Homeಮುಖಪುಟದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

ದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

- Advertisement -
- Advertisement -

ಭಾರತೀಯ ದೂರ ಸಂಪರ್ಕ ಮಸೂದೆ-2023 (Telecommunication Bill-2023) ಗುರುವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗಿತ್ತು. ಚರ್ಚೆಯ ಬಳಿಕ ಗುರುವಾರ ಅನುಮೋದನೆ ಪಡೆದಿದೆ. ಈ ಮಸೂದೆಯು ಭಾರತೀಯ ಟೆಲಿಗ್ರಾಫ್ ಕಾಯ್ದೆ-1885 (Indian Telegraph Act-1885) ಮತ್ತು ಭಾರತೀಯ ವೈರ್‌ಲೆಸ್ ಟೆಲಿಗ್ರಫಿ ಕಾಯ್ದೆ- 1933(Indian Wireless Telegraphy Act-1933)ರನ್ನು ತೆಗೆದು ಹಾಕಲಾಗಿದೆ.

ಹೊಸ ಮಸೂದೆಯು ಇಂಟರ್‌ನೆಟ್ ಮೇಲಿನ ಕೇಂದ್ರ ಸರ್ಕಾರದ ಹಿಡಿತ ವಿಸ್ತರಣೆ ಮತ್ತು ದೇಶದ ಜನರ ಇಂಟರ್‌ನೆಟ್ ಸ್ವಾತಂತ್ರ್ಯದ ಮೇಲೆ ಬೀರಲಿರುವ ಪರಿಣಾಮಗಳ ಬಗ್ಗೆ ಚರ್ಚೆ ಹುಟ್ಟು ಹಾಕಿದೆ.

ಈ ಮಸೂದೆಯು ದೂರ ಸಂಪರ್ಕ ಸೇವೆಗಳ ಮೇಲೆ ವಸಾಹತುಶಾಹಿ ಯುಗದದಂತೆ ಸರ್ಕಾರ ಕಣ್ಗಾವಲಿಡಲು ಮತ್ತು ಯಾವುದೇ ಸುರಕ್ಷತೆಗಳಿಲ್ಲದೆ ಟೆಲಿಕಾಂ ಸೇವೆಗಳ ಮೇಲೆ ನಿಯಂತ್ರಣ ಸಾಧಿಸಲು ಸಹಕಾರಿಯಾಗಲಿದೆ ಎಂದು ಡಿಜಿಟಲ್ ಮತ್ತು ಮಾಧ್ಯಮ ಹಕ್ಕುಗಳ ತಜ್ಞರು ಹೇಳಿದ್ದಾರೆ. ಆದರೆ, ದೂರ ಸಂಪರ್ಕ ಉದ್ಯಮದ ಪ್ರತಿನಿಧಿಗಳು ಮಸೂದೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಈ ಮಸೂದೆಯು ದೂರಸಂಪರ್ಕ ಸೇವೆಗಳ ಬಗ್ಗೆ ನಿಗೂಢ ವ್ಯಾಖ್ಯಾನಗಳನ್ನು ಒಳಗೊಂಡಿದೆ ಎಂದು ಡಿಜಿಟಲ್ ತಜ್ಞರು ಸ್ಕ್ರಾಲ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಈವರೆಗೆ ದೂರಸಂಪರ್ಕ ಸೇವೆಗಳು ಎಂದು ಸಾಂಪ್ರದಾಯಿಕವಾಗಿ ಪರಿಗಣಿತವಾಗಿರದಿದ್ದ ಇಮೇಲ್ ಹಾಗೂ ಸಂದೇಶ ವೇದಿಕೆಗಳ ಮೇಲಿನ ನಿಯಂತ್ರಣ ವಿಸ್ತರಿಸಲಿದೆ ಎಂದಿದ್ದಾರೆ.

‘ಸಂದೇಶ, ದೂರಸಂಪರ್ಕ ಹಾಗೂ ದೂರಸಂಪರ್ಕ ಸೇವೆಗಳು’ ಎಂಬ ವ್ಯಾಖ್ಯಾನದಡಿ ಇಮೇಲ್, ಕ್ಲೌಡ್ ಸೇವೆಗಳು, ಪ್ರಸರಣ ಹಾಗೂ ತಂತ್ರಾಂಶ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಭಾರತದಲ್ಲಿನ ತಾಂತ್ರಿಕ ನೀತಿಗಳ ಕುರಿತು ವರದಿ ಮಾಡುವ ಮೀಡಿಯಾನಾಮ ಎಂಬ ಡಿಜಿಟಲ್ ಮಾಧ್ಯಮ ವೇದಿಕೆಯ ಸಂಸ್ಥಾಪಕ ನಿಖಿಲ್ ಪಹ್ವಾ ಹೇಳಿದ್ದಾರೆ.

ದೂರಸಂಪರ್ಕ ಸೇವೆಗಳ ಬಳಕೆದಾರರು ಬಯೋಮೆಟ್ರಿಕ್ ಪರಿಶೀಲನೆಗೆ ಒಳಗಾಗಬೇಕಿರುವುದರಿಂದ ಅದರ ಪರಿಣಾಮವು ಎಂಡ್‌ ಟು ಎಂಡ್ ಎನ್‌ಕ್ರಿಪ್ಶನ್( end-to-end encryption) ಸೇವೆಗಳನ್ನು ಒದಗಿಸುವ ಸಂದೇಶ ವೇದಿಕೆಗಳ ಮೇಲಾಗಲಿದೆ. ಇದರಿಂದ ಬಳಕೆದಾರರ ಖಾಸಗಿತನಕ್ಕೆ ಧಕ್ಕೆಯಾಗಲಿದೆ ಎನ್ನುತ್ತಾರೆ ತಜ್ಞರು.

