Homeಕರ್ನಾಟಕಪಠ್ಯ ಪುಸ್ತಕ ಹಗರಣ - ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

ಪಠ್ಯ ಪುಸ್ತಕ ಹಗರಣ – ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

- Advertisement -
- Advertisement -

ರಾಜ್ಯದ ಪಠ್ಯ ಪುಸ್ತಕ ಹಗರಣದ ಕುರಿತು ಮಾತನಾಡಿದ ಹಿರಿಯ ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಅವರು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ‘ಮೂರ್ಖ’ ಎಂದು ಬುಧವಾರ ಕರೆದಿದ್ದು, ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಕಲಾನಿಕೇತನ ಆಯೋಜಿಸಿದ್ದ ಪಠ್ಯ ಪುಸ್ತಕಗಳ ಪರಿಷ್ಕರಣೆ ಕುರಿತ ಸಂವಾದದಲ್ಲಿ ಮಾತನಾಡಿದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ನಿರಂಜನಾರಾಧ್ಯ ಅವರು, ‘‘ಸಚಿವ ಬಿ ಸಿ ನಾಗೇಶ್ ಅವರು ಎಷ್ಟು ಮೂರ್ಖರೆಂದರೆ ಅವರಿಗೆ ಶಿಕ್ಷಣದ ಬಗ್ಗೆ ಜ್ಞಾನವೇ ಇಲ್ಲ’’ ಎಂದು ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘‘ಸಚಿವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿದ್ದರೆ, ಪಠ್ಯಕ್ರಮದ ಚೌಕಟ್ಟು ಲಭ್ಯವಿಲ್ಲ ಎಂಬ ಕಾರಣ ನೀಡಿ ಪಠ್ಯಪುಸ್ತಕ ಪರಿಷ್ಕರಣೆಗೆ ನೇಮಕಗೊಂಡ ವ್ಯಕ್ತಿಯನ್ನು ತಡೆಯುತ್ತಿದ್ದರು. ಈ ಸಮಿತಿಯನ್ನು ಹಿಂದಿನ ಸಚಿವರು ರಚಿಸಿದ್ದರು. ಆದರೆ ಸಚಿವ ಸ್ಥಾನವನ್ನು ಬಿಸಿ ನಾಗೇಶ್‌ ವಹಿಸಿಕೊಂಡ ನಂತರ, ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಯಾವುದಾದರೂ ನಿಯಮಗಳಿವೆಯೇ ಎಂಬುವುದನ್ನು ಕೂಡಾ ಅವರು ಪರಿಶೀಲಿಸಿಲ್ಲ” ಎಂದು ನಿರಂಜನಾರಾಧ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅವರು ಉದ್ದೇಶಪೂರ್ವಕವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ್ದಾರೆ ಎಂದು ಸಚಿವರ ಈ ದುರಹಂಕಾರವೇ  ಎತ್ತಿ ತೋರಿಸುತ್ತದೆ” ಎಂದು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ಉಲ್ಲೇಖಿಸಿ ನಿರಂಜನಾರಾಧ್ಯ ಹೇಳಿದ್ದಾರೆ.

ಪರಿಷ್ಕೃತ ಪಠ್ಯಪುಸ್ತಕಗಳನ್ನು ಶಾಲಾ ಮಕ್ಕಳಿಗೆ ವಿತರಿಸಲು ಸರಕಾರಕ್ಕೆ ಯಾವ ನೈತಿಕತೆ ಇದೆ ಎಂದು ನಿರಂಜನಾರಾಧ್ಯ ಪ್ರಶ್ನಿಸಿದ್ದು, ‘‘ಪರಿಷ್ಕರಣೆ ಬಳಿಕ ಯಾವುದೇ ಸಮಸ್ಯೆಗಳಿದ್ದರೆ ಸಮಿತಿ ಅಧ್ಯಕ್ಷರೇ ಹೊಣೆಗಾರರಾಗುತ್ತಾರೆ ಎಂದು ಸರಕಾರವೇ ತನ್ನ ಆದೇಶದಲ್ಲಿ ಹೇಳಿರುವಾಗ, ಇಷ್ಟೊಂದು ಆಕ್ಷೇಪಣೆಗಳು ವ್ಯಕ್ತವಾಗುತ್ತಿದ್ದರೂ ಇಲಾಖೆ ಯಾವ ಪ್ರಮಾಣದಲ್ಲಿ ಪುಸ್ತಕಗಳನ್ನು ವಿತರಿಸುತ್ತಿದೆ?’’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಕಾರ್ಯಕ್ರಮದಲ್ಲಿ ಹಿಂದಿನ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ನೇತೃತ್ವ ವಹಿಸಿದ್ದ ಹಿರಿಯ ಸಾಹಿತಿ, ಪ್ರೊಫೆಸರ್‌ ಬರಗೂರು ರಾಮಚಂದ್ರಪ್ಪ ಮಾತನಾಡಿ, ‘‘ರಾಜ್ಯದ ಧ್ವಜವನ್ನು ಒಳ ಉಡುಪಿಗೆ ಹೋಲಿಸಿದ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ ವ್ಯಕ್ತಿಯಿಂದ ಪ್ರಮಾಣ ಪತ್ರ ಪಡೆಯುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಸಮಿತಿ ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಸಮರ್ಥಿಸಿಕೊಂಡ ಬರಗೂರು, “ನಾವು ಸಾವರ್ಕರ್ ಸೇರಿದಂತೆ ಯಾರ ಬಗ್ಗೆಯೂ ನಕಾರಾತ್ಮಕ ಮಾಹಿತಿಯನ್ನು ನೀಡಿಲ್ಲ” ಎಂದು ಹೇಳಿದ್ದಾರೆ.

“ಎಲ್ಲರಲ್ಲಿಯೂ ಧಾರ್ಮಿಕ ವಿಚಾರಧಾರೆ ಇರುವುದು ಸಾಮಾನ್ಯ. ಆದರೆ ಅದನ್ನು ಪಠ್ಯಪುಸ್ತಕಗಳ ಮೂಲಕ ಮಕ್ಕಳ ಮೇಲೆ ಹೇರುವುದು ಸ್ವೀಕಾರಾರ್ಹವಲ್ಲ. ಪಠ್ಯಪುಸ್ತಕಗಳನ್ನು ಬರೆಯುವಾಗ ಅಥವಾ ಪರಿಷ್ಕರಿಸುವಾಗ, ನಾವು ನಮ್ಮ ಸಿದ್ಧಾಂತದೊಂದಿಗೆ ಮಾನಸಿಕ ಅಂತರವನ್ನು ಕಾಯ್ದುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಸೇರಿಂದರೆ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತೆಲಂಗಾಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸುತ್ತೇವೆ: ಅಮಿತ್‌ ಶಾ

0
ಲೋಕಸಭೆ ಚುನಾವಣೆ ಹಿನ್ನೆಲೆ ಮುಸ್ಲಿಮರನ್ನೇ ಟಾರ್ಗೆಟ್‌ ಮಾಡಿಕೊಂಡು ದ್ವೇಷದ ಹೇಳಿಕೆ ನೀಡುತ್ತಾ ಬಿಜೆಪಿ ನಾಯಕರು ಹಿಂದೂ ಸಮುದಾಯದ ಜನರ ಓಲೈಕೆ ರಾಜಕೀಯ ಮಾಡುತ್ತಿರುವುದು ವ್ಯಾಪಕವಾಗಿದೆ. ಇದರ ಮುಂದುವರಿದ ಭಾಗವಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು...