Homeಕರ್ನಾಟಕಮೇ.31ರ ಬಳಿಕ ತೆರೆಯಲಿವೆ ದೇವಾಲಯಗಳ ಬಾಗಿಲು: ಬಿಎಸ್ ಯಡಿಯೂರಪ್ಪ ಸ್ಪಷ್ಟನೆ

ಮೇ.31ರ ಬಳಿಕ ತೆರೆಯಲಿವೆ ದೇವಾಲಯಗಳ ಬಾಗಿಲು: ಬಿಎಸ್ ಯಡಿಯೂರಪ್ಪ ಸ್ಪಷ್ಟನೆ

- Advertisement -
- Advertisement -

ಲಾಕ್‌ಡೌನ್‌ ಹಂತಹಂತವಾಗಿ ಸಡಿಲವಾಗುತ್ತಿರುವ ಹಿನ್ನೆಲೆಯಲ್ಲಿ ಮೇ.31ರ ನಂತರ ರಾಜ್ಯಾದ್ಯಂತ ಎಲ್ಲಾ ದೇವಾಲಯ, ಚರ್ಚ್ ಮತ್ತು ಮಸೀದಿಗಳ ಬಾಗಿಲುಗಳನ್ನು ತೆರೆಯಲು ಅವಕಾಶ ನೀಡಲಾಗುವುದು, ಆದರೆ ಸಾಮಾಜಿ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಮಾರಣಾಂತಿಕ ಕೊರೋನಾ ವೈರಸ್ ಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಮಾರ್ಚ್.25 ರಿಂದ ದೇಶದಾದ್ಯಂತ ಲಾಕ್ಡೌನ್ ಹೇರಲಾಗಿತ್ತು. ಪರಿಣಾಮ ಕರ್ನಾಟಕದಲ್ಲೂ ಸಹ ಎಲ್ಲಾ ದೇವಾಲಯ, ಚರ್ಚ್ ಮತ್ತು ಮಸೀದಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಇದರಿಂದ ಎಲ್ಲಾ ದೇವಾಲಯಗಳೂ ಬಹುತೇಕ ಭಕ್ತರಿಲ್ಲದೆ ಬಿಕೋ ಎನ್ನುತ್ತಿತ್ತು.

ಹೀಗಾಗಿ ಕಳೆದ ಎರಡು ತಿಂಗಳಿನಿಂದ ಅನೇಕರು ದೇವಾಲಯಗಳ ಬಾಗಿಲು ತೆರೆದು ದೇವರ ದರ್ಶನಕ್ಕೆ ಅನುಮತಿ ನೀಡಬೇಕು ಎಂದು ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದರು. ಅಲ್ಲದೆ, ದೇವಾಲಯದ ಆದಾಯವನ್ನೇ ನಂಬಿ ಬದುಕಿದ್ದ ಪೌರೋಹಿತ್ಯ ವರ್ಗ ಇದರಿಂದ ನಷ್ಟ ಅನುಭವಿಸಿದ್ದು ಅವರಿಗೂ ಸರ್ಕಾರ ಸಹಾಯ ಧನ ನೀಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿದ್ದವು.

ಈ ನಡುವೆ ರಾಜ್ಯ ಮುಜರಾಯಿ ಇಲಾಖೆ ಆನ್‌ಲೈನ್‌ನಲ್ಲಿ ದೇವರ ದರ್ಶನ ಮತ್ತು ಪೂಜೆಯನ್ನು ನೆರವೇರಿಸುವ ಕುರಿತು ಚಿಂತನೆ ನಡೆಸಿತ್ತು. ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಳೆದ ವಾರ ಈ ಕುರಿತು ಮಾಹಿತಿ ನೀಡಿ, ಇಂತಹ ವೆಬ್ಸೈಟ್ ಒಂದನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದರು.

ಇದರ ಬೆನ್ನಿಗೆ ಇಂದು ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ಲಾಕ್‌ಡೌನ್‌ ಹಂತಹಂತವಾಗಿ ಸಡಿಲವಾಗುತ್ತಿರುವ ಹಿನ್ನೆಲೆಯಲ್ಲಿ ಮೇ.31ರ ನಂತರ ರಾಜ್ಯದಾದ್ಯಂತ ದೇವಾಲಯ, ಚರ್ಚ್ ಮತ್ತು ಮಸೀದಿಗಳ ಆಗಿಲನ್ನು ತೆರೆಯಲಾಗುವುದು” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲಡಾಕ್ ಬಳಿ ವಾಯುನೆಲೆ ವಿಸ್ತರಿಸಿ ಯುದ್ದ ವಿಮಾನಗಳನ್ನು ಸಜ್ಜುಗೊಳಿಸಿರುವ ಚೀನಾ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...