Homeಮುಖಪುಟತೆಲಂಗಾಣ ಸುರಂಗ ಕುಸಿತ; 200 ಮೀಟರ್ ಅವಶೇಷಗಳ ಹಿಂದೆ ಸಿಲುಕಿರುವ 8 ಜನರು

ತೆಲಂಗಾಣ ಸುರಂಗ ಕುಸಿತ; 200 ಮೀಟರ್ ಅವಶೇಷಗಳ ಹಿಂದೆ ಸಿಲುಕಿರುವ 8 ಜನರು

- Advertisement -
- Advertisement -

ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಶನಿವಾರ ಸುರಂಗದ ಮೇಲ್ಛಾವಣಿ ಕುಸಿದ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದ್ದು, ಎಂಟು ಕಾರ್ಮಿಕರು ಇನ್ನೂ ಅದರೊಳಗೆ ಸಿಲುಕಿಕೊಂಡಿದ್ದಾರೆ.

ಸೇನೆಯು ತನ್ನ ಎಂಜಿನಿಯರ್ ಟಾಸ್ಕ್ ಫೋರ್ಸ್ (ಇಟಿಎಫ್) ಅನ್ನು ರಕ್ಷಣಾ ಕಾರ್ಯಾಚರಣೆಗಾಗಿ ತ್ವರಿತವಾಗಿ ಸಜ್ಜುಗೊಳಿಸಿದೆ. ಆಧುನಿಕ ತಂತ್ರಜ್ಞಾನದೊಂದಿಗೆ ಸಜ್ಜುಗೊಂಡಿರುವ ಇಟಿಎಫ್ ಅಪಘಾತ ಸ್ಥಳದಲ್ಲಿ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (ಎಚ್‌ಎಡಿಆರ್) ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

200 ಮೀಟರ್‌ಗಳಷ್ಟು ಅವಶೇಷಗಳಿಂದ ತುಂಬಿದ ಪ್ಯಾಚ್ ಇದೆ ಎಂದು ರಕ್ಷಣಾ ಪಡೆ ತಿಳಿಸಿದೆ. ಈ ಅವಶೇಷಗಳನ್ನು ಸ್ವಚ್ಛಗೊಳಿಸುವವರೆಗೆ, ಸಿಲುಕಿರುವ ಕಾರ್ಮಿಕರ ನಿಖರವಾದ ಸ್ಥಳವನ್ನು ಕಂಡುಹಿಡಿಯಲು ಹಾಗೂ ಅವರನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ.

“ಸುರಂಗದ 11-13 ಕಿಮೀ ನಡುವಿನ ಪ್ಯಾಚ್‌ನಲ್ಲಿ ನೀರು ತುಂಬಿರುತ್ತದೆ, ನೀರನ್ನು ತೆಗೆದುಹಾಕುವವರೆಗೆ, ಅವಶೇಷಗಳ ಶುಚಿಗೊಳಿಸುವ ಕೆಲಸ ಪ್ರಾರಂಭವಾಗುವುದಿಲ್ಲ” ಎಂದು ಎನ್‌ಡಿಆರ್‌ಎಫ್ ಉಪ ಕಮಾಂಡರ್ ಸುಖೇಂದು ಹೇಳಿದರು.

ಶ್ರೀಶೈಲಂನಿಂದ ದೇವರಕೊಂಡ ಕಡೆಗೆ ಸಾಗುವ ಶ್ರೀಶೈಲಂ ಎಡದಂಡೆ ಕಾಲುವೆಯ 14 ಕಿ.ಮೀ ಒಳಹರಿವಿನಲ್ಲಿ ಸೋರಿಕೆಯನ್ನು ಮುಚ್ಚಲು ಬಳಸಲಾಗಿದ್ದ ಕಾಂಕ್ರೀಟ್ ಭಾಗದ ಕುಸಿತದಿಂದ ಈ ಅವಘಡ ಸಂಭವಿಸಿದೆ.

ನಾಗರ್ಕರ್ನೂಲ್‌ನಲ್ಲಿ ಅಪಘಾತ ನಡೆದ ಸ್ಥಳದಲ್ಲಿದ್ದ ತೆಲಂಗಾಣ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಮಾತನಾಡಿ, ಕಳೆದ ವರ್ಷ ಉತ್ತರಾಖಂಡದಲ್ಲಿ ಇದೇ ರೀತಿಯ ಘಟನೆ ನಡೆದಾಗ ರಕ್ಷಣಾ ಕಾರ್ಯಾಚರಣೆ ನಡೆಸಿದವರು ಸೇರಿದಂತೆ ರಾಜ್ಯ ಸರ್ಕಾರ ತಜ್ಞರನ್ನು ಕರೆಸಿಕೊಂಡಿದೆ ಎಂದು ಹೇಳಿದರು.

