Homeಮುಖಪುಟಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ 'ಪ್ರಜಾಪ್ರಭುತ್ವ' ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು ಹತ್ತನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ‘ಪ್ರಜಾಪ್ರಭುತ್ವ’ ಪಾಠ ಹಾಗೂ ವಿಜ್ಞಾನ ಪಠ್ಯಪುಸ್ತಕದಿಂದ ‘ಆವರ್ತಕ ಕೋಷ್ಟಕ’ (ಪಿರಿಯಾಡಿಕ್ ಟೇಬಲ್) ಪಾಠಗಳನ್ನು ಕೈಬಿಟ್ಟಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಎನ್‌ಸಿಇಆರ್‌ಟಿ, ”ಪಠ್ಯವನ್ನು ತರ್ಕಬದ್ಧಗೊಳಿಸುವ ಜತೆಗೆ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಹೊರೆ ಇಳಿಸುವ ಉದ್ದೇಶದಿಂದ ಈ ವಿರ್ಧಾರ ಕೈಗೊಳ್ಳಲಾಗಿದೆ” ಎಂದು ಹೇಳಿದೆ.

ಎನ್‌ಸಿಇಆರ್‌ಟಿ ನಡೆಗೆ ಶಿಕ್ಷಣತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪಠ್ಯಪುಸ್ತಕದಿಂದ ಮೊಘಲ್ ಸಾಮ್ರಾಜ್ಯ, ಮಹಾತ್ಮಗಾಂಧಿ ಹತ್ಯೆ, ಗುಜರಾತ್ ದಂಗೆ, ಡಾರ್ವಿನ್‌ನ ವಿಕಾಸವಾದ ಸಿದ್ಧಾಂತದ ಕುರಿತ ವಿವರಗಳನ್ನು ಪಠ್ಯಪುಸ್ತಕದಿಂದ ಕೈಬಿಡಲಾಗಿತ್ತು. ಮಂಡಳಿಯ ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ 10ನೇ ತರಗತಿ ಪಠ್ಯಪುಸ್ತಕದಲ್ಲೂ ಪ್ರಮುಖ ವಿಷಯದ ಪಠ್ಯಗಳನ್ನು ಕೈ ಬಿಟ್ಟಿದೆ.

ಈ ಬಗ್ಗೆ ಎನ್‌ಇಆರ್‌ಟಿಯ ಮಾಜಿ ಅಧ್ಯಕ್ಷ ಪ್ರೊ.ಕೃಷ್ಣಕುಮಾರ್ ಅವರು, ”ಮಂಡಳಿಯು ಮಾಡಿದ ಈ ಬದಲಾವಣೆಯು ತರ್ಕಬದ್ಧವೇ ಅಥವಾ ಸಮರ್ಥನೀಯವೇ?” ಎಂದು ಪ್ರಶ್ನೆ ಮಾಡಿದ್ದಾರೆ. ”ಇಂತಹ ಬದಲಾವಣೆಗೆ ವಿವರ ನೀಡಲು ಆಗುವುದಿಲ್ಲ. ವಿಕಾಸವಾದದ ಸಿದ್ಧಾಂತ ಇಲ್ಲದೆ ಒಬ್ಬ ಶಿಕ್ಷಕ, ವಿದ್ಯಾರ್ಥಿಗಳಿಗೆ ಬೋಧಿಸಲು ಹೇಗೆ ಸಾಧ್ಯ? ಪರಿವರ್ತಕ ಕೋಷ್ಟಕ ಇಲ್ಲದೆ ರಸಾಯನ ವಿಜ್ಞಾನ ಇಲ್ಲ” ಎಂದು ತಿಳಿಹೇಳಿದ್ದಾರೆ.

”ಪರಿಷ್ಕರಣೆ ಮಾಡಿರುವ ವಿಜ್ಞಾನ ಪಠ್ಯಪುಸ್ತಕದಲ್ಲಿ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ ಹಾಗೂ ಇಂಧನ ಮೂಲಗಳು ಅಧ್ಯಾಯಗಳನ್ನು ಕೈಬಿಡಲಾಗಿದೆ. ವಿದ್ಯುತ್ ಮತ್ತು ಕಾಂತೀಯತೆಗೆ ವಿಜ್ಞಾನಿ ಮೈಕಲ್ ಫ್ಯಾರಡೆ ಸಲ್ಲಿಸಿದ ಕೊಡುಗೆಯ ಅಧ್ಯಯನದಿಂದ ವಿದ್ಯಾರ್ಥಿಗಳು ವಂಚಿತರಾಗುವಂತಾಗಿದೆ” ಎಂದು ಹೇಳಿದ್ದಾರೆ.

”ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ಪ್ರಜಾಪ್ರಭುತ್ವ ರಾಜಕೀಯ- 1ರಡಿ ಬರುವ ಮಹತ್ವದ ಸಂಘರ್ಷಗಳು ಮತ್ತು ಚಳವಳಿಗಳು, ಪ್ರಜಾಪ್ರಭುತ್ವದ ಸವಾಲುಗಳು, ರಾಜಕೀಯ ಪಕ್ಷಗಳು ಅಧ್ಯಾಯಗಳನ್ನೂ ಕೈಬಿಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: NCERT ಪುಸ್ತಕದಿಂದ ‘ಡಾರ್ವಿನ್‌ನ ವಿಕಾಸದ ಸಿದ್ಧಾಂತ’ ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

ಎನ್‌ಸಿಇಆರ್‌ಟಿ ಸ್ಪಷ್ಟಣೆ

ಮಕ್ಕಳು ಈ ಕೋವಿಡ್ ಪಿಡುಗಿನ ಸಂದರ್ಭದಲ್ಲಿ ಡಿಜಿಟಲ್ ಕಲಿಕೆಯ ಮಹತ್ವದ ಅರಿತಿದ್ದಾರೆ. ಪಠ್ಯಪುಸ್ತಕದಲ್ಲಿದ್ದ ಕಷ್ಟಕರ, ಪುನರಾವರ್ತಿತ ಹಾಗೂ ಅನಗತ್ಯ ಅಂಶಗಳನ್ನು ಕೈಬಿಡಲಾಗಿದೆ ಎಂದು ಎನ್‌ಸಿಇಆರ್‌ಟಿ ತಿಳಿಸಿದೆ.

11 ಮತ್ತು 12ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಈ ವಿಷಯಗಳನ್ನು ಪ್ರತ್ಯೇಕವಾಗಿ ಆಯ್ಕೆ ಮಾಡಿಕೊಂಡು ಕಲಿಯುವ ಅವಕಾಶವಿದೆ. ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ರಸಾಯನ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಆವರ್ತಕ ಕೋಷ್ಟಕ ಕಲಿಯುವ ಅವಕಾಶವಿದೆ ಎಂದು ವಿವರಿಸಿದೆ.

”ಕೋವಿಡ್ ಸಂದರ್ಭದಲ್ಲಿನ ಶೈಕ್ಷಣಿಕ ಸ್ಥಿತಿ ಆಧರಿಸಿ ಪಠ್ಯ ತರ್ಕಬದ್ಧಗೊಳಿಸುವಿಕೆಯ ಪ್ರಕ್ರಿಯೆ ಆರಂಭವಾಗಿದೆ. ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಹೊರೆ ಕಡಿಮೆ ಮಾಡುವ ಆಶಯವೂ ಇದರ ಹಿಂದಿದೆ’ ಎಂದು ಕೇಂದ್ರ ಶಿಕ್ಷಣ ಖಾತೆಯ ರಾಜ್ಯ ಸಚಿವ ಸುಭಾಷ್‌ ಸರ್ಕಾ‌ರ್ ಸಮರ್ಥಿಸಿಕೊಂಡಿದ್ದಾರೆ.

ಮತ್ತೊಂದೆಡೆ ದೇಶದ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಜಾರಿಗೊಳಿಸಬೇಕು ಎಂದು ಆರೆಸ್ಸೆಸ್ ಈಗಾಗಲೇ ಕೇಂದ್ರದ ಮೇಲೆ ಒತ್ತಡ ಹೇರಿದೆ. ಆರೆಸ್ಸೆಸ್‌ನ ಅಂಗ ಸಂಸ್ಥೆಯಾದ ಶಿಕ್ಷಾ ಸಂಸ್ಕೃತಿ ಉತ್ಪಾನ್ ನ್ಯಾಸ್, ಎನ್‌ಸಿಇಆರ್‌ಟಿಯ ಈ ಕ್ರಮಕ್ಕೆ ಬೆಂಬಲ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...