Homeಕರ್ನಾಟಕದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

ದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

- Advertisement -
- Advertisement -

“ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಅನೇಕ ದಲಿತರೂ ಕೂಡ ತಮ್ಮನ್ನು ತಾವು ಬೌದ್ಧರು ಎಂದು ಹೇಳಿಕೊಳ್ಳುತ್ತೇವೆ. 1991 ರಲ್ಲಿ ಅಂದಿನ ಕೇಂದ್ರ ಸರ್ಕಾರ, ‘ಬೌದ್ಧ ಧರ್ಮಕ್ಕೆ ಮತಾಂತರ ಆದವರಿಗೂ ಮೀಸಲಾತಿ ಮುಂದುವರಿಯಲಿದೆ’ ಎಂದು ಹೇಳಿದೆ. ಈ ಬಗ್ಗೆ ಹಲವರಿಗೆ ಗೊಂದಲ ಹಾಗೂ ಭಯ ಇದೆ. ಸರ್ಕಾರ ಹಾಗೂ ನಾಗಮೋಹನ್‌ ದಾಸ್ ಆಯೋಗ ಜನರ ಅನುಮಾನಗಳಿಗೆ ತೆರೆ ಎಳೆಯಬೇಕು” ಎಂದು ಮನವಿ ಮಾಡಿದರು.

“ಸಿಖ್ ಧರ್ಮಕ್ಕೆ ಮತಾಂತರ ಆದ ದಲಿತರಿಗೆ ಮೀಸಲಾತಿ ಮುಂದುವರೆದಿದೆ. ಒಳ ಮೀಸಲಾತಿಯಲ್ಲಿ ಕೂಡ ಧರ್ಮಾಂತರಗೊಂಡ ಪರಿಶಿಷ್ಟ ಜಾತಿ ಜನರಿಗೆ ಮೀಸಲಾತಿ ಮುಂದುವರಿಯಬೇಕು. ಈ ಬಗ್ಗೆ ಚಾಲ್ತಿಯಲ್ಲಿರುವ ಗೊಂದಲ ನಿವಾರಣೆ ಮಾಡಬೇಕು ಎಂಬುದು ನಮ್ಮ ಮನವಿ” ಎಂದರು.

ಒಳ ಮೀಸಲಾತಿ ಹೋರಾಟ ವಿಚಾರದಲ್ಲಿ ರಾಜ್ಯದ ದಲಿತರನ್ನು ಒಡೆಯುವ ಹುನ್ನಾರ ನಡೆಯುತ್ತಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ ಆಗಿದೆ. ದಲಿತ ಚಳವಳಿಯನ್ನು ಛಿದ್ರ ಮಾಡಲು ಸಾಧ್ಯವಾಗದ ಕಾರಣಕ್ಕೆ, ಜಾತಿಗಳ ವಿಭಜನೆಗೆ ಮುಂದಾಗಿದ್ದಾರೆ. ಆದರೆ, ರಾಜ್ಯದಲ್ಲಿ ದಲಿತ ಚಳವಳಿ ಇಂದಿಗೂ ಪರಿಶಿಷ್ಟರ ನಡುವೆ ಐಕ್ಯತೆ ಉಳಿಸಿಕೊಂಡಿದೆ. ದಲಿತ ಚಳವಳಿಯ ಬಗ್ಗೆ ಇತ್ತೀಚಿಗೆ ಕೆಲವರು ಮಾಡುತ್ತಿರುವ ಆಪಾದನೆಯನ್ನು ನಾವು ಗಂಭೀರವಾಗಿ ಪರಿಗಣಿಸಿಲ್ಲ. ಏಕೆಂದರೆ, ಇದು ಆರ್‌ಎಸ್‌ಎಸ್‌ ಹುನ್ನಾರ. ಬ್ರಾಹ್ಮಣ್ಯವಾದ ಬೇಕಾ ಅಥವಾ ಸಂವಿಧಾನ ವಾದ ಬೇಕಾ ಎಂಬುದನ್ನು ಸಮುದಾಯ ನಿರ್ಧಾರ ಮಾಡಬೇಕು” ಎಂದರು.

