Homeಮುಖಪುಟಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ದೇವಾಲಯ ಹಾಗೂ ಟ್ರಸ್ಟ್‌ಗಳು ಹೈಕೋರ್ಟ್‌ ಮೊರೆ ಹೋಗಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

ಠಾಕೂರ್ ರಂಗ್ಜಿ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಟ್ರಸ್ಟ್ ಯೋಗಿ ಸರ್ಕಾರದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆದಿದೆ. ಈ ವೇಳೆ, ದೇವಾಲಯಗಳು ಮತ್ತು ಟ್ರಸ್ಟ್‌ಗಳು ಬಾಕಿ ಹಣ ಬಿಡುಗಡೆ ಕೋರಿ ನ್ಯಾಯಾಲಯದ ಮೊರೆ ಹೋಗುವಂತಾಗಿರುವ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ತೀವ್ರ ಬೇಸರ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್‌ವಾಲ್‌ ಅವರು ಇದೇ ವೇಳೆ ಸೂಚಿಸಿದ್ದಾರೆ.

ಕೇವಲ ಒಂದೆರಡು ವರ್ಷದ ಪ್ರಶ್ನೆಯಲ್ಲ, ಕಳೆದ ನಾಲ್ಕು ವರ್ಷಗಳಿಂದ ಕನಿಷ್ಠ ಒಂಬತ್ತು ವೃಂದಾವನದ ದೇವಾಲಯಗಳಿಗೆ ಪಾವತಿಯಾಗಬೇಕಿದ್ದ ಹಣ ತಲುಪದೇ ಇರುವುದನ್ನು ನ್ಯಾಯಾಲಯ ಗಮನಿಸಿದೆ. ಹೀಗಾಗಿ ಕಳೆದ ನಾಲ್ಕು ವರ್ಷಗಳಿಂದ ವೃಂದಾವನದ ಕನಿಷ್ಠ ಒಂಬತ್ತು ದೇವಾಲಯಗಳಿಗೆ ವಾರ್ಷಿಕ ಅನುದಾನ ಪಾವತಿಸದ ಬಗ್ಗೆ ವಿವರಣೆ ನೀಡುವಂತೆ ಉತ್ತರ ಪ್ರದೇಶದ ಕಂದಾಯ ಮಂಡಳಿಯ ಕಾರ್ಯದರ್ಶಿಗೆ ಸಮನ್ಸ್ ಜಾರಿ ಮಾಡಿದೆ.

ಸರ್ಕಾರಿ ಅಧಿಕಾರಿಗಳಿಂದ ಬಾಕಿ ಮೊತ್ತ ಪಡೆಯಲು ದೇವಾಲಯದ ಅಧಿಕಾರಿಗಳು ಅಲೆದಾಡುತ್ತಿರುವುದು ವಿಚಿತ್ರವಾಗಿದೆ ಎಂದು ನ್ಯಾಯಾಲಯ ಹೇಳಿದೆ.

“ರಾಜ್ಯ ಸರ್ಕಾರದಿಂದ ಬಾಕಿ ಮೊತ್ತ ಪಡೆಯುವುದಕ್ಕಾಗಿ ದೇವಾಲಯಗಳು ಮತ್ತು ಟ್ರಸ್ಟ್‌ಗಳು ನ್ಯಾಯಾಲಯದ ಬಾಗಿಲು ತಟ್ಟಬೇಕಿರುವುದು ನ್ಯಾಯಾಲಯಕ್ಕೆ ನೋವುಂಟು ಮಾಡಿದೆ. ರಾಜ್ಯದ ಖಜಾನೆಯಿಂದ ದೇವಾಲಯದ ಖಾತೆಗೆ ಈ ಹಣ ಸ್ವಯಂಚಾಲಿತವಾಗಿ ಸಂದಾಯವಾಗಬೇಕಿತ್ತು”ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.

ತಂತ್ರಜ್ಞಾನದ ಈ ಆಧುನಿಕ ಯುಗದಲ್ಲಿ ಹಣಕಾಸು ವರ್ಷ ಪ್ರಾರಂಭವಾದ ಕೂಡಲೇ ಸರ್ಕಾರ ಸ್ವಯಂಚಾಲಿತವಾಗಿ ಹಣವನ್ನು ದೇವಾಲಯಗಳಿಗೆ ವರ್ಗಾಯಿಸಬೇಕು ಎಂದು ಅದು ನಿರ್ದೇಶನ ನೀಡಿದೆ.

ಉತ್ತರ ಪ್ರದೇಶ ಜಮೀನ್ದಾರಿ ಪದ್ದತಿ ನಿರ್ಮೂಲನೆ ಮತ್ತು ಭೂ ಸುಧಾರಣಾ ಕಾಯಿದೆಯ ಸೆಕ್ಷನ್ 99ರ ಅನ್ವಯ ಮಥುರಾದ ಜಿಲ್ಲಾಧಿಕಾರಿ ಮತ್ತು ಅದರ ಹಿರಿಯ ಖಜಾನೆ ಅಧಿಕಾರಿ ವರ್ಷಾಶನ ಪಾವತಿಸಲು ನಿರ್ದೇಶಿಸುವಂತೆ ಕೋರಿ ಠಾಕೂರ್ ರಂಗ್‌ಜೀ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ಒಂಭತ್ತು ದೇವಸ್ಥಾನಗಳಿಗೆ ಬಿಡುಗಡೆಯಾಗಬೇಕಾದ ₹9,125,07ವಾರ್ಷಿಕ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಅರ್ಜಿದಾರರು ಮನವಿ ಮಾಡಿದರು. ಇದಕ್ಕೆ ಕಂದಾಯ ಮಂಡಳಿಯು ಅನುಮತಿ ನೀಡದಿರುವುದೇ ಕಾರಣ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರವು ತಾನು ₹2,23,199 ಹಣ ಸಂದಾಯ ಮಾಡಿದ್ದು, ಬಾಕಿ ₹6,89,308 ಹಣ ಸಂದಾಯ ಮಾಡಬೇಕಿದೆ ಎಂದು ಹೇಳಿದೆ.

ಇದೇ ವೇಳೆ, ನ್ಯಾಯಾಲಯವು ಅರ್ಜಿದಾರರ ವಿಷಯದಲ್ಲಿ 2020ರಿಂದ 2023ರ ಅವಧಿಯಲ್ಲಿ ಬಿಡುಗಡೆ ಮಾಡಬೇಕಾದ ₹3,52,080 ಹಣವನ್ನು ಬಿಡುಗಡೆ ಮಾಡದೆ ಇರುವುದನ್ನು ಗಮನಿಸಿತು. ಹಣಕಾಸಿನ ಅಲಭ್ಯತೆಯ ಕಾರಣದಿಂದಾಗಿ ಹಣ ಬಿಡುಗಡೆ ಸಾಧ್ಯವಾಗಿಲ್ಲ ಎನ್ನುವ ಕಂದಾಯ ಮಂಡಳಿಯ ಉತ್ತರ ಬಗ್ಗೆ ನ್ಯಾಯಾಲಯ ಇದೇ ವೇಳೆ ಆಶ್ಚರ್ಯ ವ್ಯಕ್ತಪಡಿಸಿತು.

ಹೀಗಾಗಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ನ್ಯಾಯಾಲಯ ಪ್ರಕರಣವನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ವರ್ಗಾಯಿಸಿತು. ಪ್ರಕರಣದ ವಿಚಾರಣೆಯು ಮಾರ್ಚ್ 20ರಂದು ನಡೆಯಲಿದೆ.

ಇದನ್ನೂ ಓದಿ : ‘ಕೆಫೆ ಸ್ಫೋಟದ ಹಿಂದೆ ತಮಿಳರು’ ಹೇಳಿಕೆ: ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಮಧುರೈನಲ್ಲಿ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...