Homeಕರ್ನಾಟಕಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪಠ್ಯಪುಸ್ತಕಗಳನ್ನು ನೀಡಲು ನಿಮಗೆ ಸಾಧ್ಯವಾಗಿಲ್ಲ. ಮಧ್ಯಾಹ್ನ ಊಟ ಸಿಗದೆ ಅನೇಕ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ.”

- Advertisement -
- Advertisement -

ಪಠ್ಯಪುಸ್ತಕಗಳ ಮರು ಪರಿಶೀಲನೆಯ ವಿವಾದದ ನೆಪದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ವಿಳಂಬವಾಗುತ್ತಿರುವ ವಿರುದ್ಧ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷರಾದ ಬಿ.ಎನ್.ಯೋಗಾನಂದ ಅವರು ಮಾತನಾಡಿ, “ಕೋವಿಡ್ 19 ಬಿಕ್ಕಟ್ಟಿನಿಂದಾಗಿ ರಾಜ್ಯದ ಶೈಕ್ಷಣಿಕ ವಲಯದಲ್ಲಿ ಭಾರೀ ಅಲ್ಲೋಲ ಕಲ್ಲೋಲ ಉಂಟಾಗಿದೆ. ಎರಡು ಶೈಕ್ಷಣಿಕ ಅವಧಿಯಲ್ಲಿ ಬಹುತೇಕ ಮಕ್ಕಳು ಶಾಲೆಗಳ ಮುಖವನ್ನೇ ನೋಡಿಲ್ಲ. ಸರಿಯಾದ ರೀತಿಯಲ್ಲಿ ಮಕ್ಕಳು ಕಲಿಕೆಯಲ್ಲಿ ಭಾಗವಹಿಸಿಲ್ಲ. ಈಗ ಪಠ್ಯಪುಸ್ತಕಗಳೂ ದೊರಕಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ವರ್ಷದ ಶೈಕ್ಷಣಿಕ ಅಸಮತೋಲನದಿಂದಾಗಿ ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮ ಹೆಸರನ್ನೂ ಸರಿಯಾಗಿ ಬರೆಯದ ಮಟ್ಟಕ್ಕೆ ಹೋಗಿದ್ದಾರೆ. ಈ ವರ್ಷ ತರಗತಿಗಳು ಆರಂಭವಾಗಿ ಒಂದು ವಾರವಾಯಿತು. ಕಳೆದ ಎರಡು ವರ್ಷಗಳೂ ಮಕ್ಕಳಿಗೆ ಸರಿಯಾಗಿ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಸಮವಸ್ತ್ರ, ಬೈಸಿಕಲ್ ಸಿಕ್ಕಿಲ್ಲ, ಬಿಸಿಯೂಟ ಸಿಕ್ಕಿಲ್ಲ. ಇಂತಹ ಸಂದರ್ಭದಲ್ಲಿ ಈ ಸರ್ಕಾರಕ್ಕೆ ಪಠ್ಯಪುಸ್ತಕಗಳ ಪರಿಷ್ಕರಣೆಯ ಅಗತ್ಯವೇನಿತ್ತು? ಎಂದು ಪ್ರಶ್ನಿಸಿದರು.

“ಕಳೆದ ಎರಡು ವರ್ಷಗಳ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಕ್ಷಣಕ್ಕೆ 48,000 ಕೋಟಿ ರೂ. ನೀಡಿದ್ದು, ಆ ಹಣ ಏನಾಯಿತು ಎಂಬುದು ಯಕ್ಷ ಪ್ರಶ್ನೆಯಾಗಿದೆ” ಎಂದ ಅವರು, “ಇಂದು ಹಿಂದುಳಿದ ಜಿಲ್ಲೆಗಳಲ್ಲಿ, ಹೈದ್ರಾಬಾ‌ದ್‌ ಕರ್ನಾಟಕ, ಮುಂಬೈ ಕರ್ನಾಟಕದ ಭಾಗಗಳಲ್ಲಿ ಮಕ್ಕಳಿಗೆ ಬಿಸಿಯೂಟವೂ ಸಿಗುತ್ತಿಲ್ಲ. ಶಾಲೆಗಳಲ್ಲಿ ಊಟ ಸಿಗದೆ ಈ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ. ಬಾಲ್ಯ ವಿವಾಹ ಪದ್ಧತಿಗಳೂ ಜಾರಿಯಲ್ಲಿವೆ. ಈ ಸಂದರ್ಭದಲ್ಲಿ ಸರ್ಕಾರಕ್ಕೆ ಏನಾದರೂ ಕಿಂಚಿತ್ತು ಶೈಕ್ಷಣಿಕ ಬದುಕಿನ ಬಗ್ಗೆ ಕಾಳಜಿ ಇದ್ದರೆ ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ತುಂಬಿಕೊಡುತ್ತಿತ್ತು” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ಇರುವ ಬೇಗ ತುಂಬಬೇಕಿತ್ತು. ಆದಷ್ಟು ಬೇಗ ಈ ಮಕ್ಕಳಿಗೆ ಪಠ್ಯಪುಸ್ತಕವನ್ನು ಕೊಡಬೇಕಾಗಿತ್ತು. ಅದನ್ನು ಮಾಡದೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ವಿವಾದ ಸೃಷ್ಟಿಸಲಾಗಿದೆ. ಪಠ್ಯಪುಸ್ತಕ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಯಾವ ಪಠ್ಯವನ್ನು ತೆಗೆಯಬೇಕು, ಯಾವುದನ್ನು ಹಾಕಬೇಕು ಎಂದು ಚರ್ಚಿಸುತ್ತಿದ್ದಾರೆ. ವಿವಾದ ಮುಗಿಯುವುದು ಯಾವಾಗ? ಎಂದು ಕೇಳಿದರು.

