Homeಕರ್ನಾಟಕಆದೇಶವಿಲ್ಲದೆ ಪಠ್ಯ ಪರಿಷ್ಕರಣೆ: ಸಂಪುಟದಿಂದ ಬಿ.ಸಿ.ನಾಗೇಶ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು

ಆದೇಶವಿಲ್ಲದೆ ಪಠ್ಯ ಪರಿಷ್ಕರಣೆ: ಸಂಪುಟದಿಂದ ಬಿ.ಸಿ.ನಾಗೇಶ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು

“ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ?”

- Advertisement -
- Advertisement -

ಸ್ಪಷ್ಟವಾದ ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕಗಳ ಪರಿಷ್ಕರಿಸಲು ಒಬ್ಬ ಕಿಡಿಗೇಡಿ ಟ್ರೋಲರ್‌ನಿಗೆ ಅವಕಾಶ ನೀಡಿ, ಈಗ ಆತ ಮಾಡಿಟ್ಟಿರುವ ಕೊಳಕುಗಳನ್ನೆಲ್ಲ ತಲೆಮೇಲೆ ಇಟ್ಟುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ವಜಾಮಾಡಬೇಕು ಮತ್ತು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ತಿಕ ಕ್ಷೇತ್ರವನ್ನೇ ಅಲ್ಲೋಲಕಲ್ಲೋಲ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಗಳು ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಒಬ್ಬ ಯಕಶ್ಚಿತ್ ಟ್ರೋಲರ್‌‌ನಿಗೆ ಒಪ್ಪಿಸಿ, ಅವನು ಮಾಡುವ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿಟ್ಟಿರುವ ರಾಡಿಗಳನ್ನೆಲ್ಲ ಸಮರ್ಥಿಸುತ್ತಾ ಕೂತಿರುವ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಈ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ ಈ ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ಮತ್ತು ಅವನ ಗ್ಯಾಂಗ್, ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿದೆ. ಇಂತಹ ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ತರಗತಿಗಳಲ್ಲಿ ಬೋಧನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ. ಮೊದಲು ಶಿಕ್ಷಣ ಸಚಿವರನ್ನು ವಜಾಮಾಡಿ, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷನನ್ನು ಬಂಧಿಸಿ ಸರ್ಕಾರಕ್ಕೆ ಆತನಿಂದ ಆಗಿರುವ ನಷ್ಟವನ್ನು ಕಕ್ಕಿಸಿ ಮತ್ತು ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ ಎಂದು ಆಗ್ರಹಿಸಿದ್ದಾರೆ.

ಇಷ್ಟೆಲ್ಲ ತಪರಾಕಿಗಳ ನಂತರವೂ ಮುಖ್ಯಮಂತ್ರಿಗಳು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ. ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ದದ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಪಕ್ಷ ಕಟಿಬದ್ದವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ಮುಖ್ಯಮಂತ್ರಿಗಳ ತಲೆದಂಡ ಅವರ ಪಕ್ಷಕ್ಕೂ ಅನಿವಾರ್ಯವಾಗಬಹುದು ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಮಿಯಾ ಮಿಲ್ಲಿಯಾ |’ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ’ದ ಬಗ್ಗೆ ಪ್ರಶ್ನೆ ಕೇಳಿದ ಪ್ರಾಧ್ಯಾಪಕ ಅಮಾನತು

ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿದ್ದ "ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ವಿವರಿಸಿ" ಎಂಬ ಪ್ರಶ್ನೆಯ ಬಗ್ಗೆ ದೂರುಗಳು ಬಂದ ನಂತರ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಸಮಾಜ ಕಾರ್ಯ...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಂಡ್ಯದ ಮಳವಳ್ಳಿ ಪಟ್ಟಣದ ಅನಂತ್ ರಾವ್ ವೃತ್ತದಲ್ಲಿ ಜನವಾದಿ ಮಹಿಳಾ ಸಂಘಟನೆ, ಡಿವೈಎಫ್‌ಐ, ಎಸ್‌ಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ (ಡಿ.24) ಪ್ರತಿಭಟನೆ ನಡೆಯಿತು....

ಕೇಂದ್ರದ ಜಿ ರಾಮ್‌ ಜಿ ಕಾಯ್ದೆ ವಿರುದ್ದ ತಮಿಳುನಾಡಿನಾದ್ಯಂತ ಬೃಹತ್ ಪ್ರತಿಭಟನೆ

ಕೇಂದ್ರದ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಕಾಯ್ದೆ, 2025 (ವಿಬಿ-ಜಿ ರಾಮ್‌ ಜಿ) ವಿರುದ್ದ ತಮಿಳುನಾಡಿನ ಆಡಳಿತರೂಢ ಡಿಎಂಕೆ ಮೈತ್ರಿಕೂಟವು ಬುಧವಾರ (ಡಿ.24) ರಾಜ್ಯದಾದ್ಯಂತ ಬೃಹತ್...

ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ...

ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು

ಕಾಂಗ್ರೆಸ್ ಬೆಂಬಲಿತ ಸರಪಂಚ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಪದ್ಮಾವತಿ ಮತ್ತು ಅವರ ಮಗ ಪ್ರಸಾದ್ ರೆಡ್ಡಿ ಎಂಬುವವರು ಸೋಮವಾರ ಕೊಹಿರ್ ಮಂಡಲದ ಸಜ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಕುಟುಂಬದ ಮನೆಯನ್ನು...

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

"ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ" ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ...

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...