Homeಮುಖಪುಟದೇವಸ್ಥಾನಕ್ಕೆ ತೆರಳಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ದೇವಸ್ಥಾನಕ್ಕೆ ತೆರಳಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪ್ರದೇಶದ ಭೈರವ್ ಬಾಬಾ ದೇವಸ್ಥಾನದಲ್ಲಿ ಪತಿಯೊಂದಿಗೆ ವಿಹಾರಕ್ಕೆ ಹೋಗುತ್ತಿದ್ದ ನವವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ  ನಡೆದಿದೆ. ಪೊಲೀಸರು ಈ ವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ದೇವಸ್ಥಾನಕ್ಕೆ ತೆರಳಿದ್ದ

ಘಟನೆ ಅಕ್ಟೋಬರ್ 21 ರಂದು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಡಿದ ಅಮಲಿನಲ್ಲಿ 7-8 ಮಂದಿ ದುಷ್ಕರ್ಮಿಗಳು ನವವಿವಾಹಿತ ದಂಪತಿಯನ್ನು ಹಿಡಿದಿಟ್ಟು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಆರೋಪಿಗಳು ಮಹಿಳೆಯ ಖಾಸಗಿ ವೀಡಿಯೊವನ್ನು ಚಿತ್ರೀಕರಿಸಿದ್ದು, ಘಟನೆಯನ್ನು ಪೊಲೀಸರಿಗೆ ತಿಳಿಸಿದರೆ ಅದನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಗಳ ಬೆದರಿಕೆಯಿಂದ ಹೆದರಿದ ದಂಪತಿಗಳು ಒಂದು ದಿನ ಮೌನವಾಗಿದ್ದರು. ಆದರೆ ನಂತರ ಮರುದಿನ ಗುರ್ಹ್ ಪೊಲೀಸ್ ಠಾಣೆಗೆ ತೆರಳಿ ಈ ಭಯಾನಕ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.

“ಇದು ಸೂಕ್ಷ್ಮ ಪ್ರಕರಣವಾಗಿದ್ದು, ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ ಬಹು ತಂಡಗಳು ತನಿಖೆ ನಡೆಸುತ್ತಿವೆ” ಎಂದು ರೇವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್ ಅವರು ಹೇಳಿದ್ದಾರೆ. ದೇವಸ್ಥಾನಕ್ಕೆ ತೆರಳಿದ್ದ

ಆಪಾದಿತ ಸಾಮೂಹಿಕ ಅತ್ಯಾಚಾರವನ್ನು ಸೂಕ್ಷ್ಮ ಪ್ರಕರಣ ಎಂದು ಕರೆದ ಅವರು, ಸಂತ್ರಸ್ತರ ಗುರುತನ್ನು ಬಹಿರಂಗಪಡಿಸದಂತೆ ಖಚಿತಪಡಿಸಿಕೊಳ್ಳಲು ಪೊಲೀಸರು ಎಚ್ಚರಿಕೆಯಿಂದ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಐವರಲ್ಲಿ ಒಬ್ಬನ ಕೈ ಮತ್ತು ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

“ನಾವು ಇದುವರೆಗೆ ಐವರು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದೇವೆ. ಉಳಿದ ಆರೋಪಿಗಳ ಪತ್ತೆಗಾಗಿ ರೇವಾ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗುತ್ತಿದೆ” ಎಂದು ವಿವೇಕ್ ಸಿಂಗ್ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಆರೋಪಿಗಳು ಮಹಿಳೆಯ ಪತಿಯನ್ನು ಮರಕ್ಕೆ ಕಟ್ಟಿಹಾಕಿ, ಅವರ ಹೆಂಡತಿಯನ್ನು ಅವರ ಮುಂದೆಯೆ ಐವರು ಆರೋಪಿಗಳು ಅತ್ಯಾಚಾರ ಮಾಡಿದ್ದಾರೆ ಎಂದು ವರದಿಗಳಿವೆ. ಅದಾಗ್ಯೂ, ಈ ವರದಿಯನ್ನು ಪೊಲೀಸರು ನಿರಾಕರಿಸಿದ್ದಾರೆ.

