HomeUncategorizedತೆಲುಗು ಕಿರುತೆರೆ ನಟಿ ಅಸಹಜ ಸಾವು ಪ್ರಕರಣ: ನಿರ್ಮಾಪಕನ ಬಂಧನ

ತೆಲುಗು ಕಿರುತೆರೆ ನಟಿ ಅಸಹಜ ಸಾವು ಪ್ರಕರಣ: ನಿರ್ಮಾಪಕನ ಬಂಧನ

"RX 100" ನಂತಹ ತೆಲುಗು ಸೂಪರ್‌ ಹಿಟ್ ಚಿತ್ರ ನಿರ್ಮಿಸಿದ್ದ ಅಶೋಕ್ ರೆಡ್ಡಿ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ

- Advertisement -
- Advertisement -

ತೆಲುಗು ಕಿರುತೆರೆ ನಟಿ ಕೊಂಡಪಲ್ಲಿ ಶ್ರಾವಣಿ ಅಸಹಜ ಸಾವು ಪ್ರಕರಣದಲ್ಲಿ ಪ್ರಮುಖ ತೆಲುಗು ಚಲನಚಿತ್ರ ನಿರ್ಮಾಪಕನನ್ನು ಬಂಧಿಸಲಾಗಿದೆ. ಸೆ.8 ರಂದು ಶ್ರಾವಣಿ ಹೈದರಾಬಾದ್‌ನ ಮಧುರಾ ನಗರದ ತನ್ನ ಅಪಾರ್ಟ್‌ಮೆಂಟ್‌ನ ಬಾತ್‌ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದರು.

“RX 100” ನಂತಹ ತೆಲುಗು ಸೂಪರ್‌ ಹಿಟ್ ಚಿತ್ರ ನಿರ್ಮಿಸಿದ್ದ ಅಶೋಕ್ ರೆಡ್ಡಿ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನು ಇಬ್ಬರು ಆರೋಪಿಗಳಾದ ಸಾಯಿ ಕೃಷ್ಣ ರೆಡ್ಡಿ ಮತ್ತು ದೇವರಾಜ್ ರೆಡ್ಡಿಯನ್ನು ಕೂಡ ಬಂಧಿಸಿ ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ತೆಲುಗು ಟಿವಿ ನಟಿ ಕೊಂಡಪಲ್ಲಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ!: ಪೊಲೀಸರ ಹೇಳಿಕೆ

ನಟಿ ಶ್ರಾವಣಿ 2018 ರಲ್ಲಿ ಸಾಯಿ ಕೃಷ್ಣ ರೆಡ್ಡಿ, ಅಶೋಕ್ ರೆಡ್ಡಿ ಮತ್ತು ದೇವರಾಜ್ ರೆಡ್ಡಿ ಅವರನ್ನು ಟಿಕ್ ಟಾಕ್ ಮೂಲಕ ಪರಿಚಯ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ. ನಂತರ ತೆಲುಗು ಚಿತ್ರ “ಪ್ರೇಮತೋ ಕಾರ್ತಿಕ್” ನಿರ್ಮಾಣದ ವೇಳೆ ನಟ ಅಶೋಕ್ ರೆಡ್ಡಿ ಅವರನ್ನು ಭೇಟಿಯಾದರು ಎಂದು ವರದಿಯಾಗಿದೆ.

ಮೃತ ಶ್ರಾವಣಿ ಕೊನೆಯ ಬಾರಿ ದೇವರಾಜ್ ರೆಡ್ಡಿಗೆ ಕರೆ ಮಾಡಿ, ಈ ಮೂವರಿಂದ ಕಿರುಕುಳವನ್ನು ಸಹಿಸಲು ನನಗೆ ಸಾಧ್ಯವಿಲ್ಲ, ಹಾಗಾಗಿ  ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದರು ಎಂದು ವರದಿಯಾಗಿದೆ.

ಕೊಂಡಪಲ್ಲಿ ಶ್ರಾವಣಿ ಜನಪ್ರಿಯ ತೆಲುಗು ಕಿರುತೆರೆ ಧಾರಾವಾಹಿಗಳಾದ “ಮಾನಸು ಮಮತಾ” ಮತ್ತು “ಮೌನರಾಗಂ” ನಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. ಅವರು ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯವರಾಗಿದ್ದು, ಕಳೆದ ಎಂಟು ವರ್ಷಗಳಿಂದ ಟಿವಿ ಧಾರಾವಾಹಿಗಳಲ್ಲಿ ಕೆಲಸ ಮಾಡುತ್ತಿದ್ದರು.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...