Homeಮುಖಪುಟಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

- Advertisement -
- Advertisement -

ಮೀರತ್‌ನಲ್ಲಿರುವ ಸರ್ಕಾರಿ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯವು ರಾಮದೇವ್, ಯೋಗಿ ಆದಿತ್ಯನಾಥರನ್ನು ದಾರ್ಶನಿಕರು ಎಂದು ಈಗಾಗಲೇ ತನ್ನ ಪಠ್ಯಕ್ರಮದಲ್ಲಿ ಸೇರಿಸಿದ್ದು, ಉಳಿದ ವಿವಿಗಳು ಶೀಘ್ರದಲ್ಲೇ ಅನುಸರಿಸುವ ಸಾಧ್ಯತೆಯಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಉತ್ತರ ಪ್ರದೇಶ ಕೋವಿಡ್ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಈಗಾಗಲೇ ಟೀಕೆ ಎದುರಿಸಿದ್ದಾರೆ. ಅಲೋಪತಿ ವೈದ್ಯ ಪದ್ದತಿಯನ್ನು ಅವಹೇಳನ ಮಾಡಿದ ಕಾರಣಕ್ಕಾಗಿ ಬಾಬಾ ರಾಮ್‌ದೇವ್‌ ದೊಡ್ಡ ವಿರೋಧ ಎದುರಿಸಿದ್ದಾರೆ. ಆದರೆ ಈ ಇಬ್ಬರನ್ನು ಹೀರೋ ಮಾಡಲು ಬಿಜೆಪಿ ಹೊರಟಿದೆಯೇ? ಕೋವಿಡ್‌ಗಿಂತ ಮುಂದಿನ ವರ್ಷದ ಉತ್ತರಪ್ರದೇಶದ ಚುನಾವಣೆಯೇ ಬಿಜೆಪಿಗೆ ಆದ್ಯತೆಯಾಗಿದೆಯೇ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಕುರಿತು ಉತ್ತರ ಪ್ರದೇಶದ ರಾಜ್ಯ ಸಮಿತಿಯು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯೋಗ ಗುರು ಬಾಬಾ ರಾಮದೇವ್ ಅವರು ಬರೆದ ಪುಸ್ತಕಗಳನ್ನು ರಾಜ್ಯದಾದ್ಯಂತದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಅವುಗಳ ಅಂಗಸಂಸ್ಥೆ ಕಾಲೇಜುಗಳಲ್ಲಿ ತತ್ವಶಾಸ್ತ್ರ ಕೋರ್ಸ್ ಅಡಿಯಲ್ಲಿ ಈ ಎರಡು ಪುಸ್ತಕಗಳನ್ನು ಶಿಫಾರಸು ಮಾಡಲಾಗಿದೆ.

ಉತ್ತರಪ್ರದೇಶದ ಸರ್ಕಾರದ ಅಧೀನದಲ್ಲಿ ಇರುವ ಮೀರತ್‌ನ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯ (ಸಿಸಿಎಸ್‌ಯು) ಈಗಾಗಲೇ ತನ್ನ ಪಠ್ಯಕ್ರಮದಲ್ಲಿ ಪುಸ್ತಕಗಳನ್ನು ಸಂಯೋಜಿಸಿದೆ. ಇದರಲ್ಲಿ ‘ದಾರ್ಶನಿಕರಾದ’ ಬಾಬಾ ಮತ್ತು ಯೋಗಿ ಅವರ ಬಗ್ಗೆಯೇ ಪುಸ್ತಕಗಳಿವೆ, ಅವರು ಬರೆದ ಪುಸ್ತಕಗಳೇ ಪಠ್ಯವಾಗಿವೆ ಮತ್ತು ಕೆಲವು ಕಡೆ ಪಾಠಗಳೂ ಇವೆ.
ಆದಿತ್ಯನಾಥ್ ಅವರ ಹತ್ಯೋಗ ಕಾ ಸ್ವರೂಪ್ ವಾ ಸಾಧನಾ ಮತ್ತು ಬಾಬಾ ರಾಮದೇವ್ ಅವರ ಯೋಗ ಸಾಧನಾ ವಾ ಯೋಗ ಚಿಕಿತ್ಸಾ ರಹಸ್ಯ ಈಗ ವಿಶ್ವವಿದ್ಯಾಲಯದ ಎರಡನೇ ಸೆಮಿಸ್ಟರ್ ಪದವಿಪೂರ್ವ ತತ್ವಶಾಸ್ತ್ರ ಪಠ್ಯಕ್ರಮದ ಭಾಗವಾಗಿವೆ!

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿಂತಕ ಬಂಜಗೆರೆ ಜಯಪ್ರಕಾಶ್, ‘ಈ ಹೊಸ ಶಿಕ್ಷಣ ನೀತಿ ಎಂಬುದೇ ಒಂದು ಅಜೆಂಡಾ. ಈ ನೀತಿ ಜಾರಿ ತಂದಿರುವುದೇ ದೇಶಪ್ರೇಮ, ರಾಷ್ಟ್ರವಾದದ ಹೆಸರಿನಲ್ಲಿ ಜನರನ್ನು ಒಡೆಯುವ ಭಾಗವಾಗಿಯೇ. ಯೋಗಿ, ರಾಮದೇವ್ ಫಿಲಾಸಫಿ ಪಠ್ಯಗಳಲ್ಲಿ ಬಂದಿರುವುದು ಹೊಸ ಶಿಕ್ಷಣ ನೀತಿಯ ಹುನ್ನಾರಗಳಿಗೆ ಮೊದಲ ಸಾಕ್ಷಿಯಂತಿದೆ. ‘ಮುಂದಿನ ದಿನಗಳಲ್ಲಿ ಗೋಮೂತ್ರ ಸೇವನೆ, ಸೆಗಣಿ ಸ್ನಾನ ಕೂಡ ವಿಜ್ಞಾನ ಮತ್ತು ವೈದ್ಯಕೀಯ ಪಠ್ಯಗಳಲ್ಲಿ ಬಂದರೂ ಬರಬಹುದು’ ಎಂದರು.

ಶೈಕ್ಷಣಿಕ, ಸಾಹಿತ್ಯಿಕ ಮೌಲ್ಯವಂತೆ!

ಹೆಸರಿಸಲು ಇಚ್ಛಿಸದ ಪಠ್ಯಕ್ರಮ ಅಭಿವೃದ್ಧಿ ಸಮಿತಿಯ ಸದಸ್ಯರೊಬ್ಬರು, ಈ ಪುಸ್ತಕಗಳನ್ನು ಅವುಗಳ “ಉನ್ನತ ಸಾಹಿತ್ಯಿಕ ಮೌಲ್ಯ”ದ ಕಾರಣಕ್ಕೆ ಆಯ್ಕೆ ಮಾಡಲಾಗಿದೆ ಎಂದು ದಿ ಪ್ರಿಂಟ್‌ಗೆ ಹೇಳಿದ್ದಾರೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...