Homeಕರ್ನಾಟಕಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಸುತ್ತೋಲೆ ಹೊರಡಿಸಿ, ನಂತರ ವಾಪಸ್ ಪಡೆಯುವ ಸರ್ಕಾರದ ದ್ವಂದ್ವ ನೀತಿ ಮತ್ತೊಮ್ಮೆ ಸಾಬೀತಾಗಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ತರಾತರಿಯಲ್ಲಿ ಮಾಡಿದ್ದ ಪಠ್ಯಪುಸ್ತಕ ಪರಿಷ್ಕರಣೆಯ ಅಧ್ವಾನ ಬಗೆಹರಿಯುವಂತೆ ಕಾಣುತ್ತಿಲ್ಲ. ನಾಡಗೀತೆಗೆ ಅವಮಾನ ಮಾಡಿದ ಆರೋಪವನ್ನು ಹೊತ್ತಿರುವ ರೋಹಿತ್ ಚಕ್ರತೀರ್ಥ ಎಂಬವರು ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ನಾಡಿನ ಹಿರಿಯ ಲೇಖಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಅಂತಿಮವಾಗಿ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿತ್ತು. ಆದರೆ ಮತ್ತೆ ಆ ಲೇಖಕರ ಪಠ್ಯಗಳು ಸೇರಿಸುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ನಾಡಿನ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಹಾಗೂ ಡಾ. ಜಿ.ರಾಮಕೃಷ್ಣ ಅವರು ಸೇರಿದಂತೆ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದ ಸೆ.23ರ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದಿದೆ. ಈ ಮೂಲಕ ಅವರ ಗದ್ಯ ಮತ್ತು ಪದ್ಯಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

10ನೇ ತರಗತಿಯ ಪಠ್ಯದಲ್ಲಿನ (ಪ್ರಥಮ ಭಾಷೆ) ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಗದ್ಯ, ಜಿ.ರಾಮಕೃಷ್ಣ ಅವರ ‘ಭಗತ್ ಸಿಂಗ್’ ಪೂರಕ ಗದ್ಯ, 9ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’ ಪೂರಕ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ಈರಪ್ಪ ಎಂ.ಕಂಬಳಿ ಅವರ ‘ಹೀಗೊಂದು ಬಸ್ ಪ್ರಯಾಣ’ ಪೂರಕ ಗದ್ಯ, ಸತೀಶ್ ಕುಲಕರ್ಣಿ ಅವರ ‘ಕಟ್ಟುತ್ತೇವೆ ನಾವು’ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ದ್ವಿತೀಯ ಭಾಷೆ) ಸುಕನ್ಯ ಮಾರುತಿ ಅವರ ‘ಏಣಿ’ ಪದ್ಯ, 6ನೇ ತರಗತಿ ಪಠ್ಯದಲ್ಲಿನ (ಪ್ರಥಮ ಭಾಷೆ) ದೊಡ್ಡಹುಲ್ಲೂರು ರುಕ್ಕೋಜಿರಾವ್‌ ಅವರ ‘ಡಾ.ರಾಜ್ ಕುಮಾರ್’ ಗದ್ಯಗಳನ್ನು ಪರಿಗಣಿಸದಂತೆ ಶಿಕ್ಷಣ ಇಲಾಖೆಯು ಒಂದು ತಿಂಗಳ ಹಿಂದೆ ಆದೇಶ ಹೊರಡಿಸಿತ್ತು.

ಹಿಂದುತ್ವದ ಅಜೆಂಡಾಗಳನ್ನು ಹೇರಿ, ಪಠ್ಯಪುಸ್ತಕಗಳನ್ನು ಕೇಸರೀಕರಣ ಮಾಡಿದ ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ನಾಡಿನಾದ್ಯಂತ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಆದೇಶವಿಲ್ಲದೆಯೇ ಪಠ್ಯಪರಿಷ್ಕರಣೆಯಾಗಿದ್ದು ವಿವಾದ ಸೃಷ್ಟಿಸಿತ್ತು. ನಾಡಿನ ಅನೇಕ ಸಾಹಿತಿಗಳು ತಮ್ಮ ಪಠ್ಯವನ್ನು ಕೈಬಿಡುವಂತೆ ಕೋರಿದ್ದರು. ಈ ಸಂಬಂಧ ಪತ್ರ ಸಹ ಬರೆದಿದ್ದರು. ಗದ್ಯ ಮತ್ತು ಪದ್ಯಗಳನ್ನು ಪಠ್ಯದಲ್ಲಿ ಉಳಿಸಿಕೊಳ್ಳಲು ಶಿಕ್ಷಣ ಇಲಾಖೆ ಈ ಲೇಖಕರ ಅನುಮತಿ ಕೋರಿತ್ತು. ಮನವಿಯನ್ನು ಲೇಖಕರು ತಿರಸ್ಕರಿಸಿದ್ದರು. ಈ ಹಿನ್ನೆಲೆ ಸುತ್ತೋಲೆ ಹೊರಡಿಸಲಾಗಿತ್ತು. ಪೋಷಕ, ವಿದ್ಯಾರ್ಥಿಗಳ, ಗಣ್ಯರ ಕೋರಿಕೆಯ ಮೇರೆಗೆ ಪಠ್ಯಗಳನ್ನು ಮುಂದುವರೆಸುತ್ತಿರುವುದಾಗಿ ಇಲಾಖೆ ಸ್ಪಷ್ಟ ಪಡಿಸಿದೆ.

