ಜ್ಯೋತಿಷಿಗಳಿಗೆ ನಿಖರ ಚುನಾವಣಾ ಫಲಿತಾಂಶ ಹೇಳುವಂತೆ ಸವಾಲು ಹಾಕಿದ ವಿಚಾರವಾದಿಗಳು
"ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ" ಎಂದು ತಿಳಿಸಬೇಕು.
ಚುನಾವಣೆಯ ಸಂದರ್ಭದಲ್ಲಿ ಯಾರ್ಯಾರೋ ಹಣ ಮಾಡಿಕೊಳ್ಳಲ್ಲಿಕ್ಕೆ ಮುಗಿಬೀಳುತ್ತಾರೆ. ಅದರಲ್ಲಿ ಜ್ಯೋತಿಷ್ಯ ಹೇಳುವವರ ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದು ಮನಸ್ಸಿಗೆ ಬಂದ ಲೆಕ್ಕ ಹೇಳಿ ಕೆಲವು ಜನರಿಂದ ಹಣ ಕೀಳುತ್ತಿದ್ದಾರೆ. ರಾಜಕಾರಣಿಗಳು ಸೇರಿದಂತೆ ಹಲವು ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಜ್ಯೋತಿಷಿಗಳು ಚುನಾವಣೆಗೂ ಮುನ್ನವೇ ಕೆಲವು ಅಂಕಿ ಸಂಖ್ಯೆಗಳನ್ನು ಹೇಳುವ ಮೂಲಕ ಪ್ರಭಾವ ಬೀರಲು, ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳಲು ಹವಣಿಸುತ್ತಾರೆ. ಇದರ ವಿರುದ್ಧ ಜನಜಾಗೃತಿ ಮೂಡಿಸಲು ಹಲವು ಪ್ರಜ್ಞಾವಂತರು ದಶಕಗಳ ಕಾಲದಿಂದಲೇ ಪ್ರಯತ್ನಿಸುತ್ತಿದ್ದಾರೆ. ಸರಿಯಾದ ಜ್ಯೋತಿಷ್ಯ ಹೇಳುವಂತೆ ಸವಾಲು ಹಾಕಿ ಬಹುಮಾನ ಘೋಷಿಸುವುದು ಸಹ ಒಂದು ವಿಧಾನ.
ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ) ಬೆಂಗಳೂರು. ಇವರಿಂದ ಚುನಾವಣಾ ಭವಿಷ್ಯ ಹೇಳುವ ಜ್ಯೋತಿಷಿಗಳ ಭವಿಷ್ಯ ವಾಣಿಗಳ ಸತ್ಯಾ ಸತ್ಯತೆಗಳ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಕಲಿತು ಭವಿಷ್ಯ ಹೇಳುವವರಿಗೆ ಒಂದು ಕೋಟಿ ರೂ ಬಹುಮಾನದ ಸವಾಲು ಹಾಕಲಾಗಿದೆ. ಪ್ರತಿ ವರ್ಷ ಪ್ರೊ ನರೇಂದ್ರ ನಾಯಕ್ ರವರು ಜ್ಯೋತಿಷ್ಯ ಹೇಳುವವರ ಬಣ್ಣ ಬಯಲು ಮಾಡುವ ಉದ್ದೇಶದಿಂದ ಈ ರೀತಿಯ ಸವಾಲುಗಳನ್ನು ಹಾಕುತ್ತಿದ್ದರು. ಈ ಬಾರಿ ಹಲವು ಜನರು ಸವಾಲು ಹಾಕಿದ್ದಾರೆ. ಈಗಾಗಲೇ ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ಈ ವಿವರಗಳು ಹರಿದಾಡುತ್ತಿದ್ದು ಸಾರ್ವಜನಿಕರ ಕುತೂಹಲ ಕೆರಳಿಸಿವೆ.
ಸವಾಲುಗಳ ವಿವರ
ವಿಚಾರವಾದಿ ಸಂಘ ಬೆಂಗಳೂರು
ಒಂದು ಕೋಟಿ ರೂ ಬಹುಮಾನದ ಸವಾಲು ಇದು – “ವಿವಿಧ ಪಕ್ಷಗಳು ಗೆಲ್ಲುವ ಸ್ಥಾನ ಗಳಸಂಖ್ಯೆ ಹಾಗು ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳು ಅವುಗಳ ಸಂಖ್ಯೆಗಳ ನಿಖರ ಲೆಕ್ಕ ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ” ಎಂದು ತಿಳಿಸಬೇಕು.
