Homeಮುಖಪುಟಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

ಒಡಿಶಾದ ಖಾಸಗಿ ವಿವಿಯಲ್ಲಿ ನೇಪಾಳಿ ವಿದ್ಯಾರ್ಥಿನಿ ಅಸಹಜ ಸಾವು : ಕ್ಯಾಂಪಸ್‌ನಲ್ಲಿ ಕೋಲಾಹಲ!

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ (ಕೆಐಐಟಿ) ನೇಪಾಳಿ ವಿದ್ಯಾರ್ಥಿನಿಯೊಬ್ಬರು ಭಾನುವಾರ (ಫೆ.16) ಸಂಜೆ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೂರನೇ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ಪ್ರಕೃತಿ ಲಾಮ್ಸಾಲ್ ಅಸಹಜವಾಗಿ ಸಾವಿಗೀಡಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಈ ಘಟನೆಯಿಂದ ಕೆಐಐಟಿ ಕ್ಯಾಂಪಸ್‌ನಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ 500ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳು ಸಂಸ್ಥೆಯ ವಿರುದ್ಧ ಭಾನುವಾರ ರಾತ್ರಿಯೇ ದಿಢೀರ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದರಿಂದ ಕೋಪಗೊಂಡ ಕೆಐಐಟಿ ಆಡಳಿತ ಮಂಡಳಿ, ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಖಾಲಿ ಮಾಡಿಸಿ ವಾಪಸ್ ಊರಿಗೆ ಹೋಗುವಂತೆ ಒತ್ತಾಯಿಸಿದೆ.

ಅಲ್ಲದೇ ಅವರೆಲ್ಲರನ್ನೂ ಬಸ್ ಹತ್ತಿಸಿ ಕ್ಯಾಂಪಸ್‌ನಿಂದ 30 ಕಿಲೋ ಮೀಟರ್ ದೂರದ ಕಟ್ಟಕ್ ರೈಲು ನಿಲ್ದಾಣದಲ್ಲಿ ಇಳಿಸಿದ್ದಾರೆ. ಹುಡುಗಿಯರು ಸೇರಿಂದಂತೆ ಹಲವು ವಿದ್ಯಾರ್ಥಿಗಳು ಟಿಕೆಟ್ ಸಿಗದೆ ರೈಲಿನಲ್ಲಿ ಊರಿಗೆ ಹೋಗಲಾಗದೆ ನಿಲ್ದಾಣದ ಹೊರಗಡೆಯೇ ಅತಂತ್ರರಾಗಿ ನಿಂತಿದ್ದಾರೆ.

ಈ ಬೆಳವಣಿಗೆ ಈಗ ಭಾರತ ಮತ್ತು ನೇಪಾಳ ನಡುವಿನ ರಾಜತಾಂತ್ರಿಕ ವಿಷಯವಾಗಿ ಮಾರ್ಪಟ್ಟಿದೆ. “ಒಡಿಶಾದಲ್ಲಿ ತೊಂದರೆಗೊಳಗಾದ ನೇಪಾಳಿ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ನವದೆಹಲಿಯಲ್ಲಿರುವ ನಮ್ಮ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕಳುಹಿಸಿದ್ದೇವೆ. ವಿದ್ಯಾರ್ಥಿಗಳು ಅವರ ಆದ್ಯತೆಯ ಮೇರೆಗೆ ತಮ್ಮ ಹಾಸ್ಟೆಲ್‌ನಲ್ಲಿ ಉಳಿಯುವ ಅಥವಾ ಮನೆಗೆ ಮರಳುವ ಆಯ್ಕೆಯನ್ನು ಹೊಂದಿದ್ದಾರೆ” ಎಂದು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಆರಂಭದಲ್ಲಿ ವಿದ್ಯಾರ್ಥಿಗಳ ವಿಷಯದಲ್ಲಿ ಕಠಿಣ ನಿಲುವು ತಳೆದಿದ್ದ ಕೆಐಐಟಿ, ತನ್ನ ಕ್ರಮದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆ ಹಿಂದೆ ಸರಿದಿದೆ. “ಇನ್ನು ಮುಂದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು. ಈಗ ನಡೆದಿರುವ ಪ್ರಕರಣದ ಬಗ್ಗೆ ಸುಗಮ ಮತ್ತು ಪಕ್ಷಪಾತವಿಲ್ಲದ ತನಿಖೆ ಕೈಗೊಳ್ಳಲು ಸಹಾಯವಾಗುವಂತೆ ನೇಪಾಳಿ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ತಮ್ಮ ಸ್ಥಳಗಳಿಗೆ ಮರಳಲು ಸೂಚಿಸಲಾಗಿದೆ” ಎಂದು ಹೇಳಿಕೆ ನೀಡಿದೆ.

