Homeಮುಖಪುಟಮಹಾರಾಷ್ಟ್ರದಲ್ಲಿ ಭೀಕರ ಬಸ್ ಅಪಘಾತ: 25 ಪ್ರಯಾಣಿಕರು ಸಜೀವ ದಹನ!

ಮಹಾರಾಷ್ಟ್ರದಲ್ಲಿ ಭೀಕರ ಬಸ್ ಅಪಘಾತ: 25 ಪ್ರಯಾಣಿಕರು ಸಜೀವ ದಹನ!

- Advertisement -
- Advertisement -

ಮಹಾರಾಷ್ಟ್ರದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್, ಬುಲ್ಧಾನ ಜಿಲ್ಲೆಯ ಸಿಂಧಖೇಡ್‌ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹೋಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ. ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಖಾಸಗಿ ಟ್ರಾವೆಲ್ಸ್ ಬಸ್ ನಾಗಪುರದಿಂದ ಪುಣೆಗೆ ತೆರಳುತ್ತಿದ್ದಾಗ ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ ಬಸ್ ಟಯರ್ ಒಡೆದು ವಾಹನ ಕಂಬಕ್ಕೆ ಡಿಕ್ಕಿ ಹೊಡೆದು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಬುಲ್ಧಾನ ಎಸ್ ಪಿ ಸುನಿಲ್ ಕಡಸ್ನೆ ಪಿಟಿಐಗೆ ತಿಳಿಸಿದ್ದಾರೆ. ಬಸ್ಸಿನಲ್ಲಿದ್ದ 33 ಪ್ರಯಾಣಿಕರ ಪೈಕಿ 25 ಮಂದಿ ಸುಟ್ಟು ಕರಕಲಾಗಿದ್ದಾರೆ.

ಘಟನೆಯಲ್ಲಿ ಬದುಕುಳಿದಿರುವ ಬಸ್‌ನ ಚಾಲಕ, ಕಡಸನೆ ಪ್ರಕಾರ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಟೈರ್ ಒಡೆದ ನಂತರ ಬಸ್ ಪಲ್ಟಿಯಾಗಿದೆ ಎಂದು ಹೇಳಿದರು.

ಅಪಘಾತದ ನಂತರ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ

ಇನ್ನು ಬಸ್​ ಅಪಘಾತವಾದಾಗ ಎಲ್ಲಾ ಪ್ರಯಾಣಿಕರು ಮಲಗಿಕೊಂಡಿದ್ದು, ಎನಾಗುತ್ತಿದೆ ಎನ್ನುವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದೆ. ಸುಮಾರು 25 ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಪೊಲೀಸ್-ಆಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.

ಇದನ್ನೂ ಓದಿ: ಮೈ-ಬೆಂ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ: ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...