Homeಮುಖಪುಟಬಿಹಾರದಲ್ಲಿ ಅರ್ಚಕನ ಹತ್ಯೆ ಬಳಿಕ ಭುಗಿಲೆದ್ದ ಘರ್ಷಣೆ

ಬಿಹಾರದಲ್ಲಿ ಅರ್ಚಕನ ಹತ್ಯೆ ಬಳಿಕ ಭುಗಿಲೆದ್ದ ಘರ್ಷಣೆ

- Advertisement -
- Advertisement -

ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಅರ್ಚಕನೋರ್ವನ ಹತ್ಯೆ ನಡೆದಿದ್ದು, ಗ್ರಾಮದಲ್ಲಿ ಸ್ಥಳೀಯರು ಮತ್ತು ಪೊಲೀಸರ ನಡುವೆ ಘರ್ಷಣೆಗೆ ಕಾರಣವಾಗಿದೆ. ಈ ವೇಳೆ ಕೆಲ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ದಾನಾಪುರ ಗ್ರಾಮದ ಶಿವ ದೇವಸ್ಥಾನದ ಅರ್ಚಕ ಮನೋಜ್ ಕುಮಾರ್ ಕಳೆದ 6 ದಿನಗಳಿಂದ ನಾಪತ್ತೆಯಾಗಿದ್ದರು. ಆತನಿಗೆ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಆತನ ಕಣ್ಣುಗಳನ್ನು ಕಿತ್ತುಕೊಂಡ ಸ್ಥಿತಿಯಲ್ಲಿ ಮತ್ತು ಜನನಾಂಗಗಳು ಕತ್ತರಿಸಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು.

ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಘಟನೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಘರ್ಷಣೆಗೆ ಕಾರಣವಾಯಿತು. ಈ ಸಂದರ್ಭದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೋಜ್ ಕುಮಾರ್ ಮನೆಯಿಂದ ದೇವಸ್ಥಾನಕ್ಕೆ ಹೋದಾಗ ನಾಪತ್ತೆಯಾಗಿದ್ದರು. ನಾಪತ್ತೆ ಬಗ್ಗೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದರೂ ಆತನ ಪತ್ತೆಯಾಗಿರಲಿಲ್ಲ. ಶನಿವಾರ ಪೊಲೀಸರಿಗೆ ಗ್ರಾಮದ ಪೊದೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿದ ಸ್ಥಳೀಯರು ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಘರ್ಷಣೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲುಗಳನ್ನು ಎಸೆದರು ಮತ್ತು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.

ನಂತರ ಪೊಲೀಸರು ನಿರಂತರವಾಗಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದರು. ಗೋಪಾಲಗಂಜ್ ಸದರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ(ಎಸ್‌ಡಿಪಿಒ) ಪ್ರಾಂಜಲ್ ಅವರು ನಂತರ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಮನೋಜ್‌ ಕುಮಾರ್‌ ನಾಪತ್ತೆಯಾದಾಗ ಎಲ್ಲೋ ಹೊರಗೆ ಹೋಗಿದ್ದು, ಶೀಘ್ರದಲ್ಲೇ ವಾಪಸ್‌ ಬರುತ್ತಾರೆ ಎಂದು ಭಾವಿಸಿದ್ದೆವು. ತನಿಖೆ ನಡೆಸುವುದಾಗಿ ಹೇಳಿದ ಆರು ದಿನಗಳ ನಂತರ ನನ್ನ ಸಹೋದರನ ಶವ ಪತ್ತೆಯಾಗಿದೆ. ಕೊಲೆ ಹೇಗೆ ಮತ್ತು ಏಕೆ ನಡೆಯಿತು ಎಂಬುದು ನಮಗೆ ತಿಳಿದಿಲ್ಲ ಎಂದು ಮೃತ ಅರ್ಚಕನ ಸಹೋದರ ಸುರೇಶ್ ಶಾ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಒ ಪ್ರಾಂಜಲ್, ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಸಾಕಷ್ಟು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಹೆದ್ದಾರಿಗಳಲ್ಲಿ ಬ್ಲಾಕ್‌ ಮಾಡಿರುವುದನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ. ಜನರು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಿದ್ದಾರೆ. ಈ ಬಗ್ಗೆ ಎಫ್‌ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...