“ಪತಿಯನ್ನು ಕೆಲವು ಪುರುಷರು ಹಿಡಿದಿಟ್ಟಿದ್ದರು. ಆದರೆ ಯಾವುದೇ ಮರಕ್ಕೆ ಕಟ್ಟಿ ಹಾಕಿಲ್ಲ ಎಂದು ದಂಪತಿಗಳ ಹೇಳಿಕೆಗಳು ಬಹಿರಂಗಪಡಿಸುತ್ತವೆ. ಆದರೆ ಅವರ ಹೆಂಡತಿಯನ್ನು ಐವರು ದುಷ್ಕರ್ಮಿಗಳು ಅಲ್ಲೆ ಹತ್ತಿರದ ಸ್ಥಳಕ್ಕೆ ಕರೆದುಕೊಂಡು ಹೋಗಿ, ನಂತರ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸಾಮೂಹಿಕ ಅತ್ಯಾಚಾರ ಸೇರಿದಂತೆ ಅನೇಕ BNS ಸೆಕ್ಷನ್‌ಗಳ ಅಡಿಯಲ್ಲಿ ಸ್ಥಳೀಯ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ಇಡೀ ಅಪರಾಧದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಪೂರ್ವ ಸಂಸದೀಯ ರೇವಾ ಮತ್ತು ಪಕ್ಕದ ಮೌಗಂಜ್ ಜಿಲ್ಲೆಯವರು ಎಂದು ವರದಿಯಾಗಿದೆ ಎಂದು ಎಸ್ಪಿ ವಿವೇಕ್ ಸಿಂಗ್ ಹೇಳಿದ್ದಾರೆ.

ಮುಖ್ಯವಾಗಿ, ಸೋಮವಾರ-ಮಂಗಳವಾರದ ನಸುಕಿನ ವೇಳೆ ಇಂದೋರ್‌ನ ಸದರ್ ಬಜಾರ್ ಪ್ರದೇಶದಲ್ಲಿ 35 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಕಾರ್ಮಿಕನಿಂದ ಅತ್ಯಾಚಾರಕ್ಕೊಳಗಾದ ಕೆಲವೇ ಗಂಟೆಗಳ ಮೊದಲು ಈ ಭಯಾನಕ ಘಟನೆ ಸಂಭವಿಸಿದೆ.

ನಂತರ ಅದೇ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ (ಬೆಳಿಗ್ಗೆ 3 ರಿಂದ 4 ಗಂಟೆಯ ನಡುವೆ) ಯುವಕ ಮಹಿಳೆಯೊಂದಿಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಆಕೆಯ ವೈದ್ಯಕೀಯ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ.

ನಂತರ ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದು, ಆರೋಪಿಯನ್ನು 20 ವರ್ಷದ ಸೋನು ಎಂದು ಗುರುತಿಸಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ಸೋನುವನ್ನು ಮಂಗಳವಾರ ಕೆಲವೇ ಗಂಟೆಗಳಲ್ಲಿ ಬಂಧಿಸಲಾಯಿತು. ನೀಲಕಂಠ ಕಾಲೋನಿ ಪ್ರದೇಶದ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ: ಕಲಬುರಗಿ: ದಲಿತ ಸಮುದಾಯದ ಅಂಗನವಾಡಿ ಕಾರ್ಯಕರ್ತೆ ಮೇಲೆ ಎಸ್‌ಡಿಎಂಸಿ ಅಧ್ಯಕ್ಷರಿಂದ ಹಲ್ಲೆ

ಕಲಬುರಗಿ: ದಲಿತ ಸಮುದಾಯದ ಅಂಗನವಾಡಿ ಕಾರ್ಯಕರ್ತೆ ಮೇಲೆ ಎಸ್‌ಡಿಎಂಸಿ ಅಧ್ಯಕ್ಷರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...