ಸರ್ಕಾರದ ನಿಲುವುಗಳ ಕುರಿತು ಜನರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸುದೀರ್ಘವಾದ ಟಿಪ್ಪಣಿಯನ್ನು ಪೋಸ್ಟ್‌ ಮಾಡಿರುವ ಲೇಖಕಿ ಸಂಜ್ಯೋತಿಯವರು, “ಲೇಖಕರ ಅನುಮತಿಯಿಲ್ಲದೆ ಅವರ ಪಠ್ಯವನ್ನು‌ ಸೇರಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಅವರ ಅನುಮತಿ ಇಲ್ಲದೆಯೂ ಬೇಕಾದಂತೆ ಹಾಗೆ ಬಳಸಿಕೊಳ್ಳುವುದು ಅಕ್ರಮ (illegal) ಮತ್ತು ಸರ್ಕಾರ ನಡೆಸುತ್ತಿರುವವರ ನಿರ್ಲಜ್ಜ ಅಹಂಕಾರ” ಎಂದಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

“ಪೋಷಕರು, ಗಣ್ಯರು ಒತ್ತಾಯಿಸಿದ್ದು ಆ ಪಠ್ಯಗಳನ್ನು ಉಳಿಸಿಕೊಳ್ಳಲು ಅಗತ್ಯವಾದ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಅದಕ್ಕಾಗಿ ಸರ್ಕಾರ ನಿಜಕ್ಕೂ ಮಾಡಬೇಕಿದ್ದದ್ದು ಆ ಲೇಖಕರು ಯಾವ ಕಾರಣಕ್ಕೆ ಅನುಮತಿ ನಿರಾಕರಿಸಿದ್ದರೋ ಅದನ್ನು ಸರಿಪಡಿಸುವುದೇ ಹೊರತು, ಹೀಗೆ ಸರ್ವಾಧಿಕಾರಿ ಧೋರಣೆಯಿಂದ ಅನುಮತಿ ನಿರಾಕರಿಸಿದವರ ಲೇಖನಗಳನ್ನು ‘ನಮ್ಮಿಷ್ಟದಂತೆ ಬಳಸ್ತೀವಿ, ಏನಿವಾಗ’ ಅನ್ನೋ ಧೋರಣೆಯಿಂದ ಅಹಂಕಾರ ಮೆರೆಯೋದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಈಗ ಪೋಷಕರ ಗಣ್ಯರ ಒತ್ತಾಯದ ನೆಪ ಹೇಳಿ ಪಠ್ಯ ಮರುಸೇರ್ಪಡೆಯ ಕತೆ ಹೇಳುತ್ತಿರುವ ಸರ್ಕಾರಕ್ಕೆ ಅದೇ ‘ಪೋಷಕರು, ಗಣ್ಯರು’ ಇನ್ನಿಲ್ಲದಂತೆ ಈ ಅಕ್ರಮ, ಅಪ್ರಬುದ್ಧ ದುರುದ್ದೇಶಪೂರಿತ ಪರಿಷ್ಕರಣಾ ಸಮಿತಿಯನ್ನು ವಿರೋಧಿಸಿದ್ದು, ಅದನ್ನು ವಜಾಗೊಳಿಸುವಂತೆ, ಆ ಪರಿಷ್ಕರಣೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದು ಇದ್ಯಾವುದೂ ಕಿವಿಗೆ ಬೀಳಲಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಯಾವ ಲೇಖಕ, ಬರಹಗಾರರ ಮನೆಗೆ ಹೋಗಿ ಅವರ ಬರಹ ಪಡೆದಿಲ್ಲ. ಇವರೇ ಪಠ್ಯ ಸಮೀತಿಗೆ ಲಾಭಿ ಮಾಡಿ ಸೇರಿಸಿಕೊಂಡಿದ್ದಾರೆ. ಲಾಭ ಕೀರ್ತಿ ಪಡೆದಿದ್ದಾರೆ. ನಾವು ಇವರುಗಳನ್ನು ಅತ್ಯಂತ ಗೌರವಾನ್ವಿತರೆಂದು ಪ್ರೀತಿ ಮಾಡಿದ್ದೆವು. ಆದರಿಸುತ್ತಿದ್ದೆವು. ಪಠ್ಯ ಪ್ರಕಟವಾಗಿ ಮಕ್ಕಳು ಓದುವ ಕಾಲಘಟ್ಟದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯ ಲೆಕ್ಕಿಸದೇ ಸ್ವಾರ್ಥ, ಪ್ರತಿಷ್ಟೆಗೆ ನನ್ನ ಬರಹ ವಾಪಾಸ್ ಪಡೆಯುತ್ತೇವೆ ಎಂದರೆ ಏನ್ರೀ ಅರ್ಥ. ಇವರುಗಳು ಸಾಹಿತಿಗಳೇ!? ಛೇ ಛೇ ಛೇ. ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಮಾರಕವಾಗಿ ನಿಂತಿರುವವರನ್ನು ಬಹಿಷ್ಕಾರ ಹಾಕಬೇಕು.
    ಜೆ.ಎಮ್ ರಾಜಶೇಖರ ಸಾಹಿತಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...