Homeಮುಖಪುಟಭೀಕರ ಭೂಕಂಕ್ಕೆ ಕಂಗೆಟ್ಟ ನೇಪಾಳ: 128 ಜನರ ಸಾವು

ಭೀಕರ ಭೂಕಂಕ್ಕೆ ಕಂಗೆಟ್ಟ ನೇಪಾಳ: 128 ಜನರ ಸಾವು

- Advertisement -
- Advertisement -

ನೇಪಾಳದ ವಾಯುವ್ಯ ಜಿಲ್ಲೆಗಳಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 128 ಜನರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ಭೂಕಂಪದ ಪ್ರಭಾವವು ಭಾರತದ ರಾಜಧಾನಿ, ನವದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (NCR) ವರೆಗೆ 800 ಕಿಲೋಮೀಟರ್ (500 ಮೈಲಿ) ದೂರದಲ್ಲಿದೆ.

ಭೂಕಂಪಪೀಡಿತ ಪ್ರದೇಶಗಳಲ್ಲಿ ಮನೆಗಳು ಕುಸಿದಿದ್ದು, ದೆಹಲಿ-ಎನ್‌ಸಿಆರ್‌ ಪ್ರದೇಶ ಸೇರಿದಂತೆ ಉತ್ತರ ಭಾರತದ ಕೆಲವೆಡೆ ಕೂಡಾ ಲಘು ಕಂಪನದ ಅನುಭವವಾಗಿದೆ.

ನವೆಂಬರ್ 4, 2023 ರಂದು ಜಾಲಕ್ಕೋಟ್‌ನಲ್ಲಿ ಸಂಭವಿಸಿದ ಭೂಕಂಪದಿಂದ ಗಾಯಗೊಂಡವರನ್ನು ಜಾಲಕ್ಕೋಟ್ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಭೂಕಂಪ ಪೀಡಿತ ಹಲವು ಪ್ರದೇಶಗಳೊಂದಿಗೆ ಸಂವಹನ ಸ್ಥಗಿತಗೊಂಡಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು  ಸ್ಥಳೀಯ ಅಧಿಕಾರಿ ಹರೀಶ್ ಚಂದ್ರ ಶರ್ಮಾ ಮಾಹಿತಿ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ರುಕುಂ ಪಶ್ಚಿಮದ ಮುಖ್ಯ ಜಿಲ್ಲಾ ಅಧಿಕಾರಿ ಹರಿ ಪ್ರಸಾದ್ ಪಂತ್ ಅವರು ದೃಢಪಡಿಸಿದಂತೆ ಭೂಕಂಪದಿಂದಾಗಿ ಹಲವಾರು ಮನೆಗಳು ಕುಸಿದಿದ್ದರಿಂದ ರುಕುಮ್ ಜಿಲ್ಲೆಯಲ್ಲಿ ಕನಿಷ್ಠ 36 ಜೀವಗಳನ್ನು ಕಳೆದುಕೊಂಡಿದೆ. ಒಟ್ಟು 30 ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆರೆಯ ಜಾಜರ್‌ಕೋಟ್ ಜಿಲ್ಲೆಯಲ್ಲಿ ಭೂಕಂಪದ ಪರಿಣಾಮವಾಗಿ 34 ಜನರು ದುರಂತವಾಗಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಆಡಳಿತ ಅಧಿಕಾರಿ ಹರೀಶ್ ಚಂದ್ರ ಶರ್ಮಾ ತಿಳಿಸಿದ್ದಾರೆ.

ಭೀಕರ ದುರಂತದ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಸರ್ಕಾರ ಪ್ರಕಟಿಸಿದೆ. ಭೂಕಂಪದ ಕೇಂದ್ರ ಬಿಂದುವಿನಿಂದ ಸುಮಾರು 800 ಕಿಲೋಮೀಟರ್ ದೂರದಲ್ಲಿರುವ ಭಾರತದ ರಾಜಧಾನಿ ಹೊಸದಿಲ್ಲಿ ಪ್ರದೇಶದಲ್ಲಿ ಕೂಡಾ ಭೂಕಂಪದ ಅನುಭವ ಆಗಿದೆ. ಆದರೆ ಬಹುತೇಕರು ನಿದ್ದೆಯಲ್ಲಿ ಇದ್ದ ಸಂದರ್ಭದಲ್ಲಿ ಇದು ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಶುಕ್ರವಾರ ಮಧ್ಯರಾತ್ರಿಗಿಂತ ಸ್ವಲ್ಪ ಮುಂಚೆ ಈ ದುರಂತ ಸಂಭವಿಸಿದ್ದು, ಪರ್ವತಶ್ರೇಣಿಗಳಿಂದ ಕೂಡಿದ ಗ್ರಾಮದಲ್ಲಿ ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ. 128 ಮಂದಿ ಈಗಾಗಲೇ ಮೃತಪಟ್ಟಿದ್ದು, ಹಲವು ಪ್ರದೇಶಗಳ ಜತೆ ಸಂಪರ್ಕ ವ್ಯವಸ್ಥೆ ಕಡಿದು ಹೋಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 11.47ಕ್ಕೆ ಜಾಲಕ್ಕೋಟ್ ಜಿಲ್ಲೆಯ ರಮೀದಂಡ ಗ್ರಾಮದಲ್ಲಿ ಭೂಕಂಪ ಸಂಭವಿಸಿದೆ. ಎಂದು ಅಧಿಕಾರಿಗಳು ಎಕ್ಸ್ ಪೋಸ್‌ಟ್‌ನಲ್ಲಿ ಹೇಳಿದ್ದಾರೆ. 2015ರಲ್ಲಿ ಈ ಬೆಟ್ಟ ರಾಷ್ಟ್ರದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿ, 9 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟು, 10 ಲಕ್ಷ ಕಟ್ಟಡಗಳು ಹಾನಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಮಣಿಪುರ ಪೊಲೀಸರಿಂದ ಮಹಿಳೆಯರಿಗೆ ಕಿರುಕುಳ, ಹಲ್ಲೆ: ಕುಕಿ ಶಾಸಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...