Homeಅಂತರಾಷ್ಟ್ರೀಯಥಾಯ್ಲೆಂಡ್: ಗುಂಡಿನ ದಾಳಿಯಲ್ಲಿ 34 ಜನರ ಹತ್ಯೆ, ತನಗೂ ಗುಂಡು ಹಾರಿಸಿಕೊಂಡ ಮಾಜಿ ಪೊಲೀಸ್

ಥಾಯ್ಲೆಂಡ್: ಗುಂಡಿನ ದಾಳಿಯಲ್ಲಿ 34 ಜನರ ಹತ್ಯೆ, ತನಗೂ ಗುಂಡು ಹಾರಿಸಿಕೊಂಡ ಮಾಜಿ ಪೊಲೀಸ್

- Advertisement -
- Advertisement -

ಥಾಯ್ಲೆಂಡ್ ನ ಈಶಾನ್ಯ ಪ್ರಾಂತ್ಯದಲ್ಲಿನ ಮಕ್ಕಳ ಆರೈಕೆ ಕೇಂದ್ರಕ್ಕೆ ನುಗ್ಗಿದ ಮಾಜಿ ಪೊಲೀಸ್ ಮನಬಂದಂತೆ ಗುಂಡು ಹಾರಿಸಿ 22 ಮಕ್ಕಳು ಸೇರಿದಂತೆ 34 ಜನರನ್ನು ಹತ್ಯೆಗೈದಿದ್ದಾನೆ. ಅಲ್ಲದೆ ತನ್ನ ಹೆಂಡಂತಿ ಮಕ್ಕಳನ್ನು ಕೊಂದು, ತನಗೂ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ವರ್ಷ ಪೊಲೀಸ್ ಕೆಲಸದಿಂದ ಹೊರಬಂದಿದ್ದ ವ್ಯಕ್ತಿಯು ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಬಂದೂಕು ಧರಿಸಿ ಮಕ್ಕಳ ಹಾರೈಕೆ ಕೇಂದ್ರಕ್ಕೆ ನುಗ್ಗಿದ್ದಾನೆ. ಮೊದಲು 8 ತಿಂಗಳ ಗರ್ಭಿಣಿ ಶಿಕ್ಷಕಿ ಸೇರಿ 5-6 ಸಿಬ್ಬಂದಿಗೆ ಗುಂಡು ಹಾರಿಸಿ ಕೊಂದಿದ್ದಾನೆ. ಆನಂತರ 2 ವರ್ಷದ ಮಕ್ಕಳ ಮೇಲೂ ಗುಂಡಿನ ಮಳೆಗೆರೆಯಲಾಗಿದೆ ಎನ್ನಲಾಗಿದೆ.

ಉತೈ ಸಾವನ್ ಈಶಾನ್ಯ ಪ್ರಾಂತ್ಯದ ನಾಂಗ್ ಬುವಾ ಲ್ಯಾಂಫುದಲ್ಲಿನ ಮಕ್ಕಳ ಹಾರೈಕೆ ಕೇಂದ್ರದಲ್ಲಿ ಈ ಅಮಾನುಷ ಘಟನೆ ನಡೆದಿದೆ. ಘಟನೆ ಕುರಿತು ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್ ಒಚಾ ಕಳವಳ ವ್ಯಕ್ತಪಡಿಸಿದ್ದಾರೆ.

ಮೊದಲು ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನ ರಚಿಸಲಾಗಿತ್ತು. ಆದರೆ ಆರೋಪಿ ಪಾನ್ಯಾ ಕಾಮ್ರಾಬ್ ಎಂಬಾತ ತನಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಂತರ ತಿಳಿದುಬಂದಿದೆ.

ಮೆಕ್ಸಿಕೊದಲ್ಲಿ ಗುಂಡಿನ ದಾಳಿ: ಮೇಯರ್ ಸೇರಿ 18 ಸಾವು

ಮೆಕ್ಸಿಕೊದ ಗೆರೆರೊ ಪ್ರಾಂತ್ಯದಲ್ಲಿ ಅಪರಿಚಿತ ಮುಸುಕುಧಾರಿ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಅಲ್ಲಿನ ಮೇಯರ್, ಅವರ ತಂದೆ ಸೇರಿ 18ರನ್ನು ಹತ್ಯೆಗೈಯ್ಯಲಾಗಿದೆ.

ಸ್ಯಾನ್ ಮಿಗುಲ್ ಟೊಟೊಲ್ಯಾಪನ್ ನಗರದ ಮೇಯರ್ ಕೊನ್ರಾಡೊ ಮೆಂಡೊಜಾ ಮತ್ತು ಅವರ ತಂದೆ ಹಾಗೂ ಮಾಜಿ ಮೇಯರ್ ಅವರನ್ನು ಸಹ ಕೊಲೆಗೈಯಲಾಗಿದೆ. ಕೊಲೆ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿಯ ಘಟನೆಗಳನ್ನು ಓದಿದ ಮೇಲೆ ಭಯ, ಆತಂಕವಾಗುತ್ತಿದೆ. ಸತ್ತವರಿಗಾಗಿ ಮನಸು ಮಿಡಿಯುತ್ತಿದೆ. ಯಾಕೆ ಈ ತರದ ಪೈಶಾಚಿಕ ಕೃತ್ಯಗಳು ನಡೆಯುತ್ತಿವೆ ಎಂಬುದು ಸಹ ತಿಳಿಯುತ್ತಿಲ್ಲ. ಇಂತಹ ಕೃತ್ಯವೆಸಗಲು ವ್ಯಕ್ತಿಯ ಮಾನಸಿಕ ಸ್ಥಿತಿ ಏನಾದರೂ ಕಾರಣವಿರಬಹುದೆ? ಯಾಕೆ, ಆತ ಈ ತರ ಹಸುಗೂಸುಗಳನ್ನು ಕೊಂದನು? ದೇವರಲ್ಲಿ ನಂಬಿಕೆ ಕುಸಿದರೆ ಪರವಾಗಿಲ್ಲ. ಸಂಬಂಧಗಳಲ್ಲಿ, ಮಾನವೀಯತೆಯಲ್ಲಿ ನಂಬಿಕೆಗಳು ಕುಸಿದಾಗ ಇಂತಹ ಕೃತ್ಯಗಳು ನಡೆಯುತ್ತವೇನೋ ಅನಿಸುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾರೊಬ್ಬರ ಬಗ್ಗೆಯೂ ಕಾಳಜಿ ತೆಗೆದುಕೊಳ್ಳಲಾಗದಷ್ಟು ಪ್ರಪಂಚದ ಶಿಕ್ಷಣ ವ್ಯವಸ್ಥೆ ನಿರ್ಮಾಣವಾಗಿಬಿಟ್ಟಿದೆ. ಹಾಗಾಗಿ ತಾವುಗಳು ಈ ಸುದ್ಧಿಯನ್ನು ಪ್ರಕಟಿಸಿದ ಮೇಲೆ ಆತನ ಮಾನಸಿಕ ಸ್ಥಿತಿ ಕೌಟಂಬಿಕ ಸ್ಥಿತಿ ಬಗ್ಗೆ ವರದಿ ನೀಡಿದರೆ, ನಮ್ಮ ಶಿಕ್ಷಣದ ಗುಣ ಮಟ್ಟದ ಬಗ್ಗೆ ಚಿಂತನೆ ನಡೆಸಿ ಆರೋಗ್ಯಯುಕ್ತ ಸಮಾಜದ ನಿರ್ಮಾಣಕ್ಕೆ ದಾರಿಯಾಗಬಹುದು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...