Homeಮುಖಪುಟಭಯೋತ್ಪಾದಕಿ ಪ್ರಗ್ಯಾ ಠಾಕೂರ್‌ , ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿದ್ದಾರೆ: ರಾಹುಲ್‌ ಗಾಂಧಿ

ಭಯೋತ್ಪಾದಕಿ ಪ್ರಗ್ಯಾ ಠಾಕೂರ್‌ , ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿದ್ದಾರೆ: ರಾಹುಲ್‌ ಗಾಂಧಿ

- Advertisement -
- Advertisement -

ಪ್ರಗ್ಯಾ ಠಾಕೂರ್‌ ಭಯೋತ್ಪಾದಕಿ, ಹಾಗಾಗಿಯೇ ಭಯೋತ್ಪಾದಕ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದಿದ್ದಾರೆ ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು ಗೋಡ್ಸೆಯನ್ನು ದೇಶಭಕ್ತ ಎಂದು ಸಂಸತ್ತಿನಲ್ಲಿ ಪ್ರಗ್ಯಾ ಹೇಳಿದ್ದಕ್ಕೆ, “ಭಾರತೀಯ ಸಂಸತ್ತಿನ ಇತಿಹಾಸದಲ್ಲಿ ಅತ್ಯಂತ ದುಃಖದ ದಿನ” ಎಂದು ಸಹ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ನಿನ್ನೆ ಸಂಸತ್ತಿನಲ್ಲಿ ಎಸ್‌ಪಿಜಿ ಕಾಯ್ದೆ ತಿದ್ದುಪಡಿ ಕುರಿತ ಚರ್ಚೆಯಲ್ಲಿ ಡಿಎಂಕೆ ಸಂಸದ ಎ.ರಾಜಾ ರವರು ಗಾಂಧೀಜಿಯವರನ್ನು ಗೋಡ್ಸೆ ಕೊಂದಿದ್ದು ಹೇಗೆ ಎಂದು ವಿವರಿಸುತ್ತಿದ್ದರು. ಆಗ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್‌ ದೇಶಭಕ್ತ ಗೋಡ್ಸೆಯನ್ನು ನೀವು ಉದಾಹರಣೆಯಾಗಿ ಕೊಡಬಾರದು ಎಂದು ಆಗ್ರಹಿಸಿದ್ದರು.

ಪ್ರಗ್ಯಾರವರ ಈ ಹೇಳಿಕೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ಮಧ್ಯಪ್ರದೇಶ ಸಿಎಂ ಕಮಲ್‌ ನಾಥ್‌ ಶೀಘ್ರ ಕ್ರಮಕ್ಕೆ ಆಗ್ರಹಿಸಿದ್ದರು.

ಗಾಂಧಿ ಕೊಂದ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಪ್ರಗ್ಯಾ ಠಾಕೂರ್‌ರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗ ಆಕೆ ಮತ್ತೆ ಮತ್ತೆ ಅದನ್ನೇ ಪುನರುಚ್ಚರಿಸುತ್ತಿದ್ದರೂ ಮೋದಿ ಏಕೆ ಮೌನವಾಗಿದ್ದಾರೆ ಎಂದು ಕಮಲ್‌ ನಾಥ್‌ ಸರಣಿ ಟ್ವೀಟ್‌ಗಳನ್ನು ಮಾಡಿದ್ದರು.

ನಂತರ ಸಂಸತ್ತಿನಲ್ಲಿ ಗಾಂಧಿ ಹಂತಕ ನಾಥೂರಾಂ ಗೊಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಬಿಜೆಪಿಯ ವಿವಾದಾತ್ಮಕ ಸಂಸದೆ ಪ್ರಗ್ಯಾ ಠಾಕೂರ್‌ರವರನ್ನು ಉಳಿದ ಚಳಿಗಾಲದ ಅಧಿವೇಶನಕ್ಕಾಗಿ ಪಕ್ಷದ ಸಂಸದರ ನಿಯಮಿತ ಸಭೆಯಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಿದೆ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಅಷ್ಟು ಮಾತ್ರವಲ್ಲದೇ ಪ್ರಜ್ಞಾ ಠಾಕೂರ್ ಅವರನ್ನು ಇತ್ತೀಚೆಗೆ ಸೇರಿಸಿಕೊಂಡಿದ್ದ ರಕ್ಷಣಾ ಸಂಸದೀಯ ಸಮಿತಿಯಿಂದಲೂ ಸಹ ಹೊರಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

“ನಿನ್ನೆ ಸಂಸತ್ತಿನಲ್ಲಿ ಅವರು ನೀಡಿದ ಹೇಳಿಕೆ ಖಂಡನೀಯ. ಅಂತಹ ಹೇಳಿಕೆ ಅಥವಾ ಸಿದ್ಧಾಂತವನ್ನು ಬಿಜೆಪಿ ಎಂದಿಗೂ ಬೆಂಬಲಿಸುವುದಿಲ್ಲ ”ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಎಎನ್‌ಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...