Homeಮುಖಪುಟಆಕಸ್ಮಿಕವಾಗಿ ಕಾಣಿಕೆ ಹುಂಡಿಗೆ ಬಿದ್ದ ವ್ಯಕ್ತಿಯ ಐಫೋನ್; ವಾಪಸ್ ಕೊಡಲು ನಿರಾಕರಿಸಿದ ದೇವಸ್ಥಾನ ಆಡಳಿತ ಮಂಡಳಿ

ಆಕಸ್ಮಿಕವಾಗಿ ಕಾಣಿಕೆ ಹುಂಡಿಗೆ ಬಿದ್ದ ವ್ಯಕ್ತಿಯ ಐಫೋನ್; ವಾಪಸ್ ಕೊಡಲು ನಿರಾಕರಿಸಿದ ದೇವಸ್ಥಾನ ಆಡಳಿತ ಮಂಡಳಿ

- Advertisement -
- Advertisement -

ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಭಕ್ತರೊಬ್ಬರ ಐಫೋನ್ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿದ್ದು, ತನ್ನ ಐಫೋನ್ ಅನ್ನು ಹಿಂದಿರುಗಿಸುವಂತೆ ಫೋನ್ ಮಾಲೀಕ ಮಾಡಿದ ಮನವಿಯನ್ನು ಆಡಳಿತ ಮಂಡಳಿ ನಿರಾಕರಿಸಿದೆ. ‘ಅದು ಈಗ ದೇವಸ್ಥಾನದ ಆಸ್ತಿಯಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.

ಚೆನ್ನೈ ಬಳಿಯ ತಿರುಪೋರೂರಿನ ಅರುಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಸಲ್ಲಿಸುತ್ತಿದ್ದಾಗ ತನ್ನ ಐಫೋನ್ ಅಚಾತುರ್ಯದಿಂದ ಹುಂಡಿಗೆ ಬಿದ್ದಿರುವುದನ್ನು ದಿನೇಶ್ ದೇವಸ್ಥಾನ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದಾರೆ.

ಕುತೂಹಲಕಾರಿಯಾಗಿ, ದೇವಾಲಯದ ಆಡಳಿತವು ದಿನೇಶ್ ಅವರ ಆಪಲ್ ಫೋನ್‌ನ ಡೇಟಾವನ್ನು ಹಿಂಪಡೆಯಲು ಅನುಮತಿ ನೀಡಿತು. ಆದರೆ, ಫೋನ್ ಅನ್ನು ಹಿಂದಿರುಗಿಸಲು ನಿರಾಕರಿಸಿತು. ಆದರೂ ಫೋನ್ ವಾಪಸ್ ಕೊಡಿಸುವಂತೆ ಪಟ್ಟು ಹಿಡಿದ ದಿನೇಶ್ ಪಟ್ಟುಹಿಡಿದರು.

ಈ ವಿಷಯ ಸಚಿವ ಪಿ.ಕೆ.ಸೇಕರ್ ಬಾಬು ಅವರಿಗೆ ತಲುಪಿದ್ದು, ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ ಯಾವುದೇ ವಸ್ತುವನ್ನು ಅದು ಉದ್ದೇಶಪೂರ್ವಕವಾಗಿ ಅಥವಾ ಆಕಸ್ಮಿಕವಾಗಿ ಹಾಕಿದರೂ ಅದು ದೇವರ ಖಾತೆಯ ಭಾಗವಾಗುತ್ತದೆ ಎಂದು ಹೇಳಿದರು.

“ದೇವಸ್ಥಾನಗಳ ಆಚರಣೆಗಳು ಮತ್ತು ಸಂಪ್ರದಾಯಗಳ ಪ್ರಕಾರ, ದೇಣಿಗೆ ಪೆಟ್ಟಿಗೆಯಲ್ಲಿ ನೀಡುವ ಕಾಣಿಕೆಯನ್ನು ದೇವರ ಆಸ್ತಿ ಎಂದು ಪರಿಗಣಿಸಲಾಗುತ್ತದೆ. ಅಂತಹ ಕಾಣಿಕೆಗಳನ್ನು ಹಿಂತಿರುಗಿಸಲು ನಿಯಮಗಳು ನಮಗೆ ಅನುಮತಿಸುವುದಿಲ್ಲ” ಎಂದು ಸಚಿವರು ವಿವರಿಸಿದರು.

ದೇವಾಲಯದ ನಿರ್ಮಾಣ ಮತ್ತು ಜೀರ್ಣೋದ್ಧಾರ ಯೋಜನೆಗಳ ಪರಿಶೀಲನೆಯ ಸಂದರ್ಭದಲ್ಲಿ ಬಾಬು ಅವರು, ಭಕ್ತಾಧಿಗೆ ಪರಿಹಾರ ನೀಡುವ ಸಾಧ್ಯತೆಯನ್ನು ಅನ್ವೇಷಿಸಲು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಇಂತಹುದೇ ಘಟನೆಯಲ್ಲಿ ಕೇರಳದ ಅಲಪ್ಪುಳದ ಭಕ್ತೆಯೊಬ್ಬಳು ಆಕಸ್ಮಿಕವಾಗಿ ತನ್ನ 1.75 ಕೆಜಿ ಚಿನ್ನದ ಸರವನ್ನು ಪಳನಿಯ ಶ್ರೀ ದಂಡಾಯುಧಪಾಣಿ ಸ್ವಾಮಿ ದೇವಸ್ಥಾನದ ಕಾಣಿಕೆ ಡಬ್ಬಿಗೆ ಎಸೆದಿದ್ದಾಳೆ. ಕೊರಳಲ್ಲಿದ್ದ ತುಳಸಿ ಮಾಲೆ ತೆಗೆಯುತ್ತಿದ್ದಾಗ ಕಾಣಿಕೆ ಪೆಟ್ಟಿಗೆಗೆ ಸರ ಜಾರಿತು.

ಆ ಸಂದರ್ಭದಲ್ಲಿ, ಆಕೆಯ ಹಣಕಾಸಿನ ಅಡಚಣೆಯನ್ನು ಪರಿಗಣಿಸಿ ಮತ್ತು ಸಿಸಿಟಿವಿ ದೃಶ್ಯಗಳ ಮೂಲಕ ಘಟನೆಯನ್ನು ಪರಿಶೀಲಿಸಿದ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ತಮ್ಮ ವೈಯಕ್ತಿಕ ವೆಚ್ಚದಲ್ಲಿ ಸಮಾನ ಮೌಲ್ಯದ ಹೊಸ ಚಿನ್ನದ ಸರವನ್ನು ಖರೀದಿಸಿ ಅವರಿಗೆ ಹಿಂದಿರುಗಿಸಿದರು.

ಇದನ್ನೂ ಓದಿ; ‘ಸಶಸ್ತ್ರ ಹೋರಾಟ ಬ್ರಿಟಿಷರನ್ನು ಹೊರಹಾಕಿತು..’; ವಿವಾದ ಹುಟ್ಟುಹಾಕಿದ ಬಿಹಾರ ರಾಜ್ಯಪಾಲರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...