Homeಕರ್ನಾಟಕಪಠ್ಯ ವಾಪಸಾತಿ: ಕೇಸರೀಕರಣ ವಿರುದ್ಧದ ಸಮರಕ್ಕೆ ಮೂಡ್ನಾಕೂಡು, ಈರಪ್ಪ ಕಂಬಳಿ ಸೇರ್ಪಡೆ

ಪಠ್ಯ ವಾಪಸಾತಿ: ಕೇಸರೀಕರಣ ವಿರುದ್ಧದ ಸಮರಕ್ಕೆ ಮೂಡ್ನಾಕೂಡು, ಈರಪ್ಪ ಕಂಬಳಿ ಸೇರ್ಪಡೆ

- Advertisement -
- Advertisement -

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯಪುಸ್ತಕಗಳನ್ನು ಕೇಸರೀಕರಣ ಮಾಡಿರುವ ವಿರುದ್ಧ ರಾಜ್ಯದಲ್ಲಿ ಎದ್ದಿರುವ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ ಐಐಟಿ, ಸಿಇಟಿ ಪ್ರೊಫೆಸರ್‌ ಆಗಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟುಗಳಿಗೆ ಎಲ್ಲ ವಲಯಗಳಿಂದ ವಿರೋಧ ವ್ಯಕ್ತವಾಗುತ್ತಿದ್ದು, ಪಠ್ಯಪುಸ್ತಕದಿಂದ ತಮ್ಮ ಪಾಠಗಳನ್ನು ಲೇಖಕರು ವಾಪಸ್‌ ಪಡೆಯುತ್ತಿರುವುದು ಮುಂದುವರಿದಿದೆ. ಈ ಸಾಲಿಗೆ ಈಗ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿ, ಲೇಖಕ ಈರಪ್ಪ ಎಂ.ಕಂಬಳಿ ಸೇರ್ಪಡೆಯಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿರುವ ಮೂಡ್ನಾಕೂಡು ಅವರು ತಮ್ಮ ಕಾರಣವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಪಠ್ಯಪುಸ್ತಕಗಳ ಕೇಸರೀಕರಣ ವಿರೋಧಿಸಿ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಮೂಡ್ನಾಕೂಡು ಪತ್ರದಲ್ಲೇನಿದೆ?

ಕರ್ನಾಟಕ ಘನ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಮಿತಿಯನ್ನು ನೇಮಿಸಿ ಶಾಲಾ ಪಠ್ಯಗಳನ್ನು ಕೇಸರೀಕರಣಗೊಳಿಸುತ್ತಿರುವ ಬಗ್ಗೆ ಕನ್ನಡ ಸಾರಸ್ವತ ಲೋಕ ವಿಚಲಿತಗೊಂಡಿದೆ. ಬಸವಣ್ಣನವರ ಕುರಿತು ತಪ್ಪು ಮಾಹಿತಿ ನೀಡುವುದು, ಮಹಾನ್ ದಾರ್ಶನಿಕ ಕವಿ ಕುವೆಂಪು ಅವರನ್ನು ಅವಮಾನಿಸುವುದು ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಮಾಡುವ ಅಪಚಾರ.

ಜಾತಿ ವ್ಯವಸ್ಥೆಯಿಂದ ಕಲುಷಿತಗೊಂಡಿರುವ ನಮ್ಮ ಸಮಾಜವನ್ನು ಜಾತ್ಯತೀತತೆಯಿಂದ ಮಾತ್ರ ಸರಿಪಡಿಸಲು ಸಾಧ್ಯ. ಸ್ವಸ್ಥ ಸಮಾಜಕ್ಕಾಗಿ ಮುಂದಿನ ಪೀಳಿಗೆಯನ್ನು ತಯಾರು ಮಾಡುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಕ್ಷೇತ್ರ ಅನವಶ್ಯಕ ವಿದ್ಯಮಾನಗಳಿಂದ ದಾಳಿಗೊಳಗಾಗಿರುವುದು ವಿಷಾದನೀಯ. ಪ್ರಗತಿಪರತೆಯನ್ನು ಪ್ರತಿಪಾದಿಸುವವರನ್ನು ಎಡಪಂಥೀಯರು ಎಂದು ದೂರುವುದು, ದೂರ ಮಾಡುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ.

ಈ ಹಿನ್ನೆಲೆಯಲ್ಲಿ ಐದನೇ ತರಗತಿಗೆ ಪಠ್ಯವಾಗಿರುವ “ನನ್ನ ಕವಿತೆಗೆ” ಎಂಬ ಕವಿತೆಗೆ ನೀಡಿರುವ ನನ್ನ ಅನುಮತಿಯನ್ನು ಈ ಮೂಲಕ ಹಿಂಪಡೆಯುತ್ತಿದ್ದೇನೆ.

