Homeಕರ್ನಾಟಕಕುವೆಂಪು & ನಾಡಗೀತೆ ನಿಂದಕನಿಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ: ಮುಂದುವರೆದ ಪ್ರತಿಭಟನೆಗಳು

ಕುವೆಂಪು & ನಾಡಗೀತೆ ನಿಂದಕನಿಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ: ಮುಂದುವರೆದ ಪ್ರತಿಭಟನೆಗಳು

- Advertisement -
- Advertisement -

ರಾಜ್ಯ ಪಠ್ಯ ಪುಸ್ತಕ ಮರು ಪರಿಷ್ಕರಣೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಸೋಮವಾರವೂ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಕಡೆಯು ಇಂದು ಪ್ರತಿಭಟನೆ ಮುಂದುವರೆದಿದೆ. ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ, ಮೈಸೂರು ಬ್ಯಾಂಕ್ ವೃತ್ತ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಪ್ರತಿಭಟನೆಗಳು ದಾಖಲಾಗಿವೆ.

ರಾಷ್ಟ್ರಕವಿ ಕುವೆಂಪು ಮತ್ತು ನಾಡಗೀತೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅವಮಾನ ಮಾಡಿದ ಪಠ್ಯ ಪುಸ್ತಕ ಮರು ಪರಿಷ್ಕರಣಾ ಸಮಿತಿಯನ್ನು ರದ್ದುಪಡಿಸಿ, ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯವನ್ನು ಅಳವಡಿಸಲು ಒತ್ತಾಯಿಸಿ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಬಳಿ ಪ್ರತಿಭಟನೆ ವಕೀಲರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಯಚೂರಿನ ಸಿಂಧನೂರಿನಲ್ಲಿ ಪ್ರತಿಭಟನೆ

ರಾಷ್ಟ್ರಕವಿ ಕುವೆಂಪು ಅವರನ್ನು ಅಗೌರವಸಿ ಪಠ್ಯ ಪುಸ್ತಕಗಳನ್ನು ಕಲುಷಿತಗೊಳಿಸುತ್ತಿರುವ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸಬೇಕು ಹಾಗೂ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿ, ‘ಜನತಾಂತ್ರಿಕ ಶಿಕ್ಷಣಕ್ಕಾಗಿ ಜಾಗೃತ ನಾಗರಿಕರ ವೇದಿಕೆ’, ‘ಮನುಜಮತ ಬಳಗ ಸಿಂಧನೂರು’ ಸಂಘಟನೆಗಳ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ಸಿಂಧನೂರು ತಹಶಿಲ್ದಾರರ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.

ಪಠ್ಯಪುಸ್ತಕಗಳಲ್ಲಿ ಮನುವಾದಿ ಚಿಂತನೆಗಳ ಪಾಠಗಳನ್ನು ಸೇರಿಸುವ ಮೂಲಕ ಶಿಕ್ಷಣವನ್ನು ಕೇಸರಿಣಗೊಳಿಸಿ ಮಕ್ಕಳ ಭವಿಷ್ಯವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹಾಳುಗೆಡುವಲು ಹೊರಟಿದೆ. ಇದು ಶಿಕ್ಷಣ ಕ್ಷೇತ್ರಕ್ಕಷ್ಟೇ ಅಲ್ಲದೇ ನಾಡಿಗೆ ದೊಡ್ಡ ಆಪತ್ತು ತರಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕುವೆಂಪು ಭಾವಚಿತ್ರ ಬೆಳ್ಳಿರಥದಲ್ಲಿ ಮೆರವಣಿಗೆ

ನಾಡಗೀತೆ ಹಾಗು ರಾಷ್ಟ್ರಕವಿ ಕುವೆಂಪು ಪರವಾಗಿ ವಾಟಾಳ್ ನಾಗಾರಾಜ್‌ ನೇತೃತ್ವದ ‘ಕನ್ನಡ ಚಳವಳಿ ವಾಟಾಳ್‌ ಪಕ್ಷ’ದ ವತಿಯಿಂದ ಕುವೆಂಪು ಅವರ ಆಳೆತ್ತರದ ಭಾವಚಿತ್ರವನ್ನು ಬೆಳ್ಳಿರಥದಲ್ಲಿ ಇಟ್ಟು ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದ ಬಳಿಯಿಂದ ಕೆಂಪೇಗೌಡ ಬಸ್‌ ನಿಲ್ದಾಣದವರೆಗೆ ಮೆರವಣಿಗೆ ಮಾಡಲಾಗಿದೆ.

ಮೆರವಣಿಗೆಯ ಉದ್ದಕ್ಕೂ ‘ನಾಡಗೀತೆ’ಯನ್ನು ನುಡಿಸಲಾಗಿದ್ದು, ಕುವೆಂಪು ಅವರಿಗೆ ಭಾರತರತ್ನ ನೀಡಬೇಕು ಎಂದು ವಾಟಾಲ್ ನಾಗರಾಜ್ ಅವರು ಆಗ್ರಹಿಸಿದ್ದಾರೆ.

ಸಮಿತಿಯ ರದ್ದತಿಗಾಗಿ ಮತ್ತು ಪರಿಷ್ಕರಣೆ ಮಾಡಿರುವ ಪಠ್ಯವನ್ನು ಕೈಬಿಟ್ಟು ಹಳೆಯ ಪಠ್ಯವನ್ನೇ ತರಬೇಕು ಎಂದು ಆಗ್ರಹಿಸಿ ರಾಜ್ಯದ ಹಲವು ವಿದ್ಯಾರ್ಥಿ ಸಂಘಟನೆಗಳು ಮಂಗಳವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿವೆ.

ಇಷ್ಟೇ ಅಲ್ಲದೆ, ಪಠ್ಯ ಪುಸ್ತಕ ಸಮಿತಿಯನ್ನು ವಿರೋಧಿಸಿ ಜೂನ್‌ 10ರಂದು ದಲಿತ, ರೈತ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ತೀರ್ಮಾನ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...