Homeಮುಖಪುಟದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಬೆಳಕಿನ ಮಾರ್ಗ: ಬಿಹಾರ ಸಚಿವ

ದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಬೆಳಕಿನ ಮಾರ್ಗ: ಬಿಹಾರ ಸಚಿವ

- Advertisement -
- Advertisement -

ದೇವಾಲಯಗಳು ಮಾನಸಿಕ ಗುಲಾಮಗಿರಿಗೆ ದಾರಿ, ಶಾಲೆಗಳು ಜೀವನಕ್ಕೆ ಬೆಳಕನ್ನು ಚೆಲ್ಲುವ ಮಾರ್ಗವಾಗಿದೆ ಎಂದು ಬಿಹಾರದ ಶಿಕ್ಷಣ ಸಚಿವ ಪ್ರೊ.ಚಂದ್ರಶೇಖರ್ ಅವರು ಹೇಳಿದ್ದು, ಆರ್‌ಜೆಡಿ ಪಕ್ಷದ ಶಾಸಕ ಫತೇ ಬಹದ್ದೂರ್ ಸಿಂಗ್ ಅವರ ಹೇಳಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ರೋಹ್ತಾಸ್ ಜಿಲ್ಲೆಯ ಡೆಹ್ರಿಯಲ್ಲಿ ಸಾಮಾಜ ಸುಧಾರಕಿ ಮತ್ತು ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರೊ.ಚಂದ್ರಶೇಖರ್, ಆರ್‌ಜೆಡಿ ಶಾಸಕ ಫತೇಹ್ ಅವರಿಗೆ ಬೆಂಬವನ್ನು ಸೂಚಿಸಿ ದೇವಸ್ಥಾನವು ‘ಮಾನಸಿಕ ಗುಲಾಮಗಿರಿ’ಗೆ ಮಾರ್ಗವಾಗಿದೆ, ಶಾಲೆಗಳು ಜೀವನದ ದಾರಿಗೆ ಬೆಳಕನ್ನು ತೋರಿಸುತ್ತವೆ ಎಂದು ಹೇಳಿದ್ದಾರೆ.

ಹುಸಿ ಹಿಂದುತ್ವ ಮತ್ತು ಹುಸಿ ಹಿಂದುತ್ವವಾದದ ಬಗ್ಗೆ ಜನರು ಜಾಗರೂಕರಾಗಿರಬೇಕು. ಅಯೋಧ್ಯೆಯ ರಾಮ ಮಂದಿರದ ತಾಣವು ಶೋಷಣೆಯ ತಾಣವಾಗಿದ್ದು, ನಿರ್ದಿಷ್ಟ ಸಮುದಾಯದ ಕೆಲವರು ಅದರ ಮೂಲಕ ತಮ್ಮ ಜೇಬು ತುಂಬಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎಂದು ಹೇಳಿದ್ದಾರೆ. ರಾಮನು ಎಲ್ಲರಲ್ಲಿಯೂ ಮತ್ತು ಎಲ್ಲೆಡೆಯೂ ನೆಲೆಸಿದ್ದಾನೆ. ಅವನನ್ನು ಹುಡುಕಲು ಎಲ್ಲಿಯೂ ಅಥವಾ ಯಾವುದೇ ದೇವಾಲಯಕ್ಕೆ ಹೋಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ನೀವು ಗಾಯಗೊಂಡರೆ ಎಲ್ಲಿಗೆ ಹೋಗುತ್ತೀರಿ? ದೇವಾಲಯಕ್ಕೆ ಅಥವಾ ಆಸ್ಪತ್ರೆಗೆ ? ಒಂದು ವೇಳೆ ನೀವು ಶಿಕ್ಷಣ ಪಡೆಯಲು, ಅಧಿಕಾರಿ, ಶಾಸಕ ಅಥವಾ ಸಂಸದನಾಗಲು ಬಯಸಿದರೆ, ದೇವಾಲಯಕ್ಕೆ ಹೋಗುತ್ತೀರಾ ? ಅಥವಾ ಶಾಲೆಗೆ ಹೋಗುತ್ತೀರಾ? ಎಂದು ಸಾವಿತ್ರಿ ಬಾಯಿ ಪುಲೆ ಪ್ರಶ್ನಿಸಿದ್ದರು. ಇದನ್ನೇ ಫತೇಹ್ ಬಹಾದೂರ್ ಸಿಂಗ್ ಹೇಳಿದ್ದಾರೆ ಎಂದು ಪ್ರೊ.ಚಂದ್ರಶೇಖರ್ ಹೇಳಿದ್ದಾರೆ.

ಸಿಂಗ್ ಹೇಳಿಕೆಯನ್ನು ವಿರೋಧಿಸುತ್ತಿರುವವರು ಅವರ ನಾಲಿಗೆ ಕತ್ತರಿಸಲು 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಮಹಾಭಾರತವನ್ನು ಉಲ್ಲೇಖಿಸಿದ ಅವರು ಈಗ ಏಕಲವ್ಯನ ಮಕ್ಕಳು ಹೆಬ್ಬೆರಳು ನೀಡಲಾರರು. ಯಾವುದೇ ದೇವಸ್ಥಾನಗಳು ನಿಮ್ಮ ಮಕ್ಕಳನ್ನು ಜವಾನನಿಂದ ಕಲೆಕ್ಟರ್‌ ಆಗಿ ಪರಿವರ್ತಿಸುವುದಿಲ್ಲ, ಪುಸ್ತಕ, ಲೇಖನಿ, ಶಾಲೆ, ಶಿಕ್ಷಣದಿಂದ ಮಾತ್ರವೇ ನಿಮ್ಮ ಮಕ್ಕಳನ್ನು ಪರಿವರ್ತಿಸಲು ಸಾಧ್ಯ. ಆದ್ದರಿಂದ ಅಕ್ಷತೆಯನ್ನು ನೀಡುವವರನ್ನು ಬಿಟ್ಟು ಅಂಬೇಡ್ಕರ್‌ ಅವರ ತತ್ವಗಳನ್ನು ಅನುಸರಿಸಿ ಎಂದು ಹೇಳಿದ್ದಾರೆ.

ಜೆಡಿಯು ರಾಷ್ಟ್ರೀಯ ವಕ್ತಾರ ಕೆಸಿ ತ್ಯಾಗಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಮಮಂದಿರ ಮತ್ತು ರಾಮಲಾಲ ಪ್ರತಿಷ್ಠಾಪನಾ ಸಮಾರಂಭದ ವಿರುದ್ಧ ನೀಡಿರುವ ಹೇಳಿಕೆಗಳಿಂದ ಬಿಜೆಪಿಗೆ ಲಾಭವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿರೋಧ ಪಕ್ಷವಾದ INDIA ಮೈತ್ರಿಕೂಟದ ಮಿತ್ರಪಕ್ಷಗಳು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದಾರೆ.

ಇದನ್ನು ಓದಿ: ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...