ಸಿಲುಕಿರುವ ಎಂಟು ಜನರಲ್ಲಿ ಮೂಲಸೌಕರ್ಯದ ಇಬ್ಬರು ಎಂಜಿನಿಯರ್‌ಗಳು, ಅಮೇರಿಕನ್ ಕಂಪನಿಯ ಇಬ್ಬರು ನಿರ್ವಾಹಕರು ಸೇರಿದ್ದಾರೆ. ಉಳಿದ ನಾಲ್ವರು ಕಾರ್ಮಿಕರು ಉತ್ತರ ಪ್ರದೇಶ, ಜಾರ್ಖಂಡ್, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಮೂಲದವರು.

ಪ್ರಧಾನಿ ನರೇಂದ್ರ ಮೋದಿ ಶನಿವಾರ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಕರೆ ಮಾಡಿ ಘಟನೆ ಮತ್ತು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ವಿಚಾರಿಸಿದರು. ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಮತ್ತು ಸಿಕ್ಕಿಬಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಮರಳಿ ತರಲು ಕೇಂದ್ರದಿಂದ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಪ್ರಧಾನಿ ಮೋದಿ ಭರವಸೆ ನೀಡಿದರು.

ಶನಿವಾರ ಬೆಳಿಗ್ಗೆ, ಸುರಂಗದ ನಿರ್ಮಾಣ ಕಾರ್ಯ ಇತ್ತೀಚೆಗೆ ಪುನರಾರಂಭವಾದ ನಂತರ ಸುಮಾರು 50 ಜನರು 200 ಮೀಟರ್ ಉದ್ದದ ಬೋರಿಂಗ್ ಯಂತ್ರದೊಂದಿಗೆ ಸುರಂಗವನ್ನು ಪ್ರವೇಶಿಸಿದರು. ಸುರಂಗದೊಳಗೆ ಕಾರ್ಮಿಕರು 14 ಕಿಲೋಮೀಟರ್ ಒಳಗೆ ಸಿಲುಕಿಕೊಂಡಿದ್ದಾರೆ.

ಅಪಘಾತದ ಸ್ಥಳದಲ್ಲಿ ದೊಡ್ಡ ಪ್ರಮಾಣದ ಮಣ್ಣು ಸಂಗ್ರಹವಾಗಿರುವುದರಿಂದ ರಕ್ಷಣಾ ತಂಡಗಳು ಡ್ರೋನ್‌ಗಳನ್ನು ಬಳಸಿಕೊಂಡು ಮುಂದೆ ಸಾಗುತ್ತಿವೆ, ಸುರಂಗದಲ್ಲಿ ಸಂಭಾವ್ಯ ಅಪಾಯಗಳನ್ನು ಗುರುತಿಸುತ್ತಿವೆ.

ಕಲ್ಲಿದ್ದಲು ಗಣಿಗಾರಿಕಾ ಘಟಕದ 19 ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಲು ಸ್ಥಳಕ್ಕೆ ತೆರಳಿದೆ ಎಂದು ಸರ್ಕಾರಿ ಸ್ವಾಮ್ಯದ ಸಿಂಗರೇಣಿ ಕಾಲೀರೀಸ್ ಕಂಪನಿ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್ ಬಲರಾಮ್ ತಿಳಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಬೆಳಿಗ್ಗೆ ಎಸ್‌ಎಲ್‌ಬಿಸಿ ಸುರಂಗದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಕುರಿತು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಕರೆ ಮಾಡಿ ಮಾತನಾಡಿದರು. ತೆಗೆದುಕೊಂಡ ಕ್ರಮಗಳು ಮತ್ತು ನಿರಂತರ ಜಾಗರೂಕತೆ, ಮೇಲ್ವಿಚಾರಣೆಯನ್ನು ಶ್ಲಾಘಿಸಿದರು; ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ಯಾವುದೇ ಅವಕಾಶವನ್ನು ಬಿಡದಂತೆ ಸರ್ಕಾರಕ್ಕೆ ಮವಿ ಮಾಡಿದ್ದಾರೆ.

ಇದನ್ನೂ ಓದಿ; ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡುವುದನ್ನು ವಿರೋಧಿಸಿ ಹಿಂದುತ್ವ ಸಂಘಟನೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...