ಈಗಾಗಲೇ ಎರಡು ವರ್ಷ ನಷ್ಟವಾಗಿದೆ. ಈ ವರ್ಷವೂ ಶೈಕ್ಷಣಿಕ ವಲಯದ ನೂರಾರು ಕೋಟಿ ರೂ.ಗಳನ್ನು ಲೂಟಿ ಮಾಡುವುದಕ್ಕಾಗಿ ಪಠ್ಯ ಪುಸ್ತಕಗಳ ಪರಿಷ್ಕರಣೆಯ ಹೆಸರಲ್ಲಿ ಗೊಂದಲ ಸೃಷ್ಟಿಸಲಾಗಿದೆ. ನಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರ ವೈಫಲ್ಯ ಎದ್ದು ಕಾಣುತ್ತಿದೆ. ಈ ಎಲ್ಲ ಗಂಡಾಂತರಗಳಿಗೆ ಶಿಕ್ಷಣ ಸಚಿವರೇ ನೇರ ಹೊಣೆಗಾರರು. ಹೀಗಾಗಿ ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆಯನ್ನು ನೀಡಬೇಕು. ಇಲ್ಲವಾದರೆ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಯವರು ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಮಕ್ಕಳಿಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಶಿಕ್ಷಣದಲ್ಲಿ ಕೇಸರೀಕರಣ, ಖಾಸಗೀಕರಣ ಮಾಡುತ್ತಾ ಹೋಗುತ್ತಿದ್ದಾರೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಕೈಗೆಟಕದಂತಾಗುತ್ತಿದೆ. ಇದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರು. ಏನಾದರೂ ಮಾಡಿ ದುಡ್ಡು ದೋಚಬೇಕೆಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಮನಸ್ಥಿತಿಯಾಗಿದೆ. ಪರಿಷ್ಕರಣೆ ಮಾಡುವ ನೆಪದಲ್ಲಿ ಮುದ್ರಣ ಮಾಡುತ್ತಿದ್ದಾರೆ. ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಸಿಗದೆ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪುಸ್ತಕಗಳನ್ನು ಕೊಡದಿದ್ದರೆ ನೀವು ಹೇಗೆ ಗುಣಮಟ್ಟವನ್ನು ತರಲು ಸಾಧ್ಯ?

ಸೈಕಲ್‌ ನೀಡುತ್ತಿದ್ದ ಕಾರಣ ಸಾರಿಗೆ ಸೌಲಭ್ಯವಿಲ್ಲದ ಗುಡ್ಡಗಾಡು ಪ್ರದೇಶದಲ್ಲಿ ಹೆಚ್ಚು ದಾಖಲಾತಿ ಆಗುತ್ತಿತ್ತು. ಈ ವರ್ಷವೂ ಮಕ್ಕಳಿಗೆ ಬೈಸಿಕಲ್ ಸಿಗುವುದು ಅನುಮಾನವಾಗಿದೆ. ನಮ್ಮ ಸಣ್ಣ ಅಭಿಪ್ರಾಯವನ್ನು ಕೇಳುವ ತಾಳ್ಮೆ ಸರ್ಕಾರಕ್ಕೆ ಇಲ್ಲ. ನಮ್ಮ ಮಕ್ಕಳು ಏನನ್ನು ಕಲಿಯಬೇಕು, ಎಷ್ಟು ಕಲಿಯಬೇಕು, ಹೇಗೆ ಕಲಿಯಬೇಕು ಎಂದು ನಿರ್ಧರಿಸುವಲ್ಲಿ ನಮ್ಮ ಪಾತ್ರ ಏನು ಇಲ್ಲವೇ? ಎಂದು ಹರಿಹಾಯ್ದಿದ್ದಾರೆ.

ಪಠ್ಯಪುಸ್ತಕಗಳನ್ನು ಪರಿಶೀಲನೆ ಮಾಡುವುದನ್ನು ತಕ್ಷಣ ಕೈಬಿಡಬೇಕು. ಈ ಹಿಂದೆ ಇದ್ದ ಪಠ್ಯಪುಸ್ತಕಗಳನ್ನೇ ತಕ್ಷಣದಲ್ಲಿ ರಾಜ್ಯದ ಎಲ್ಲ ಶಾಲೆಗಳಿಗೆ ಸರಬರಾಜು ಮಾಡಬೇಕು. ಈ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ತಕ್ಷಣವೇ ವಿಸರ್ಜನೆ ಮಾಡಬೇಕು ಎಂದು ತಮ್ಮ ಆಗ್ರಹಿಸಿದರು.

