Homeಮುಖಪುಟಗುಜರಾತ್‌: ಶೋಭಾಯಾತ್ರೆ ವೇಳೆ ಕಲ್ಲು ತೂರಾಟ; ಪೊಲೀಸರು ಸೇರಿ ಹಲವರಿಗೆ ಗಾಯ

ಗುಜರಾತ್‌: ಶೋಭಾಯಾತ್ರೆ ವೇಳೆ ಕಲ್ಲು ತೂರಾಟ; ಪೊಲೀಸರು ಸೇರಿ ಹಲವರಿಗೆ ಗಾಯ

- Advertisement -
- Advertisement -

ಗುಜರಾತಿನ ಖೇಡಾ ಜಿಲ್ಲೆಯ ಥಾಸ್ರಾ ಪಟ್ಟಣದ ದೇವಸ್ಥಾನದ ವತಿಯಿಂದ ನಡೆಯುತ್ತಿದ್ದ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದ್ದು, ಮೂವರು ಪೊಲೀಸರು ಸೇರಿದಂತೆ ಕೆಲವು ಜನರಿಗೆ ಗಾಯಗಳಾಗಿದೆ.

ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ದಿನದಂದು ಶಿವ ದೇವಾಲಯದಿಂದ ಶೋಭಾ ಯಾತ್ರೆ ಪ್ರಾರಂಭವಾಗುತ್ತಿತ್ತು. ಈ ಬಾರಿ 700-800 ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕಲ್ಲು ತೂರಾಟದ ಬಳಿಕ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಉಂಟಾಗಿದೆ ಎಂದು ಖೇಡಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಗಾಧಿಯಾ ತಿಳಿಸಿದ್ದಾರೆ.

ಮೆರವಣಿಗೆ ತೀನ್-ಬಾಟಿ ಪ್ರದೇಶದಲ್ಲಿ ತೆರಳುತ್ತಿರುವಾಗ ಕಲ್ಲು ಮತ್ತು ಇಟ್ಟಿಗೆಗಳನ್ನು ಎಸೆಯಲಾಗಿದೆ. ಅಲ್ಲಿದ್ದ ಪೊಲೀಸರು ತಕ್ಷಣ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತಾ ಕ್ರಮಗಳನ್ನು ವಹಿಸಲಾಗಿದೆ ಎಂದು  ಖೇಡಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಗಾಧಿಯಾ ಅವರು ಹೇಳಿದ್ದಾರೆ.

ಕಲ್ಲೆಸೆತದಿಂದ ಓರ್ವ ಸಬ್ ಇನ್ಸ್‌ಪೆಕ್ಟರ್, ಇಬ್ಬರು ಕಾನ್‌ಸ್ಟೆಬಲ್‌ಗಳು ಮತ್ತು ಇತರ ಕೆಲವು ಜನರು ಗಾಯಗೊಂಡಿದ್ದಾರೆ. ಕಲ್ಲು ತೂರಾಟವು ಪೂರ್ವಯೋಜಿತವಾಗಿ ನಡೆದ ಘಟನೆಯ? ಅಥವಾ ಇದು ಸ್ವಯಂಪ್ರೇರಿತವಾಗಿ ನಡೆದ ಘಟನೆಯ? ಎಂದು ತನಿಖೆ ಬಳಿಕ ಬಯಲಾಗಬೇಕಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ಆ ಪ್ರದೇಶದಲ್ಲಿ ಶಾಂತಿ ಕಾಪಾಡುವ ಪ್ರಯತ್ನಗಳ ಭಾಗವಾಗಿ ಎರಡೂ ಸಮುದಾಯಗಳ ಮುಖಂಡರನ್ನು ಸಂಪರ್ಕಿಸಲಾಗಿದೆ. ಕಲ್ಲು ತೂರಾಟ ನಡೆಸಿರುವವರನ್ನು ಗುರುತಿಸಲು ಮತ್ತು ಬಂಧಿಸಲು ಘಟನೆಯ ವೀಡಿಯೊಗಳನ್ನು ಪರಿಶೀಲಿಸಲಾಗುತ್ತಿದೆ. ಈ ಕುರಿತು ವದಂತಿಗಳನ್ನು ಹಬ್ಬಿಸಬೇಡಿ ಮತ್ತು ಶಾಂತಿ ಕಾಪಾಡುವಂತೆ ಎಸ್ಪಿ ಜನರಿಗೆ ಮನವಿ ಮಾಡಿದ್ದಾರೆ.

ಇದನ್ನು ಓದಿ: ಅದಾನಿ ಅಕ್ರಮ: ಮೋದಿಗಾಗಿ ನಿದ್ರೆಗೆ ಜಾರಿರುವ SEBI ಈಗಲಾದರೂ ಎಚ್ಚರಗೊಳ್ಳುವುದೇ?; ಜೈರಾಮ್ ರಮೇಶ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...