Homeಮುಖಪುಟತೆಲಂಗಾಣ | ಸುರಂಗ ಕುಸಿತ ಸ್ಥಳಕ್ಕೆ ರಕ್ಷಣಾ ತಂಡ ತಲುಪಿದರೂ, ಅವಶೇಷಗಳಡಿ ಸಿಲುಕಿದವರನ್ನು ಪತ್ತೆ ಹಚ್ಚುವಲ್ಲಿ...

ತೆಲಂಗಾಣ | ಸುರಂಗ ಕುಸಿತ ಸ್ಥಳಕ್ಕೆ ರಕ್ಷಣಾ ತಂಡ ತಲುಪಿದರೂ, ಅವಶೇಷಗಳಡಿ ಸಿಲುಕಿದವರನ್ನು ಪತ್ತೆ ಹಚ್ಚುವಲ್ಲಿ ವಿಫಲ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾಗಶಃ ಕುಸಿದಿರುವ ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗದಲ್ಲಿ ಕಳೆದ ಐದು ದಿನಗಳಿಂದ ಸಿಲುಕಿಕೊಂಡಿರುವ ಎಂಟು ಮಂದಿಯನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿರುವ ತಜ್ಞರ ತಂಡವು, ಸುರಂಗ ಕುಸಿದಲ್ಲಿಗೆ ತಲುಪಿ ಹಿಂದಿರುಗುವಲ್ಲಿ ಯಶಸ್ವಿಯಾಗಿದೆ ಎಂದು ವರದಿಯಾಗಿದೆ.

ಸುರಂಗದ ಕೊನೆ ಭಾಗಕ್ಕೆ 50 ಮೀಟರ್ ದೂರದವರೆಗೆ ರಕ್ಷಣಾ ತಂಡಗಳು ಹೋಗಿ ಬಂದಿವೆ. ಅದಕ್ಕಿಂತ ಮುಂದೆ ಕೆಸರು ಮತ್ತು ಅವಶೇಷಗಳು ಇರುವುದರಿಂದ ಹೋಗಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

“ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ರ‍್ಯಾಟ್ ಮೈನರ್ಸ್ ಒಳಗೊಂಡ 20 ಸದಸ್ಯರ ತಂಡ ಸುರಂಗದ ಕೊನೆಯ ಹಂತ ತಲುಪಲು ಸಾಧ್ಯವಾಗಿದೆ. ಆದರೆ, ಅಲ್ಲಿ ಬಹಳಷ್ಟು ಅವಶೇಷಗಳು ಇವೆ. ಅಲ್ಲಿಂದ ಹೇಗೆ ಮುಂದುವರಿಯಬೇಕೆಂದು ಯೋಚಿಸುತ್ತಿದ್ದಾರೆ” ಎಂದು ನಾಗರ್ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಗಾಯಕ್ವಾಡ್ ತಿಳಿಸಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ಹೇಳಿದೆ.

“ನಿನ್ನೆ ರಕ್ಷಣಾ ತಂಡಗಳು ಸುರಂಗ ಕೊನೆಯಾಗುವ 40 ಮೀಟರ್ ದೂರಕ್ಕೆ ತಲುಪಿದ್ದರು. ಅಲ್ಲಿ ರಾತ್ರಿ ಹುಡುಕಾಟ ನಡೆಸಲಾಗಿದೆ ಏನು ಸಿಕ್ಕಿಲ್ಲ” ಎಂದು ಗಾಯಕ್ವಾಡ್ ಹೇಳಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮಾದರಿಗಳನ್ನು ಸಂಗ್ರಹಿಸಿರುವ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ತಂಡವು ಮಣ್ಣಿನ ಬಲ ಮತ್ತು ಇತರ ವಿಷಯದ ಬಗ್ಗೆ ಇನ್ನೂ ವರದಿಗಳನ್ನು ಸಲ್ಲಿಸಿಲ್ಲ ಎಂದಿದ್ದಾರೆ.

ಕುಸಿದ ಎಸ್‌ಎಲ್‌ಬಿಸಿ ಸುರಂಗದ ರಕ್ಷಣಾ ಕಾರ್ಯದಲ್ಲಿ ಪ್ರಗತಿ ಸಾಧಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿರುವ ಭಾರತೀಯ ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್, ಜಿಎಸ್‌ಐ ಮತ್ತು ಇತರ ಏಜೆನ್ಸಿಗಳ ಉನ್ನತ ತಜ್ಞರು, ಹೂಳು ಮತ್ತು ನೀರಿನ ನಿರಂತರ ಹರಿವಿನಿಂದ ರಕ್ಷಣಾ ಸಿಬ್ಬಂದಿಯ ಜೀವಕ್ಕೆ ಅಪಾಯವಿದ್ದು, ಆದರೂ, ಬುಧವಾರ ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ನೀರಾವರಿ ಸಚಿವ ಉತ್ತಮ್ ಕುಮಾರ್ ರೆಡ್ಡಿ, ಎಸ್‌ಎಲ್‌ಬಿಸಿ ಸುರಂಗಕ್ಕೆ ಒಂದೇ ಪ್ರವೇಶ ಮತ್ತು ನಿರ್ಗಮನ ಇರುವುದರಿಂದ ಇದು ವಿಶ್ವದ ಅಥವಾ ಕನಿಷ್ಠ ಭಾರತದಲ್ಲಿ ಅತ್ಯಂತ ಸಂಕೀರ್ಣ ಮತ್ತು ಕಷ್ಟಕರವಾದ ಸುರಂಗ ರಕ್ಷಣಾ ಕಾರ್ಯಾಚರಣೆ ಎಂಬುವುದಾಗಿ ತಜ್ಞರು ಬಣ್ಣಿಸಿದ್ದಾರೆ ಎಂದಿದ್ದರು.

ಸುರಂಗದೊಳಗೆ ಆಮ್ಲಜನಕವನ್ನು ನಿರಂತರವಾಗಿ ಪಂಪ್ ಮಾಡಲಾಗುತ್ತಿದೆಯಾದರೂ, ಸಿಲುಕಿರುವ ವ್ಯಕ್ತಿಗಳೊಂದಿಗೆ ಯಾವುದೇ ಸಂಪರ್ಕ ಸಾಧಿಸು ಸಾಧ್ಯವಾಗಿಲ್ಲ ಎಂದು ಸಚಿವರು ಹೇಳಿದ್ದಾರೆ.

ದೆಹಲಿ ಗಲಭೆಯ 120 ಪ್ರಕರಣಗಳಲ್ಲಿ ಶೇ. 80 ರಷ್ಟು ಆರೋಪಿಗಳು ಖುಲಾಸೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...