  • ಮೂಡ್ನಾಕೂಡು ಚಿನ್ನಸ್ವಾಮಿ

***

ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಈರಪ್ಪ ಎಂ.ಕಂಬಳಿ ಅವರ ಪತ್ರದಲ್ಲೇನಿದೆ?

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅನಾರೋಗ್ಯಕರ ಬೆಳವಣಿಗೆಯನ್ನು ಕಂಡ ನನಗೆ ತೀವ್ರ ಅಸಮಾಧಾನವಾಗಿದೆ. ಈ ಕಾರಣಕ್ಕೆ ಕಳೆದ ಸಾಲಿನಲ್ಲಿ ಹತ್ತನೆಯ ತರಗತಿಯ ನುಡಿ ಕನ್ನಡ ತೃತೀಯ ಭಾಷಾ ಕನ್ನಡ ಪಠ್ಯಪುಸ್ತಕದಲ್ಲಿ ‘ಹೀಗೊಂದು ಟಾಪ್ ಪ್ರಯಾಣ’ ಶೀರ್ಷಿಕೆಯ ನನ್ನ ಲಲಿತ ಪ್ರಬಂಧವನ್ನು ಮುಂದುವರಿಸಬಾರದೆಂದೂ, ಈ ಹಿಂದೆ ನೀಡಿದ್ದ ನನ್ನ ಅನುಮತಿಯನ್ನು ಈ ಮೂಲಕ ವಾಪಸ್‌ ಪಡೆದಿರುವುದನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ.

  • ಈರಪ್ಪ ಎಂ.ಕಂಬಳಿ

ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೇವನೂರ ಮಹಾದೇವ ಅವರು ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಹತ್ತನೇ ತರಗತಿ ಕನ್ನಡ ಪಠ್ಯದಿಂದ ವಾಪಸ್ ಪಡೆಯುವ ಮೂಲಕ ಮೊದಲಿಗೆ ಪ್ರತಿರೋಧವನ್ನು ದಾಖಲಿಸಿದರು. ನಂತರ ವಿದ್ವಾಂಸರಾದ ಜಿ.ರಾಮಕೃಷ್ಣ ಅವರು ‘ಭಗತ್‌ಸಿಂಗ್‌’ ಪಾಠವನ್ನು ವಾಪಸ್ ಪಡೆದರು. 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿದ್ದ “ಮನೆಗೆಲಸದ ಹೆಣ್ಣು ಮಗಳು” ಪದ್ಯವನ್ನು ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಾಪಸ್ ಪಡೆದರು. ಇದೇ ರೀತಿಯಲ್ಲಿ ಪ್ರತಿರೋಧವನ್ನು ವ್ಯಕ್ತಪಡಿಸಿರುವ ಮೂಡ್ನಾಕೂಡು ಚಿನ್ನಾಸ್ವಾಮಿ ಹಾಗೂ ಮೂಡ್ನಾಕೂಡು ಚಿನ್ನಸ್ವಾಮಿ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

ರಾಜೀನಾಮೆ ಮೂಲಕ ಪ್ರತಿರೋಧ

ರಾಷ್ಟ್ರಕವಿ ಕುವೆಂಪು ಮತ್ತು ರಾಷ್ಟ್ರಗೀತೆಯನ್ನು ನಿಂದಿಸಿದವರ ಮೇಲೆ ಕಾನೂನು ಕ್ರಮಕೈಗೊಳ್ಳದೆ, ಅವರಿಗೆ ಜವಬ್ದಾರಿಯುತ ಸ್ಥಾನಗಳನ್ನು ನೀಡಿದ ಸರ್ಕಾರದ ನಡೆಯನ್ನು ಪ್ರತಿಭಟಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸಾಹಿತಿ, ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಸೋಮವಾರ ರಾಜೀನಾಮೆ ಘೋಷಿಸಿದರು.

ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಗಳನ್ನು ಪ್ರತಿಭಟಿಸಿ ‘ರಾಷ್ಟ್ರಕವಿ ಡಾ. ಜಿಎಸ್‌ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷರು ಮತ್ತು ಮೂವರು ಸದಸ್ಯರು ಸೋಮವಾರ ರಾಜೀನಾಮೆ ನೀಡಿದರು. ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಪ್ರೊಫೆಸರ್‌ ಎಸ್‌.ಜಿ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಪ್ರತಿಷ್ಠಾನದ ಸದಸ್ಯರುಗಳಾದ ಡಾ. ಎಚ್‌.ಎಸ್‌. ರಾಘವೇಂದ್ರ ರಾವ್‌, ಡಾ. ಚಂದ್ರ ಶೇಖರ ನಂಗಲಿ, ಡಾ. ನಟರಾಜ ಬೂದಾಳು ಅವರು ಕೂಡಾ ರಾಜೀನಾಮೆಗೆ ನೀಡುವುದಾಗಿ ಪತ್ರದಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...