Homeಮುಖಪುಟಏಳು ಐಷಾರಾಮಿ ಬಿಎಂಡಬ್ಲ್ಯೂ ಕಾರುಗಳಿಗೆ ಟೆಂಡರ್ : ತೀವ್ರ ಟೀಕೆಗೆ ಗುರಿಯಾದ ಲೋಕ್‌ಪಾಲ್

ಏಳು ಐಷಾರಾಮಿ ಬಿಎಂಡಬ್ಲ್ಯೂ ಕಾರುಗಳಿಗೆ ಟೆಂಡರ್ : ತೀವ್ರ ಟೀಕೆಗೆ ಗುರಿಯಾದ ಲೋಕ್‌ಪಾಲ್

- Advertisement -
- Advertisement -

ಭ್ರಷ್ಟಾಚಾರ ನಿಗ್ರಹ ಸಂಸ್ಥೆ ‘ಲೋಕಪಾಲ್’ ತನ್ನ ಸದಸ್ಯರಿಗೆ ಸುಮಾರು 70 ಲಕ್ಷ ರೂಪಾಯಿ ಆನ್ ರೋಡ್ ಬೆಲೆಯ ಏಳು ಐಷಾರಾಮಿ ಬಿಎಂಡಬ್ಲ್ಯು ಕಾರುಗಳನ್ನು ಖರೀದಿಸಲು ಮುಂದಾಗಿರುವುದು ಚರ್ಚೆಗೆ ಕಾರಣವಾಗಿದೆ.

ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ರಾಜ್ಯಸಭಾ ಸಂಸದರಾದ ಪಿ. ಚಿದಂಬರಂ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರು ಲೋಕಪಾಲ್ ನಡೆಯನ್ನು ಟೀಕಿಸಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಸಾಧಾರಣ ಸೆಡಾನ್ ಕಾರುಗಳನ್ನು ನೀಡುವಾಗ, ಲೋಕಪಾಲ್ ಅಧ್ಯಕ್ಷರು ಮತ್ತು ಅದರ ಆರು ಮಂದಿ ಸದಸ್ಯರು ಬಿಎಂಡಬ್ಲ್ಯು ಕಾರುಗಳನ್ನು ಬಯಸುತ್ತಿರುವುದು ಏಕೆ? ಎಂದು ಮಾಜಿ ಗೃಹ ಸಚಿವ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ.

“ಈ ಕಾರುಗಳನ್ನು ಖರೀದಿಸಲು ಸಾರ್ವಜನಿಕ ಹಣವನ್ನು ಏಕೆ ಖರ್ಚು ಮಾಡಬೇಕು? ಲೋಕಪಾಲ್‌ನ ಕನಿಷ್ಠ ಒಬ್ಬರು ಅಥವಾ ಇಬ್ಬರು ಸದಸ್ಯರು ಈ ಕಾರುಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಅಥವಾ ನಿರಾಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಚಿದಂಬರಂ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಲೋಕಪಾಲ್ ಕುರಿತ ಸಂಸದೀಯ ಸಮಿತಿಯ ಅಧ್ಯಕ್ಷತೆ ವಹಿಸಿದ್ದನ್ನು ನೆನಪಿಸಿಕೊಂಡಿರುವ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಅಭಿಷೇಕ್ ಮನು ಸಿಂಘ್ವಿ, ನನ್ನ ತಂದೆ, ಮಾಜಿ ಸಂಸದ ಡಾ. ಎಲ್. ಎಂ. ಸಿಂಘ್ವಿ ಅವರು 1960ರ ದಶಕದಲ್ಲಿ ಲೋಕಪಾಲ್‌ನ ಕಲ್ಪನೆಯನ್ನು ಮೊದಲು ಮುನ್ನಲೆಗೆ ತಂದವರು. ಈ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಈಗ ತನ್ನ ಸದಸ್ಯರಿಗೆ ಬಿಎಂಡಬ್ಲ್ಯು ಕಾರುಗಳನ್ನು ಖರೀದಿಸಲು ಮುಂದಾಗಿರುವುದು ದುರಂತ ವ್ಯಂಗ್ಯ ಎಂದಿದ್ದಾರೆ. ಸಮಗ್ರತೆಯ ರಕ್ಷಕರು ನ್ಯಾಯಸಮ್ಮತತೆಯ ಬದಲು ಐಷಾರಾಮಿಗಳನ್ನು ಬೆನ್ನಟ್ಟುತ್ತಿದ್ದಾರೆ” ಎಂದು ಅವರು ಎಕ್ಸ್‌ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

