Homeಚಳವಳಿಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿ ಪಠ್ಯ ಕೋಮುವಾದೀಕರಣ ಮಾಡಿರುವುದನ್ನು ವಿರೋಧಿಸಿ ಪಠ್ಯ ಅನುಮತಿ ನಿರಾಕರಣೆ ಪರ್ವ ಮುಂದುವರೆದಿದೆ. ಹಿರಿಯ ಸಾಹಿತಿ ದೇವನೂರ ಮಹಾದೇವರಿಂದ ಆರಂಭಗೊಂಡ ನನ್ನ ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನರವರು ಸಹ ಕೈ ಜೋಡಿಸಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರಿಗೆ ಪತ್ರ ಬರೆದಿರುವ ಪ್ರೊ. ಕೆ.ಎಸ್ ಮಧುಸೂದನರವರು, “ಕರ್ನಾಟಕ ರಾಜ್ಯದ 9ನೇ ತರಗತಿಯ ದ್ವೀತಿಯ ಭಾಷಾ ಕನ್ನಡ ಪುಸ್ತಕ “ತಿಳಿಗನ್ನಡ” ಪಠ್ಯ ಪುಸ್ತಕ ರಚನಾ ಸಮಿತಿ ಅಧ್ಯಕ್ಷನಾಗಿ ನಾನು ಕಾರ್ಯ ನಿರ್ವಹಿಸಿದ್ದೆನು. ಈಗಲೂ ನನ್ನ ಅಧ್ಯಕ್ಷತೆಯಲ್ಲಿ ಅದೇ ಪಠ್ಯ ಮುಂದುವರೆದಿದೆ ಎಂದು ತಿಳಿದು ಬಂದಿದೆ. ಕರ್ನಾಟಕದ ನಾಡು ನುಡು ಸಂಸ್ಕೃತಿಯ ಅಂತಃಸಾಕ್ಷಿಯಂತಿರುವ ಮಾನ್ಯ ಕುವೆಂಪುರವರನ್ನು ಈಗನ ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರು ಲಘುವಾಗಿ ಗೇಲಿ ಮಾಡಿದ್ದಕ್ಕೆ ಮನನೊಂದು ಹಾಗೂ ಪ್ರತಿಭಟಿಸುತ್ತಾ ಭಾಷಾ ಪಠ್ಯಪುಸ್ತಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ಪಠ್ಯದಲ್ಲಿ ನನ್ನ ಹೆಸರು ಮತ್ತು ನಾನು ಬರೆದ ಪಾಠ ಮುನ್ನ ಪ್ರಸ್ತಾವನೆಯನ್ನು ಸೇರಿಸಬಾರದು” ಎಂದು ಮನವಿ ಮಾಡಿದ್ದಾರೆ.

ಅದೇ ರೀತಿಯಾಗಿ ನಿವೃತ್ತ ತರ್ಕ ಶಾಸ್ತ್ರ ಉಪನ್ಯಾಸಕರಾದ ಚಂದ್ರಶೇಖರ ತಾಳ್ಯರವರು 6ನೇ ತರಗತಿಯ ದ್ವಿತೀಯ ಭಾಷಾ ಪಠ್ಯದಲ್ಲಿ ನನ್ನ ಒಂದು ಸೋಜಿಗದ ಪದ್ಯ ಎಂಬ ಕವಿತೆ ಸೇರ್ಪಡೆಯಾಗಿದೆ. ಅದನ್ನು ಪಠ್ಯವಾಗಿ ಬೋಧಿಸಲು ನನ್ನ ಅನುಮತಿಯನ್ನು ವಾಪಸ್ ಪಡೆಯುತ್ತಿರುವೆ ಎಂದು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ತಮ್ಮ ಪತ್ರದಲ್ಲಿ “ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಶಿಕ್ಷಣ ಕ್ಷೇತ್ರದ ಮೇಲಿನ ಸಾಂಸ್ಕೃತಿಕ ಹಲ್ಲೆ ಮಿತಿ ಮೀರುತ್ತಿದೆ. ಅದೀಗ ಪಠ್ಯಕ್ರಮದ ಮೇಲೂ ತನ್ನ ಕರಿನೆರಳು ಚಾಚುತ್ತಿದೆ. ಅಸಾಂವಿಧಾನಿಕ ನಿರ್ಧಾರಗಳಿಂದ ಇಡೀ ಶೈಕ್ಷಣಿಕ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಅನೈತಿಕ ನಡೆ ನನ್ನಂಥ ಲೇಖಕನನ್ನು ಅಧೀರನನ್ನಾಗಿ ಮಾಡುತ್ತದೆ. ಇದು ಕನ್ನಡ ಪರಂಪರೆಯನ್ನು ಕುಬ್ಜಗೊಳಿಸುವ ಅಕ್ರಮ ನಡೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪಠ್ಯ ಪರಿಷ್ಕರಣೆಯ ನೆಪದಲ್ಲಿ ನಡೆಯುತ್ತಿರುವ ಈ ಸಂಸ್ಕ್ರತಿ ತಿರುಚೀಕರಣ ನಮ್ಮ ಪರಂಪರಾಗತ ಸಂಸ್ಕೃತಿಯನ್ನೇ ವಿರೂಪಗೊಳಿಸವಂತಿಹುದು. ಇದನ್ನು ತಾವು ಗಮನಿಸಬೇಕು ಎನ್ನುವುದು ನನ್ನ ಆಗ್ರಹ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನೂ ನಾಡಿನ ಸಾಹಿತಿಗಳು ಈ ಮರುಪರೀಕ್ಷೆಗೆ ಅಭಿಪ್ರಾಯ ಮಂಡಿಸಬೇಕು… ಮುಖ್ಯವಾಗಿ ನಮ್ಮ ಚೆಡ್ಡಿ ಸಾಹಿತಿ ಎಸ್. ಎಲ್ ಭೈರಪ್ಪ ಅವರ ಅಭಿಪ್ರಾಯ ಏನು ಅಂತಾ ತಿಳಿಯಬೇಕಾಗಿದೆ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....