Homeಮುಖಪುಟಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ - ಶಿವಾನಂದ್ ತಿವಾರಿ

ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

- Advertisement -
- Advertisement -

“ಅಂತರರಾಷ್ಟ್ರೀಯ ಗಣ್ಯರ ವಿರುದ್ಧ ಕೇಂದ್ರ ಸರ್ಕಾರವೂ ಸಚಿನ್ ತೆಂಡೂಲ್ಕರ್ ಅವರನ್ನು ಕಣಕ್ಕಿಳಿಸಿದೆ” ಎಂದು ಆರ್‌ಜೆಡಿಯ ನಾಯಕ ನಾಯಕ ಶಿವಾನಂದ್ ತಿವಾರಿ ಶುಕ್ರವಾರ ಆರೋಪಿಸಿದ್ದಾರೆ. ರೈತ ಹೋರಾಟವನ್ನು ಬೆಂಬಲಿಸಿ ಖ್ಯಾತ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಮತ್ತು ಪಾಪ್ ಸಿಂಗರ್ ರಿಹಾನ್ನ ಟ್ವೀಟ್ ಮಾಡಿದ್ದರು.

ಇದನ್ನು ಖಂಡಿಸಿ ಕ್ರಿಕೆಟರ್‌ಗಳಾದ ಸಚಿನ್ ತೆಂಡೂಲ್ಕರ್, ರವಿಶಾಸ್ತ್ರಿ, ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್, ಕಂಗನಾ ರಣಾವತ್ ಸೇರಿ ಮುಂತಾದವರು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಆರ್‌ಜೆಡಿಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಾನಂದ ತಿವಾರಿ, “ಸಚಿನ್ ಅಂಥವರಿಂದ ಹೇಳಿಕೆಗಳನ್ನು ಕೊಡಿಸುವ ಮೂಲಕ ರೈತರ ಹೋರಾಟಕ್ಕೆ ಜಗತ್ತು ಕುರುಡಾಗಿರಬೇಕು ಎಂದು ಕೇಂದ್ರ ಬಯಸುತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

“ರೈತರಿಗೆ ಟ್ವಿಟರ್ ಬಗ್ಗೆ ಗೊತ್ತಿಲ್ಲ. ಟ್ವಿಟರ್ ರಾಜಕೀಯ ಇತ್ತೀಚೆಗೆ ಪ್ರಾರಂಭವಾಗಿದೆ. ಎಲ್ಲರೂ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಗ್ರೇಟಾ ಥನ್‌ಬರ್ಗ್‌ ಅಥವಾ ರಿಹಾನ್ನಾ ಬಗ್ಗೆ ರೈತರಿಗೆ ಏನು ಗೊತ್ತು? ನೀವು ಅವರ ವಿರುದ್ಧ ಸಚಿನ್ ತೆಂಡೂಲ್ಕರ್ ಅವರನ್ನು ಕಣಕ್ಕಿಳಿಸಿದ್ದೀರಿ” ಎಂದು ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ತಿವಾರಿ ಅವರ ಹೇಳಿಕೆಯು ಬಿಹಾರದ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಯುವನ್ನು ಕೆರಳಿಸಿದ್ದು, ತಿವಾರಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ದೆಹಲಿ ಪೊಲೀಸರು ಘರ್ಷಣೆ ನಡೆಸಿದ ನಂತರ ಅಲ್ಲಿ ಇಂಟರ್ನೆಟ್ ಕಡಿತಗೊಳಿಸಿರುವುದನ್ನು ಉಲ್ಲೇಖಿಸಿ ಸಿಎನ್‌ಎನ್ ಹೋರಾಟದ ಬಗ್ಗೆ ವರದಿ ಮಾಡಿತ್ತು. ಇದನ್ನು ತನ್ನ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದ ಪಾಪ್ ತಾರೆ ರಿಹಾನ್ನಾ “ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ರಿಹಾನ್ನಾ ಟ್ವೀಟ್ ಮಾಡಿದ ನಂತರ ಹೋರಾಟವು ಜಾಗತಿಕವಾಗಿ ಸದ್ದು ಮಾಡಿದ್ದು ಹಲವಾರು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಿದ್ದರು. ಇದರಿಂದ ಅಸಮಧಾನಗೊಂಡಿದ್ದ ಕೇಂದ್ರ ಸರ್ಕಾರ ರೈತರ ಸಮಸ್ಯೆಯು ದೇಶದ ಆಂತರಿಕ ವಿಷಯ, ವಿದೇಶಿಯರು ತಲೆ ಹಾಕಬಾರದು ಎಂದು ಹೇಳಿತ್ತು. ಜೊತೆಗೆ ರೈತರನ್ನು ಬೆಂಬಲಿಸಿದ ಹ್ಯಾಶ್‌ಟ್ಯಾಗ್‌ಗಳ ವಿರುದ್ದ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ನೀಡಿತ್ತು. ಇದನ್ನು ಅನುಸರಿಸಿ ಭಾರತೀಯ ಸೆಲೆಬ್ರಿಟಿಗಳು ಸರ್ಕಾರದ ಪರ ಬ್ಯಾಟ್ ಬೀಸಿದ್ದರು.

ಈ ಮಧ್ಯೆ ರೈತ ಹೋರಾಟದ ಪರವಾಗಿ ಮಾತನಾಡಿದ್ದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ತನ್ನ ಟ್ವೀಟ್‌ ಒಂದರಲ್ಲಿ ಹೋರಾಟಕ್ಕೆ ಹೇಗೆ ಬೆಂಬಲಿಸಬಹುದು ಎಂಬ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರು. ಇದೀಗ ಪೊಲೀಸರು ಈ ಟೂಲ್‌‌ಕಿಟ್‌ ಅನ್ನು ರಚಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. 

ಗ್ರೇಟಾ ಅವರನ್ನು ಬೆಂಬಲಿಸಿ ಸೆಲಬ್ರಿಟಿಗಳಾದ ಸೋನಾಕ್ಷಿ ಸಿನ್ಹಾ, ತಾಪ್ಸಿ ಪನ್ನು, ರಮ್ಯಾ, ಮನೋಜ್ ತಿವಾರಿ, ರೋಹಿತ್ ಶರ್ಮಾ ಮುಂತಾದವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...