ವಿವರ- 2019 ರ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಅಂಗೀಕೃತವಾದ ರಾಜಕೀಯ ಪಕ್ಷಗಳು ಇಡೀ ಭಾರತದಲ್ಲಿ ಈಗ ಲೋಕಸಭೆಗೆ ನಡೆದ, ನಡೆಯುತ್ತಿರುವ ಚುನಾವಣೆಯ ಎಲ್ಲಾ ಒಟ್ಟು ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಪಕ್ಷಾವಾರು ಎಷ್ಟೆಷ್ಟು ಸ್ಥಾನಗಳನ್ನು ಗೆಲ್ಲುತ್ತಾರೆ ಎಂಬ ಸಂಖ್ಯೆಗಳು ಮತ್ತು ಅಂಗೀಕೃತ ಅಲ್ಲದ ಪಕ್ಷ ಇಲ್ಲವೇ ಪಕ್ಷೇತರ ಸ್ವತಂತ್ರ ಅಭ್ಯರ್ಥಿ ಗಳಾಗಿ ಸ್ಪರ್ಧಿಸಿದವರು ಯಾವ ಯಾವ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ ಎಂದು ಮುಂಚಿತ ಭವಿಷ್ಯ ಹೇಳಬೇಕು. ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ ಎಂದು ತಿಳಿಸ ಬೇಕು.
ಈ ಸವಾಲಿಗೆ ಇರುವ ಕೆಲ ನಿಯಮಗಳು
ದೇಶದ ಯಾವ ಜ್ಯೋತಿಷಿಯಾದರೂ ಭಾಗವಹಿಸಬಹುದು. ಆದರೆ ಭಾಗವಹಿಸುವವರು ಗಣಿತ ನೈಪುಣ್ಯದ ಮೇಲೆ ಹಾಗು ಊಹೆಯ ಮೇಲೆ ಹಲವು ವಿವಿಧ ಸಂಯೋಜನೆಗಳ ಮೇಲೆ ಲೆಕ್ಕಹಾಕಿ (multiple combinations) ಮಾಡಿ ಬಹುಮುಖ ಉತ್ತರಗಳನ್ನು, ಒಬ್ಬರೇ ಬೇರೆ ಬೇರೆ ಹೆಸರಿನಿಂದ ಹಲವಾರು ಉತ್ತರಗಳನ್ನು ಕಳುಹಿಸ ಬಾರದೆಂಬ ಕಾರಣಕ್ಕಾಗಿ ಹಾಗೂ ಈ ಸ್ಪರ್ಧೆಗೆ ಒಂದು ಗಂಭೀರತೆ ಹಾಗು ಸತ್ಯದ ದೃಢತೆಯ ಮನಸಾಕ್ಷಿಗಾಗಿ, ಕಳುಹಿಸುವ ಪ್ರತೀ ಉತ್ತರದ ಅರ್ಜಿಗೆ ತಲಾ ಹತ್ತು ಸಾವಿರ ರೂ. ನ್ನು ಭದ್ರತಾ ಠೇವಣಿಯಾಗಿ ನೀಡ ಬೇಕಾಗುತ್ತದೆ. ಠೇವಣಿಯನ್ನು “ವಿಚಾರವಾದಿ ಸಂಘ ಬೆಂಗಳೂರು” – ಈ ಹೆಸರಿಗೆ ಡಿ.ಡಿ. ಕಳುಹಿಸ ಬೇಕು. ಗೆದ್ದವರಿಗೆ ಮಾತ್ರ ಠೇವಣಿ ಹಣ ಹಿಂತಿರುಗಿಸ ಲಾಗುವುದು ಮತ್ತು ಜೊತೆಗೆ ಒಂದು ಕೋಟಿ ರೂ. ಬಹುಮಾನವನ್ನು ನೀಡಲಾಗುವುದು. ಒಂದಕ್ಕಿಂತ ಹೆಚ್ಚು ಸ್ಪರ್ಧಿಗಳು ಸರಿ ಉತ್ತರ ಕೊಟ್ಟರೆ ಬಹುಮಾನ ಹಣವನ್ನು ಗೆದ್ದವರಿಗೆ ಸಮನಾಗಿ ಹಂಚಲಾಗುತ್ತದೆ.
ಮೇ 20ನೇ ತಾರೀಖಿನ ಒಳಗೆ ಈ ಕೆಳಗಿನ ಬೆಂಗಳೂರಿನ ವಿಚಾರವಾದಿಗಳ ಸಂಘದ ಕಛೇರಿಗೆ ಉತ್ತರವನ್ನು ದಾಖಲಾತಿ ಮೂಲಕ ತಲುಪಿಸತಕ್ಕದ್ದು.