“ನೇಪಾಳಿ ವಿದ್ಯಾರ್ಥಿಗಳು ಕ್ಯಾಂಪಸ್‌ಗೆ ಮರಳಲು ವ್ಯವಸ್ಥೆ ಮಾಡಲಾಗುವುದು. ಅವರು ಈ ಹಿಂದಿನಂತೆ ತರಗತಿಗಳಲ್ಲಿ ಭಾಗವಹಿಸಬಹುದು. ಅವರ ಶಿಕ್ಷಣಕ್ಕೆ ತೊಂದೆಯಾಗದಂತೆ ವಿಶ್ವವಿದ್ಯಾಲಯ ನೋಡಿಕೊಳ್ಳಲಿದೆ. ತರಗತಿಗಳು ಮತ್ತು ಹಾಸ್ಟೆಲ್‌ಗಳಿಂದ ಅವರನ್ನುಅಮಾನತು ಮಾಡಿರುವ ಆದೇಶ ತಕ್ಷಣದಿಂದಲೇ ಹಿಂತೆಗೆದುಕೊಳ್ಳಲಾಗಿದೆ” ಎಂದು ಕೆಐಐಟಿ ತಿಳಿಸಿದೆ.

ಇದಕ್ಕೂ ಮೊದಲು, ಕೆಐಐಟಿ ಹೊರಡಿಸಿದ ನೋಟಿಸ್‌ನಲ್ಲಿ, “ನೇಪಾಳದ ಎಲ್ಲಾ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಅನಿರ್ದಿಷ್ಟಾವಧಿಗೆ ಮುಚ್ಚಲ್ಪಟ್ಟಿದೆ. ಫೆಬ್ರವರಿ 17, 2025 ರಂದು ಇಂದು ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ತಕ್ಷಣವೇ ಖಾಲಿ ಮಾಡುವಂತೆ ಅವರಿಗೆ ನಿರ್ದೇಶಿಸಲಾಗಿದೆ” ಎಂದು ಹೇಳಿತ್ತು.

ಪೊಲೀಸರ ಪ್ರಕಾರ, ವಿದ್ಯಾರ್ಥಿನಿ ಪ್ರಕೃತಿಗೆ ಕ್ಯಾಂಪಸ್‌ನಲ್ಲಿ ಸ್ಥಳೀಯ ವಿದ್ಯಾರ್ಥಿಯೊಬ್ಬ ಪೀಡಿಸುತ್ತಿದ್ದ. ಆದರೆ, ಪ್ರಕೃತಿ ಇನ್ನೊಬ್ಬ ಹುಡುಗನನ್ನು ಇಷ್ಟಪಟ್ಟಿದ್ದರು. ಪೀಡಿಸುತ್ತಿದ್ದ ಸ್ಥಳೀಯ ವಿದ್ಯಾರ್ಥಿಯ ಕಿರುಕುಳಕ್ಕೆ ಬೇಸತ್ತು ಅವರು ಫೆ.16ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ಫೆಬ್ರವರಿ 16ರಂದು ನೇಪಾಳಿ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ ನಮಗೆ ದೂರು ಬಂದಿತ್ತು. ನಾವು ಹಾಸ್ಟೆಲ್ ಕೋಣೆಗೆ ಧಾವಿಸಿ ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದೆವು” ಎಂದು ಭುವನೇಶ್ವರದ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಹೇಳಿದ್ದಾರೆ.

ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. College administrative action is not good. after pressure coming from central govt. they accept all students to attend the classes. first find out the reason,

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...