“ಲೋಕಪಾಲ್ ಸಂಸ್ಥೆಯು 2019ರಲ್ಲಿ ಸ್ಥಾಪನೆಯಾದಾಗಿನಿಂದ 8,703 ದೂರುಗಳನ್ನು ಸ್ವೀಕರಿಸಿದೆ. ಈ ಪೈಕಿ ಕೇವಲ 24 ಪ್ರಕರಣಗಳಲ್ಲಿ ತನಿಖೆ ನಡೆದಿದೆ ಮತ್ತು 6 ಪ್ರಕರಣಗಳಲ್ಲಿ ಮಾತ್ರ ಕಾನೂನು ಕ್ರಮಕ್ಕೆ ಅನುಮತಿ ನೀಡಲಾಗಿದೆ” ಎಂದು ಸಿಂಘ್ವಿ ತಿಳಿಸಿದ್ದಾರೆ.

ಮುಂದುವರಿದು, “ಈಗ ತಲಾ 70 ಲಕ್ಷ ರೂಪಾಯಿ ಮೌಲ್ಯದ ಬಿಎಂಡಬ್ಲ್ಯೂ ಕಾರುಗಳು. ಲೋಕಪಾಲ್ ಭ್ರಷ್ಟಾಚಾರವನ್ನು ತಡೆಯುವ ಶಕ್ತಿಶಾಲಿ ಸಂಸ್ಥೆಯಾಗಿರಬೇಕು, ಆದರೆ ಅದು ದುರ್ಬಲವಾಗಿ ಕೆಲಸ ಮಾಡುತ್ತಿದೆ. ಉದಾಹರಣೆಗೆ: ಅದು ಬಲಿಷ್ಠವಾದ ‘ಪ್ಯಾಂಥರ್’ (ಚೀತಾ) ರೀತಿಯಾಗಿರಬೇಕು, ಆದರೆ ಇದು ಚಿಕ್ಕ ‘ಪೂಡಲ್’ (ಪುಟ್ಟ ನಾಯಿ) ರೀತಿಯಾಗಿದೆ” ಎಂದು ಸಿಂಘ್ವಿ ಹೇಳಿದ್ದಾರೆ.

ಅಕ್ಟೋಬರ್ 16ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ, ಲೋಕಪಾಲ್ ಏಳು ಬಿಎಂಡ್ಬ್ಲ್ಯೂ 3 ಸೀರೀಸ್ ಲಿ ಕಾರುಗಳ ಪೂರೈಕೆಗಾಗಿ ಮುಕ್ತ ಟೆಂಡರ್‌ಗಳನ್ನು ಆಹ್ವಾನಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಲೋಕಪಾಲ್ ಚಾಲಕರು ಮತ್ತು ಸಿಬ್ಬಂದಿಗೆ ಏಳು ದಿನಗಳ ತರಬೇತಿಯನ್ನು ನೀಡುವಂತೆ ಬಿಎಂಡಬ್ಲ್ಯು ಹೇಳಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅಧ್ಯಕ್ಷೆತೆಯ ಲೋಕ್‌ಪಾಲ್‌ನಲ್ಲಿ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ, ನ್ಯಾಯಮೂರ್ತಿ ಸಂಜಯ್ ಯಾದವ್ ಮತ್ತು ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ಮಾಜಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮತ್ತು ನಿವೃತ್ತ ಅಧಿಕಾರಿಗಳಾದ ಪಂಕಜ್ ಕುಮಾರ್ ಮತ್ತು ಅಜಯ್ ಟಿರ್ಕಿ ಸದಸ್ಯರಾಗಿದ್ದಾರೆ.

ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...