ಹೊಸ ಮಸೂದೆಯ ವ್ಯಾಪ್ತಿಯಲ್ಲಿ ದೂರ ಸಂಪರ್ಕ ಮತ್ತು ಇಂಟರ್‌ನೆಟ್‌ ಸೇವೆಗಳನ್ನು ಪಡೆಯಲು ಜನರು ಬಯೋಮೆಟ್ರಿಕ್ ಪರಿಶೀನೆಗೆ ಒಳಗಾಗಬೇಕಾಗುತ್ತದೆ. ಇಂಟರ್‌ನೆಟ್ ಬಳಸುವುದಕ್ಕಾಗಿ ಬಯೋಮೆಟ್ರಿಕ್ ಪರಿಶೀಲನೆಯನ್ನು ಕಡ್ಡಾಯಗೊಳಿಸುವ ಸಾಮರ್ಥ್ಯವನ್ನು ಸರ್ಕಾರ ಹೊಂದಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಇಂಟರ್‌ನೆಟ್ ಸಂಪರ್ಕವು ಭಾರತೀಯ ಸಂವಿಧಾನದಡಿಯಲ್ಲಿ ಮೂಲಭೂತ ಹಕ್ಕುಗಳ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಸ್ತುತ ಕಾನೂನಿನ ಪ್ರಕಾರ ಇಂಟರ್‌ನೆಟ್ ಬಳಕೆದಾರರು ಗೌಪ್ಯತೆ ಕಾಪಾಡಿಕೊಳ್ಳಬಹುದು. ಇಂಟರ್‌ನೆಟ್ ಬಳಕೆಗೂ ಬಯೋಮೆಟ್ರಿಕ್ ಕಡ್ಡಾಯಗೊಳಿಸುವುದು ಮತ್ತು ಬಳಕೆದಾರರಿಗೆ ಮಾಹಿತಿಯಿಲ್ಲದೆ ಇಂಟರ್‌ನೆಟ್ ಬಳಕೆಯನ್ನು ನಿಯಂತ್ರಿಸುವುದು ಕಳವಳಕಾರಿ ಎಂದು ಏಷ್ಯಾ ಪೆಸಿಫಿಕ್ ನೀತಿ ಸಲಹೆಗಾರ್ತಿ ನಮ್ರತಾ ಮಹೇಶ್ವರಿ ಹೇಳಿದ್ದಾರೆ.

ಹೊಸ ಮಸೂದೆಯನ್ನು ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಕೆಲ ತಜ್ಞರು ಇದು ಬಳಕೆದಾರರ ಗೌಪ್ಯತಾ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡುತ್ತದೆ ಎಂದಿದ್ದಾರೆ. ಇನ್ನೂ ಕೆಲವರು ಹೊಸ ಮಸೂದೆ ದೂರಸಂಪರ್ಕ ಸೇವೆಗಳನ್ನು ಸುಲಭವಾಗಿ ಬಳಸಿಕೊಳ್ಳಲು ಜನರಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಟೆಲಿಕಾಂ ಸೇವೆ ಒದಗಿಸುವ ಕಾರ್ಪೋರೇಟ್ ವಲಯ ಮಸೂದೆಯನ್ನು ಒಪ್ಪಿಕೊಂಡಿರುವುದು ಜನ ಸಾಮಾನ್ಯರು ಆತಂಕಪಡುವ ವಿಚಾರ. ವ್ಯಾವಹಾರಿಕವಾಗಿ ಲಾಭವಿಲ್ಲದೆ ಯಾವುದೇ ಉದ್ಯಮ ವಲಯ ಹೊಸ ನೀತಿಯನ್ನು ಕಣ್ಣುಮುಚ್ಚಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಕೊನೆಯದಾಗಿ ಹೇಳುವುದಾದರೆ, ದೂರ ಸಂಪರ್ಕ, ಇಂಟರ್‌ನೆಟ್‌ ಸೇವೆಗಳು ಜನರಿಗೆ ಸುಲಭವಾಗಿ ದೊರೆಯಬೇಕು ಎಂಬುವುದು ನಿಜ. ಇದು ಅಭಿವೃದ್ದಿಯ ಒಂದು ಭಾಗವೂ ಹೌದು. ಆದರೆ, ಆಳುವ ಸರ್ಕಾರ ನಮ್ಮ ದೂರ ಸಂಪರ್ಕ, ಇಂಟರ್‌ನೆಟ್ ಬಳಕೆಯ ಮೇಲೆ ಕಣ್ಣಿಡುತ್ತದೆ ಎಂದರೆ ಅಪಾಯಕಾರಿ.

ಇದನ್ನೂ ಓದಿ : ಏಕರೂಪ ನಾಗರಿಕ ಸಂಹಿತೆ: ಕರಡು ಸಮಿತಿಯ ನಿರ್ಧಾರಕ್ಕೆ ಅನುಮೋದನೆ ನೀಡಿದ ಉತ್ತರಾಖಂಡ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....