ನನ್ನ ಮಗನಿಗೆ ಕನ್ನಡ ಪುಸ್ತಕ ಸಿಕ್ಕಿಲ್ಲ. ಪರಿಷ್ಕರಣೆಯ ಹೆಸರಲ್ಲಿ ರಾಜ್ಯದ ಬೊಕ್ಕಸವನ್ನು ಇವರು ಲೂಟಿ ಮಾಡುತ್ತಿದ್ದಾರಲ್ಲ, ಇದನ್ನು ನೋಡಿಕೊಂಡು ನಾವು ಸುಮ್ಮನೆ ಕೂರಬೇಕಾ? ನಮ್ಮ ಬೇಡಿಕೆಯನ್ನು ತಕ್ಷಣದಲ್ಲಿ ಈಡೇರಿಸದಿದ್ದರೆ ಎಲ್ಲ ಸಂಘಟನೆಗಳು, ಶಿಕ್ಷಣ ತಜ್ಞರು, ಪೋಷಕರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ದಲಿತ ಮುಖಂಡರಾದ ಆರ್‌.ಮೋಹನ್‌ ರಾಜ್‌ ಮಾತನಾಡಿ, ಈ ಪಠ್ಯಪುಸ್ತಕವು ಶೂದ್ರ ಹಾಗೂ ಅತಿಶೂದ್ರರನ್ನು ವೇದಗಳ ಕಾಲಕ್ಕೆ, ಮನುವಿನ ಕಾಲಕ್ಕೆ ಕರೆದೊಯ್ಯುವ ಎಲ್ಲ ಹುನ್ನಾರಗಳನ್ನು ಹೊಂದಿದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಶಿಕ್ಷಣ ಎಲ್ಲರಿಗೂ ಸಿಗಬೇಕು, ವೈಜ್ಞಾನಿಕವಾಗಿರಬೇಕು ಎಂದು ಪ್ರತಿಪಾದಿಸಿದರು. ಆದರೆ ಇವರು ವೈದಿಕಶಾಹಿಗೆ ಕರೆದೊಯ್ಯಬೇಕೆಂದು ಹೊರಟಿದ್ದಾರೆ. ಸಮಿತಿಯಲ್ಲಿ ಹತ್ತು ಜನರಲ್ಲಿ ಒಂಬತ್ತು ಜನರು ಒಂದೇ ಜಾತಿಗೆ ಸೇರಿದವರು. ಜನಸಂಖ್ಯೆಯಲ್ಲಿ ಶೇ. 3ರಷ್ಟಿರುವ ಜಾತಿಯನ್ನು ಪ್ರತಿನಿಧಿಸುವವರಷ್ಟೇ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದಾರೆ. ಇದನ್ನು ಸಾಮಾಜಿಕ ನ್ಯಾಯ, ಸಮಾನತೆ ಎನ್ನಲು ಸಾಧ್ಯವೆ? ಎಂದು ಟೀಕಿಸಿದರು.

“ತಳ ಸಮುದಾಯಗಳ ಜಾಗೃತಿ ಮೂಡಿಸಿದ ನಾರಾಯಣಗುರುಗಳನ್ನು ತೆಗೆಯಲು ಹೊರಟಿದ್ದು ಏತಕ್ಕೆ? ವೈಜ್ಞಾನಿಕ ವಿಚಾರಗಳನ್ನು ಪ್ರತಿಪಾದಿಸಿ ಶೂದ್ರ, ಅತಿಶೂದ್ರರಲ್ಲಿ ಜಾಗೃತಿ ಮೂಡಿಸಿದ, ಪ್ರೀತಿ, ಕರುಣೆಯನ್ನು ಸಾರಿದ, ಜಗತ್ತಿಗೆ ಶಾಂತಿಯ ಮಹತ್ವನ್ನು ತಿಳಿಸಿದ ಬುದ್ಧನ ಪಠ್ಯವನ್ನು ತೆಗೆದಿದ್ದಿರಿ. ಏನು ಮಾಡಲು ಹೊರಟಿದ್ದೀರಿ? ಪುರೋಹಿತಶಾಹಿಯನ್ನು, ಮನುವಾದ ಹಾಗೂ ಪಂಚಾಂಗವನ್ನು ತರಲು ಹೊರಟಿದ್ದೀರಿ” ಎಂದು ಆಕ್ರೋಶ ಹೊರಹಾಕಿದರು.

ವಿದ್ಯಾರ್ಥಿ ಬಂಧುತ್ವ ವೇದಿಕೆ ತೋಳಿ ಭರಮಣ್ಣ, ಮುಖಂಡರಾದ ನಾಗೇಶ್ ಅರಳಕುಪ್ಪೆ, ಎಸ್‌ಐಒ ಝೀಶಾನ್‌, ಕೆವಿಎಸ್‌ ಸಂಚಾಲಕರಾದ ಸರೋವರ್‌ ಬೆಂಕಿಕೆರೆ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...