ವಿಳಾಸ- ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ ) 43. ರೋಹಿಣಿ 5ನೇ ಮೇನ್ ಪದ್ಮನಾಭನಗರ, ಬೆಂಗಳೂರು- 560070. ಕಾರ್ಯದರ್ಶಿ-
ಮೊ: 9342176030
ನಾಗೇಶ್ ಅರಳಕುಪ್ಪೆ
ಸ್ಪರ್ಧೆ ಹಾಗು ಉತ್ತರ ಮತ್ತು ಭದ್ರತಾ ಠೇವಣಿಯ ಹಾಗು ಸ್ಪರ್ಧೆ ನಡೆಸುವ ಜವಾಬ್ದಾರಿಗಾಗಿ ಸಂಘವು ನೇಮಿಸಿದ ಒಂದು ತಜ್ಞರ ಸಮಿತಿಯು ನಿರ್ವಹಿಸುತ್ತದೆ. ಸಂಘದ ಕಡೆಯಿಂದ ಒಂದು ಕೋಟಿ ರೂ.ಗಳಿಗೆ ಭದ್ರತೆಗಾಗಿ ಠೇವಣಿ ಪತ್ರ, ಶೇರು ಪತ್ರ, ಸ್ಥಿರಾಸ್ತಿ ಪತ್ರ ಇವುಗಳಲ್ಲಿ ಯಾವುದನ್ನು ಸಂಘದಿಂದ ನೇಮಕಗೊಂಡ ಅದೇ ಸಮಿತಿಯ ವಶ ಕೊಡಲಾಗುತ್ತದೆ. ಆದರೆ ಯಾವುದೇ ಸ್ಪರ್ಧಿಗಳ ಕೈಗೆ ಕೊಡಲಾಗುವುದಿಲ್ಲ. ಸ್ಪರ್ಧೆಯ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಗೆದ್ದ ಸ್ಪರ್ಧಿಯನ್ನು ಮಾತ್ರ ಸಂಪರ್ಕಿಸಲಾಗುವುದು. ಚುನಾವಣಾ ಫಲಿತಾಂಶ ಪತ್ರಿಕೆಗಳಲ್ಲಿ ಬರುವುದರಿಂದ ಸ್ಪರ್ಧಿಗಳು ಏನು ಉತ್ತರ ಕೊಟ್ಟಿದ್ದಾರೆ ಅದು ಹೇಗೆ ತಪ್ಪಾಗಿದೆ ಎನ್ನುವುದು ಸೋತವರಿಗೆ ಸ್ವತಃ ತಿಳಿಯುವುದರಿಂದ ಅವರಿಗೆ ನಾವು ಮತ್ತೆ ತಿಳಿಸಬೇಕಾಗಿಲ್ಲ ಎಂದು ವಿಚಾರವಾದಿ ಸಂಘದ ಕಾರ್ಯದರ್ಶಿಗಳಾದ ನಾಗೇಶ್ ಅರಳಕುಪ್ಪೆ ತಿಳಿಸಿದ್ದಾರೆ.
ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ವಿಚಾರವಾದಿ ಡಾ. ನರೇಂದ್ರ ನಾಯಕರ ರವರು ಸಹ 10ಲಕ್ಷ ರೂ. ಬಹುಮಾನದ ಸವಾಲು ಒಡ್ಡಿದ್ದಾರೆ. ಈ ಬಾರಿಯ ಚುನಾವಣೆ ಸಂಬಂಧಿತ 20 ಪ್ರಶ್ನೆಗಳನ್ನು ನೀಡಿರುವ ಅವರು ಅದರಲ್ಲಿ 18 ಅಥವಾ ಅದಕ್ಕಿಂತ ಹೆಚ್ಚು ಪ್ರಶ್ನೆಗಳಿಗೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ವಿವರಗಳಿಗೆ ಅವರ ಮೊ. 9448216343 ಸಂಪರ್ಕಿಸಿರಿ.
ಪ್ರೊ.ನರೇಂದ್ರ ನಾಯಕ್
ಅದೇ ರೀತಿ ಡಾ ಲಲಿತಾ ನಾಯಕ್ ರವರ ರೂ10,000/ ಬಹುಮಾನ ಸವಾಲು ಹಾಕಿದ್ದು ವಿವರಗಳಿಗೆ ಅವರ ಮೊ. 9448067193. ಸಂಪರ್ಕಿಸಿ. ಮತ್ತು ಒಂದು ಲಕ್ಷ ರೂ ಹಾಗು ಚಿನ್ನದ ಉಂಗುರ ಬಹುಮಾನ ಸವಾಲು ಹಾಕಿರುವ ಶ್ರೀ ನರಸಿಂಹಮೂರ್ತಿಯವರ ವಿವರಗಳಿಗೆ ಅವರ ಮೊ: 9980627609 ಸಂಪರ್ಕಿಸಿಬಹುದಾಗಿದೆ.
ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...
ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...
ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ.
28 ವರ್ಷ ವಯಸ್ಸಿನ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...
ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...
ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...
ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...
ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...
ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...