Homeಕರ್ನಾಟಕರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿ!

ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿ!

- Advertisement -
- Advertisement -

ಮಾರ್ಗಸೂಚಿಗಳ ಕೊರತೆಯಿಂದಾಗಿ ಸುರಕ್ಷತಾ ಮಾನದಂಡಗಳನ್ನು ಸರಿಯಾಗಿ ಅನುಸರಿಸದ ರಾಜ್ಯದ ಸುಮಾರು 10,000 ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿದ್ದು, ಅವುಗಳ ಸಮಸ್ಯೆಗಳನ್ನು ಬಗೆಹರಿಸಲು ಖಾಸಗಿ ಶಾಲಾ ಸಂಘವು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದೆ.

ಈ ಶಾಲೆಗಳು ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುತ್ತಿವೆ. ಹೀಗಾಗಿ, ಈ ಶಾಲೆಗಳನ್ನು ಮುಚ್ಚದಂತೆ ಮತ್ತು ಸಮಸ್ಯೆಯನ್ನು ಬಗೆಯರಿಸುವಂತೆ ಸೋಮವಾರದಿಂದ ಆರಂಭವಾಗುವ ಅಧಿವೇಶನಲ್ಲಿ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಖಾಸಗಿ ಶಾಲಾ ಸಂಘವು ವಿರೋಧ ಪಕ್ಷದ ನಾಯಕರಿಗೆ ಅವರಿಗೆ ಮನವಿ ಮಾಡಿದೆ.

ಇದನ್ನೂ ಓದಿ:ಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ‘ನೈತಿಕ’ ಬೆಂಬಲ

10-ದಿನಗಳ ಗಡುವಿನೊಳಗೆ ಅಗ್ನಿಶಾಮಕ ಮತ್ತು ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯುವಂತೆ ಲೋಕೋಪಯೋಗಿ ಇಲಾಖೆಯ ಮಾರ್ಗಸೂಚಿ ಸೂಚಿಸಿದೆ. ಆದರೆ, “ಇಂದಿಗೂ ಇಲಾಖೆಯಿಂದ ಸರಿಯಾದ ಮಾರ್ಗಸೂಚಿ ಇಲ್ಲದ ಕಾರಣದಿಂದಾಗಿ, ಭ್ರಷ್ಟ ಅಧಿಕಾರಿಗಳು ಹಣ ಸಂಪಾದಿಸಲು ಮತ್ತು ಪ್ರಮಾಣಪತ್ರಗಳನ್ನು ನೀಡಲು ದಾರಿ ಮಾಡಿಕೊಡುತ್ತದೆ. ಇಲಾಖೆ ಪ್ರಮಾಣ ಪತ್ರ ನೀಡುವ ಮಾರುಕಟ್ಟೆಯಾಗಿ ಮಾರ್ಪಟ್ಟಿದೆ” ಎಂದು ಸಂಘವು ಆರೋಪಿಸಿದೆ.

ಇಲಾಖೆಯ ಕಿರುಕುಳ ಸಹಿಸಲಾಗದೆ ಗ್ರಾಮೀಣ ಭಾಗದ ಕೆಲವು ಶಾಲೆಗಳು ಸೇರಿದಂತೆ ಮಠಾಧೀಶರು ನಡೆಸುತ್ತಿರುವ ಸುಮಾರು 10 ಸಾವಿರ ಸಣ್ಣ ಮತ್ತು ಮಧ್ಯಮ ಶಾಲೆಗಳು ಮುಚ್ಚುವ ಹಂತದಲ್ಲಿವೆ ಎಂದು ಮಾನ್ಯತೆ ಪಡೆದ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.

ಇದನ್ನೂ ಓದಿ: ನಾವೇನು ತಿನ್ನಬೇಕು ಎಂದು ನೀವೇಕೆ ನಿರ್ಧರಿಸುತ್ತೀರಿ?: ಮಾಂಸಾಹಾರ ಮಾರಾಟ ನಿಷೇಧಿಸಿದ್ದ ಪಾಲಿಕೆಗೆ ಗುಜರಾತ್ ಹೈಕೋರ್ಟ್‌ ಚಾಟಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ...

0
"ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ"...