ದಸಂಸ ಒಕ್ಕೂಟದ ವಿ.ನಾಗರಾಜ್, ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರಗೋಡು ಹಾಗೂ ಮಾವಳ್ಳಿ ಶಂಕರ್

ಯಾವುದೇ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿಯಾಗಲಿ: ಗುರುಪ್ರಸಾದ್ ಕೆರಗೋಡು

“ಜಸ್ಟೀಸ್ ನಾಗಮೋಹನ್ ದಾಸ್ ಏಕ ಸದಸ್ಯ ಸಮಿತಿ ಮಧ್ಯಂತರ ವರದಿ ನೀಡಿದ್ದು, ಹೊಸ ಸಮೀಕ್ಷೆ ನಡೆಸುವ ಮೂಲಕ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಹೇಳಿರುವುದನ್ನು ಸ್ವಾಗತಿಸುತ್ತೇನೆ. ಅದನ್ನು ಸರ್ಕಾರ ಕೂಡ ಒಪ್ಪಿಕೊಂಡು, ಹೊಸ ಸಮೀಕ್ಷೆಗೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಕಾಲಮಿತಿಯೊಳಗೆ ಒಳ ಮೀಸಲಾತಿ ಜಾರಿ ಮಾಡಬೇಕು. ಏಕೆಂದರೆ, ಪರಸ್ಪರ ಗುಮಾನಿ, ದ್ವೇಷ ಹಾಗೂ ಅಸೂಯೆಯಿಂದ ಪರಿಶಿಷ್ಟ ಜಾತಿಯೊಳಗಿನ ಉಪ ಪಂಗಡಗಳ ನಡುವೆ ಸಂಬಂಧ ಹದಗೆಡುತ್ತಿದೆ. ಹೆಚ್ಚಿನ ಅನಾಹುತಗಳಿಗೆ ಸರ್ಕಾರ ಆಸ್ಪದ ನೀಡಬಾರದು. ಒಳ ಮೀಸಲಾತಿ ಜಾರಿಗೆ ಯಾರೊಬ್ಬರೂ ಈವರೆಗೆ ವಿರೋಧ ಮಾಡಿಲ್ಲ. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ವೈಜ್ಞಾನಿಕ ಅಂಕಿ-ಅಂಶಗಳ ಆಧಾರದಲ್ಲಿ ಒಳ ಮೀಸಲಾತಿ ಜಾರಿ ಆಗಲಿ ಎಂದು ಮನವಿ ಮಾಡುತ್ತಿದ್ದಾರೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೆರಗೋಡು ಹೇಳಿದರು.

“ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು; ಕೂಡಲೇ ಸಂಪುಟ ಉಪ ಸಮಿತಿಯೊಂದನ್ನು ರಚಿಸಬೇಕು. ಇತರೆ ಸಮುದಾಯಗಳೂ ಸಮೀಕ್ಷೆಯಲ್ಲಿ ಒಳಗೊಳ್ಳುವಂತೆ ನೋಡಿಕೊಳ್ಳಬೇಕು. ಸಮೀಕ್ಷಾ ತಂಡದಿಂದ ಮಾತ್ರ ದಲಿತರನ್ನು ಹುಡುಕಿ ಮಾತನಾಡಿಸಲು ಸಾಧ್ಯವಿಲ್ಲ. ಹಳ್ಳಿಗಳಲ್ಲಿ ಪ್ರತ್ಯೇಕವಾಗಿ ವಾಸಿಸುವದರಿಂದ ಅವರನ್ನು ಪತ್ತೆಹಚ್ಚುವುದು ಸುಲಭ. ಆದರೆ, ನಗರಸಭೆ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಶಿಷ್ಟರನ್ನು ಪತ್ತೆಹಚ್ಚುವುದು ಸ್ವಲ್ಪ ಕಷ್ಟವಾಗುತ್ತದೆ. ಆದ್ದರಿಂದ, ದಲಿತೇತರ ಸಮುದಾಯಗಳು ಒಳಗೊಳ್ಳಬೇಕು. ಹಾಗೆ ಮಾಡದಿದ್ದರೆ, ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ ಎಂದು ಅಪಸ್ವರ ಬಂದಂತೆ, ಈ ಸಮೀಕ್ಷೆಗೂ ಬರುವ ಸಾಧ್ಯತೆ ಇದೆ. ಉಪ ಸಮಿತಿ ಮಾಡಿ, ಅದರಲ್ಲಿ ಎಲ್ಲ ಸಮುದಾಯಗಳ ಮಂತ್ರಿಗಳನ್ನೂ ಸದಸ್ಯರನ್ನಾಗಿ ನೇಮಿಸಬೇಕು; ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...