Homeಮುಖಪುಟಪುಲ್ವಾಮಾ: ಸಿಆರ್‌ಪಿಎಫ್ ವಾಹನದ ಮೇಲೆ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: 7 ಮಂದಿಗೆ ಗಾಯ

ಪುಲ್ವಾಮಾ: ಸಿಆರ್‌ಪಿಎಫ್ ವಾಹನದ ಮೇಲೆ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: 7 ಮಂದಿಗೆ ಗಾಯ

- Advertisement -
- Advertisement -

ಪುಲ್ವಾಮಾ ಜಿಲ್ಲೆಯ ಟ್ರಾಲ್ ಚೌಕ್ ಪ್ರದೇಶದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ವಾಹನದ ಮೇಲೆ ಭಯೋತ್ಪಾದಕರು ಭಾನುವಾರ ಗ್ರೆನೇಡ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 7 ಮಂದಿ ನಾಗರಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗ್ರೆನೇಡ್ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಎಲ್ಲಾ ಸಿಆರ್‌ಪಿಎಫ್ ಯೋಧರು ಸುರಕ್ಷಿತರಾಗಿದ್ದಾರೆ. 6-7 ನಾಗರಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳವನ್ನು ಸುತ್ತುವರಿಯಲಾಗಿದ್ದು, ಉಗ್ರರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು  ಸಿಆರ್‌ಪಿಎಫ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕೆಲ ದಿನಗಳ ಹಿಂದೆ ಬಿಜೆಪಿ ಕೌನ್ಸಿಲರ್ ರಾಕೇಶ್ ಪಂಡಿತಾ ಅವರನ್ನು ತ್ರಾಲ್‌ನಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದರು. ಮೂವರು ಭಯೋತ್ಪಾದಕರ ಗುಂಪು ಬಿಜೆಪಿ ನಾಯಕರ ಮೇಲೆ ಮನ ಬಂದಂತೆ ಗುಂಡು ಹಾರಿಸಿದ್ದರು.

ಇದಕ್ಕೂ ಮುನ್ನ ಶನಿವಾರ ಶ್ರೀನಗರದಲ್ಲಿ ಭದ್ರತಾ ಪಡೆಗಳು ಶಂಕಿತ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪತ್ತೆ ಮಾಡಿವೆ. ಸುಮಾರು 10 ಕೆಜಿ ತೂಕದ ಉಕ್ಕಿನ ಪಾತ್ರೆಯಲ್ಲಿ ಈ ಸ್ಪೋಟಕವನ್ನು ಚನ್‌ಪೊರಾದ ಸರ್ಕಾರಿ ಕ್ವಾರ್ಟರ್ಸ್ ಬಳಿ ಇಡಲಾಗಿತ್ತು. ಬಾಂಬ್ ವಿಲೇವಾರಿ ದಳವು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿತ್ತು.


ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...