Homeಮುಖಪುಟಕೂಡಲೇ ಹಣ ಪಾವತಿಸಿ : ಟೆಲಿಕಾಂ ಕಂಪನಿಗಳಿಗೆ ಸುಪ್ರೀಂ ತಾಕೀತು

ಕೂಡಲೇ ಹಣ ಪಾವತಿಸಿ : ಟೆಲಿಕಾಂ ಕಂಪನಿಗಳಿಗೆ ಸುಪ್ರೀಂ ತಾಕೀತು

- Advertisement -
- Advertisement -

ವೊಡಪೋನ್-ಐಡಿಯಾ ಮತ್ತು ಏರ್ ಟೇಲ್ ಕಂಪನಿಗಳು ಮುಂದಿನ ವಿಚಾರಣೆ ವೇಳೆಗೆ ಟೆಲಿಕಾಂ ಇಲಾಖೆಗೆ 1.47 ಲಕ್ಷ ಕೋಟಿ ರೂಪಾಯಿಗಳನ್ನು ಪಾವತಿಸಬೇಕು ಎಂದು ಆದೇಶಿಸಿರುವ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದೆ.

ಕಳೆದ ಅಕ್ಟೋಬರ್‌ನಲ್ಲಿ ಸರ್ಕಾರಕ್ಕೆ ಹಣ ಪಾವತಿಸುವಂತೆ ಸುಪ್ರೀಂ ತೀರ್ಪು ನೀಡಿದ್ದರೂ ಸಹ ಟೆಲಿಕಾಂ ಕಂಪನಿಗಳು ಪಾವತಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕೋರ್ಟ್‌, ಕೂಡಲೇ ಹಣ ಪಾವತಿಸಿ ಎಂದು ತಾಕೀತು ಮಾಡಿದೆ. ಇಲ್ಲದಿದ್ದಲ್ಲಿ ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಒಟ್ಟು ಆದಾಯ ಸರಿಹೊಂದಿರುವ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ, ಅರ್ಜಿದಾರರ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ಒಂದೇ ಒಂದು ಪೆನ್ನಿ ಹಣವನ್ನು ಠೇವಣಿ ಇಟ್ಟಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಕೇಂದ್ರ ಸರ್ಕಾರವು ಸಹ ಹಣ ವಸೂಲಿ ಮಾಡುವಲ್ಲಿ ವಿಫಲವಾಗಿದೆ ಎಂದು ಸುಪ್ರೀಂ ಟೀಕಿಸಿದೆ.

ದೇಶದಲ್ಲಿ ನಡೆಯುತ್ತಿರುವ ಸಂಗತಿಗಳಿಂದ ನಮ್ಮ ಆತ್ಮಸಾಕ್ಷಿಯು ನಡುಗುತ್ತಿದೆ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರ ಅಭಿಪ್ರಾಯಪಟ್ಟಿದ್ದಾರೆ. ನ್ಯಾಯಮೂರ್ತಿಗಳಾದ ಎಸ್‌. ಅಬ್ದುಲ್ ನಜೀರ್ ಮತ್ತು ಎಂ.ಆರ್. ಶಾ ಟೆಲಿಕಾಂ ಕಂಪನಿಗಳು ಟೆಲಿಕಾಂ ಇಲಾಖೆಯ ಆದೇಶವನ್ನು ಪಾಲಿಸದ ಕಾರಣ ಅವರ ವಿರುದ್ದ ತಿರಸ್ಕಾರ ಕ್ರಮವನ್ನು ಏಕೆ ಪ್ರಾರಂಭಿಸಬಾರದು ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಅರುಣ್ ಮಿಶ್ರರವರು ಅಟಾರ್ನಿ ಜನರಲ್ ಮತ್ತು ಇತರ ಸಾಂವಿಧಾನಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಕ್ಕಾಗಿ ಅವರು ಟೆಲ್ಕೋಸ್ ಮತ್ತು ಇತರರಿಂದ ಹಣ ಪಾವತಿಸುವಂತೆ ಒತ್ತಾಯಿಸಬಾರದು ಮತ್ತು ಅವರ ವಿರುದ್ದ ಯಾವುದೇ ಬಲವಂತದ ಕ್ರ ತೆಗೆದುಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಟೆಲಿಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿತು..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...