್ಮ ಪ್ರಮುಖ ಬೇಡಿಕೆಗಳಲ್ಲಿ ಒಂದು. ಇದಕ್ಕೆ ಸಮ್ಮತಿಸದಿದ್ದರೆ ಮುಷ್ಕರ ಅಥವಾ ಬಂದ್ ಮುಂದುವರಿಸಲಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಸಾರಿಗೆ ನೌಕರರ ಮುಷ್ಕರ : ಹಬ್ಬಕ್ಕೆ ಊರಿಗೆ ತರಳಲು ಪ್ರಯಾಣಿಕರ ಪರದಾಟ..

ತೆಲಂಗಾಣ ಹೈಕೋರ್ಟ್ ಮುಷ್ಕರನಿರತ ನೌಕರರೊಂದಿಗೆ ಸಂಧಾನ ನಡೆಸಬೇಕೆಂದು ಆದೇಶ ನೀಡಿದೆ. ಆದರೆ ರಾಜ್ಯ ಸರ್ಕಾರ ಮಾತುಕತೆಗೆ ಮುಂದೆ ಬರುತ್ತಿಲ್ಲ. ನಮ್ಮನ್ನು ನಿರ್ಲಕ್ಷ್ಯ ಮಾಡುವ ಜೊತೆಗೆ ಮತಹಾಕಿ ಅಧಿಕಾರ ನೀಡಿದ ಜನರಿಗೂ ಸೂಕ್ತ ಉತ್ತರ ಕೊಡುತ್ತಿಲ್ಲ ಎಂದು ಹೋರಾಟಗಾರರು ದೂರಿದ್ದಾರೆ.

ಜಂಟಿ ಕ್ರಿಯಾ ಸಮಿತಿ ಸಂಧಾನಕ್ಕೆ ಮುಕ್ತವಾಗಿದೆ. ಹೀಗಾಗಿ ಹೈಕೋರ್ಟ್ ಆದೇಶ ಪಾಲನೆಗೆ ಸರ್ಕಾರ ಮುಂದಾಗಬೇಕು. ಹೈಕೋರ್ಟ್ ಅದೇಶಕ್ಕೆ ಉತ್ತರ ಕೊಡದವರು ಇನ್ನು ನಮಗೇನು ಉತ್ತರ ನೀಡುತ್ತಾರೆ. ಸರ್ಕಾರ ಮಾತುಕತೆ ನಡೆಸಲಿ ಬಿಡಲಿ ಇದೇ ಧೋರಣೆ ಮುಂದುವರೆದರೆ ಸಂವಿಧಾನಬದ್ದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ರವಾನಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ಸಿಬ್ಬಂದಿಗಳ ಪ್ರತಿಭಟನೆಯಿಂದ ಕಂಗೆಟ್ಟಿದ್ದ ತೆಲಂಗಾಣಕ್ಕೆ ಈಗ ಓಲಾ, ಉಬರ್ ಶಾಕ್!

ಎರಡು ವಾರಗಳಿಂದ ಮುಷ್ಕರದಲ್ಲಿ ತೊಡಗಿರುವ ಟಿಎಸ್ಆರ್ ಟಿಸಿ ನೌಕರರನ್ನು ರಾಜ್ಯ ಸರ್ಕಾರ ಎಸ್ಮಾ ಕಾಯ್ದೆಯಡಿ ಕೆಲಸದಿಂದ ವಜಾಗೊಳಿಸಿತ್ತು. ಇದರ ವಿರುದ್ದ ನೌಕರರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಇಂದು ಮುಷ್ಕರ ನಿರತರೊಂದಿಗೆ ಸರ್ಕಾರ ಸಂಧಾನ ಮಾತುಕತೆ ನಡೆಯಲಿದ್ದು ಸಭೆಯ ನಂತರ ತೀರ್ಮಾನ ಪ್ರಕಟಗೊಳ್ಳಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...