Homeಮುಖಪುಟಇಂದಿನಿಂದ ಮುಂಬೈನಲ್ಲಿ INDIA ಮೈತ್ರಿಕೂಟದ 3ನೇ ಸಭೆ ಆರಂಭ

ಇಂದಿನಿಂದ ಮುಂಬೈನಲ್ಲಿ INDIA ಮೈತ್ರಿಕೂಟದ 3ನೇ ಸಭೆ ಆರಂಭ

- Advertisement -
- Advertisement -

ಇಂದಿನಿಂದ ಎರಡು ದಿನಗಳ ಕಾಲ ವಿರೋಧ ಪಕ್ಷಗಳ INDIA ಮೈತ್ರಿಕೂಟದ ಸಭೆ ಮುಂಬೈನಲ್ಲಿ ಆರಂಭವಾಗಿದೆ. ಈ ಸಭೆಯಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ಲಾಂಛನ, ಸಮನ್ವಯ ಸಮಿತಿ ಹಾಗೂ ಜಂಟಿ ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

INDIA ಮೈತ್ರಿಕೂಟದ ಮೂರನೇ ಸಭೆಗೂ ಮುನ್ನ ವಿರೋಧ ಪಕ್ಷ ಒಕ್ಕೂಟವಾದ INDIA ಮೈತ್ರಿಕೂಟದ ಹಲವು ನಾಯಕರು ತಾವು ಸರಕಾರಕ್ಕೆ ಅಸಾಧಾರಣ ಎದುರಾಳಿ ಎಂದು ಸಾಬೀತುಪಡಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1 ರಂದು ಮುಂಬೈನ ಗ್ರ್ಯಾಂಡ್ ಹಯಾಟ್ ಹೋಟೆಲ್ನಲ್ಲಿ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (INDIA) ಸಭೆಯಲ್ಲಿ 28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು  ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಮೈತ್ರಿ ಕೂಟಕ್ಕೆ ಲೋಗೋವನ್ನು ಆಯ್ಕೆ ಮಾಡಲಾಗುವುದು ಹಾಗೂ ಎಲ್ಲಾ ಸದಸ್ಯ ಪಕ್ಷಗಳ ನಡುವೆ ಸಮನ್ವಯವನ್ನು ಹೆಚ್ಚಿಸಲು ಸಮಿತಿಯನ್ನು ರಚಿಸಲಾಗುತ್ತದೆ.  ವಿರೋಧ ಪಕ್ಷದ ಮೈತ್ರಿಕೂಟವು ಸಂಚಾಲಕರನ್ನು ಹೊಂದಬೇಕೆ ಅಥವಾ ಬೇಡವೇ ಮತ್ತು 2024ರ ಚುನಾವಣೆಗೆ ಜಂಟಿ ಕ್ರಿಯಾ ವೇಳಾಪಟ್ಟಿಯನ್ನು ಹೊಂದಬೇಕೆ ಎಂಬುದರ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.

ಅರವಿಂದ ಕೇಜ್ರಿವಾಲ್, ಭಗವಂತ್ ಮಾನ್, ನಿತೀಶ್ ಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇಂದು ಮುಂಬೈಗೆ ಬಂದಿಳಿಯಲಿದ್ದು, ನಂತರ ಉದ್ಧವ್ ಠಾಕ್ರೆ ಆಯೋಜಿಸಿದ್ದ ಔತಣಕೂಟದಲ್ಲಿ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎನ್ ಸಿಪಿ ವರಿಷ್ಠ ಶರದ್ ಪವಾರ್, ”ದೇಶದಲ್ಲಿ ರಾಜಕೀಯ ಬದಲಾವಣೆಯನ್ನು ತರಲು ಪ್ರತಿಪಕ್ಷಗಳ ಒಕ್ಕೂಟವು ಅಸಾಧಾರಣ ಪರ್ಯಾಯವನ್ನು ಒದಗಿಸುತ್ತದೆ ಎಂಬ ವಿಶ್ವಾಸವಿದೆ. INDIA ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...