ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳು ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದ್ದಾರೆ. ಒಕ್ಕೂಟ ಸರ್ಕಾರವು ಎಚ್ಚರವಾಗಿದ್ದು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಮರ್ಥವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಲಾಭವನ್ನು ಪಡೆಯುವ ಮೂಲಕ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಲು ಯಾವುದೇ ದೇಶ ವಿರೋಧಿ ಶಕ್ತಿಗೆ ಅವಕಾಶ ನೀಡಬಾರದು ಎಂದೂ ಅವರು ಹೇಳಿದ್ದಾರೆ. ಅವರು ರಾಷ್ಟ್ರೀಯ ಭದ್ರತೆ ವಿಷಯದ ಕುರಿತು ಪಂಜಾಬ್ ವಿಶ್ವವಿದ್ಯಾಲಯ ಆಯೋಜಿಸಿದ್ದ ಮೂರನೇ ಬಲರಾಮ್ಜಿ ದಾಸ್ ಟಂಡನ್ ಸ್ಮಾರಕ ಉಪನ್ಯಾಸವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಅಫ್ಘಾನ್ ನಾಗರಿಕನ ವಿಡಿಯೊವಲ್ಲ; ಎಡಿಟೆಡ್!
“ನೆರೆಯ ಅಫ್ಘಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬುದು ಭದ್ರತೆಯ ವಿಷಯದಲ್ಲಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ನಮ್ಮ ಸರ್ಕಾರ ಅಲ್ಲಿನ ಬೆಳವಣಿಗೆಗಳ ಮೇಲೆ ನಿಗಾ ಇಟ್ಟಿದೆ” ಎಂದು ರಾಜನಾಥ್ ಸಿಂಗ್ ತಮ್ಮ ಭಾಷಣದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೇಳಿದ್ದಾರೆ.
“ಭಾರತೀಯರ ಭದ್ರತೆಯ ಜೊತೆಗೆ, ನಮ್ಮ ಸರ್ಕಾರವು ದೇಶ ವಿರೋಧಿ ಶಕ್ತಿಗಳು ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಬಾರದು ಎಂದು ಬಯಸುತ್ತದೆ. ಅದು ಅಲ್ಲಿನ ಬೆಳವಣಿಗೆಯ ಲಾಭವನ್ನು ಪಡೆದುಕೊಳ್ಳುತ್ತದೆ” ಎಂದು ಅವರು ತಿಳಿಸಿದ್ದಾರೆ.
ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥವಾಗಿದೆ ಎಂದು ರಾಜನಾಥ್ ಸಿಂಗ್ ಪ್ರತಿಪಾದಿಸಿದ್ದಾರೆ.
ಎರಡು ದಶಕಗಳ ಯುದ್ಧದ ಬಳಿಕ ಅಮೆರಿಕಾವು ತನ್ನ ಸೈನ್ಯವನ್ನು ಹಿಂಪಡೆಯಲು ಶುರುಮಾಡಿದ ಎರಡು ವಾರಗಳ ನಂತರ, ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಿದೆ. ಅದು ದೇಶದ ಎಲ್ಲಾ ಪ್ರಮುಖ ನಗರಗಳನ್ನು ಕೆಲವೇ ದಿನಗಳಲ್ಲಿ ವಶಪಡಿಸಿಕೊಂಡಿದೆ.
ಇದನ್ನೂ ಓದಿ: ಅಫ್ಘಾನ್ ತಾಲಿಬಾನ್ ಗೆಲುವು: ಒಂದು ಎಡಪಂಥೀಯ ನೋಟ



ರೈತರ ಮೇಲಾಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ ಇದರ ಬಗ್ಗೆ ಯಾವ ಪ್ರಶ್ನೆಗಳೂ ಮೂಡಲಿಲ್ಲವೆನ್ರಿ… ನೀವೇ ತಾಲಿಬಾನಿಗಲಾಗಿದ್ದರಲ್ವಾ. ಅವರಿಗೂ ನಿಮಗೂ ಏನೂ ವ್ಯತ್ಯಾಸ ಕಾನುತಿಲ್ಲ.