Homeಮುಖಪುಟಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ - ಓವೈಸಿ

ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ಶಿವಸೇನೆ ಅಧಿಕಾರಕ್ಕೆ ಬರಲು ಸಹಾಯ ಮಾಡಿದ ಕಾಂಗ್ರೆಸ್ ಜೊತೆ ಡಿಎಂಕೆ ಮೈತ್ರಿ ಮಾಡಿಕೊಂಡಿದೆ. ಶಿವಸೇನೆಯ ನಿಲುವನ್ನು ಡಿಎಂಕೆ ಒಪ್ಪುತ್ತದೆಯೇ?- ಓವೈಸಿ

- Advertisement -
- Advertisement -

“ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇಟ್ರ ಕಳಗಂ (ಎಐಎಡಿಎಂಕೆ) ಇನ್ನುಮುಂದೆ ಜಯಲಲಿತ ಅವರ ಪಕ್ಷವಲ್ಲ; ಅದು ನರೇಂದ್ರ ಮೋದಿಯ ಗುಲಾಮಿ ಪಕ್ಷವಾಗಿದೆ” ಎಂದು ಅಖಿಲ ಭಾರತ ಮಜ್ಲಿಸ್-ಎ-ಇತಿಹಾದುಲ್ ಮುಸ್ಲಿಮೀನ್ (ಎಐಐಎಂ) ಮುಖ್ಯಸ್ಥ ಅಸದುದ್ದೀನ್ ಓವೈಸಿ ಶುಕ್ರವಾರ ಹೇಳಿದ್ದಾರೆ.

“ಎಐಎಡಿಎಂಕೆ ಇನ್ನು ಮುಂದೆ ಜಯಲಲಿತಾ ಅವರ ಪಕ್ಷವಲ್ಲ. ಏಕೆಂದರೆ ಅವರು ಯಾವಾಗಲೂ ತಮ್ಮ ಪಕ್ಷವನ್ನು ಬಿಜೆಪಿಯಿಂದ ದೂರವಿರಿಸಿದ್ದರು. ದುರದೃಷ್ಟವಶಾತ್, ಎಐಎಡಿಎಂಕೆ ಈಗ ನರೇಂದ್ರ ಮೋದಿಯ ಗುಲಾಮಿ ಪಕ್ಷವಾಗಿ ಮಾರ್ಪಟ್ಟಿದೆ” ಎಂದು ಓವೈಸಿ ಚೆನ್ನೈನಲ್ಲಿ ನಡೆದ ಸಾರ್ವಜನಿಕ ಚುನಾವಣಾ ಸಮಾವೇಶದಲ್ಲಿ ಹೇಳಿದರು.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿಟಿವಿ ದಿನಕರನ್ ಅವರ ‘ಅಮ್ಮ ಮಕ್ಕಲ್ ಮುನ್ನೇಟ್ರ ಕಳಗಮ್’ (ಎಎಂಎಂಕೆ) ಪಕ್ಷದೊಂದಿಗಿನ ಮೈತ್ರಿಯನ್ನು ಸಮರ್ಥಿಸಿಕೊಂಡ ಅಸದುದ್ದೀನ್ ಓವೈಸಿ, ಪ್ರಮುಖ ವಿರೋಧ ಪಕ್ಷವಾದ ದ್ರಾವಿಡ ಮುನ್ನೇಟ್ರ ಕಳಗಮ್ (ಡಿಎಂಕೆ) ಮೇಲೆ ದಾಳಿ ನಡೆಸಿ ಕಾಂಗ್ರೆಸ್ ಜೊತೆಗಿನ ಮೈತ್ರಿ ಕುರಿತು ಪ್ರಶ್ನೆಗಳನ್ನು ಎತ್ತಿದರು.

ಇದನ್ನೂ ಓದಿ: ಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

“ಶಿವಸೇನೆ ಮುಖ್ಯಮಂತ್ರಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಾಬರಿ ಮಸೀದಿಯ ಧ್ವಂಸವನ್ನು ಸಮರ್ಥಿಸಿಕೊಂಡಿದ್ದಾರೆ. ಶಿವಸೇನೆ ಅಧಿಕಾರಕ್ಕೆ ಬರಲು ಸಹಾಯ ಮಾಡಿದ ಕಾಂಗ್ರೆಸ್ ಜೊತೆ ಡಿಎಂಕೆ ಮೈತ್ರಿ ಮಾಡಿಕೊಂಡಿದೆ. ಶಿವಸೇನೆಯ ನಿಲುವನ್ನು ಡಿಎಂಕೆ ಒಪ್ಪುತ್ತದೆಯೇ? ನಾವು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದರಿಂದ ಬಿಜೆಪಿಗೆ ಲಾಭವಾಗುತ್ತಿದೆ ಎಂದು ಹೇಳಲಾಗಿದೆ. ಡಿಎಂಕೆ ಅವರ ಜಾತ್ಯತೀತತೆಯ ವ್ಯಾಖ್ಯಾನವನ್ನು ನನಗೆ ತಿಳಿಸಬಹುದೇ? ಮಹಾರಾಷ್ಟ್ರದಲ್ಲಿ ಶಿವಸೇನೆಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ನಿಮ್ಮ ಪ್ರಕಾರ (ಡಿಎಂಕೆ) ಶಿವಸೇನೆ ಜಾತ್ಯತೀತ ಪಕ್ಷವೇ ಅಥವಾ ಕೋಮು ಪಕ್ಷವೇ?” ಅವರು ವಾಗ್ದಾಳಿ ನಡೆಸಿದರು.

ಎಐಎಂಐಎಂ ಎಎನ್‌ಎಂಕೆ ಜೊತೆ ಮೈತ್ರಿ ಮಾಡಿಕೊಂಡು ವನಿಯಂಬಾಡಿ, ಕೃಷ್ಣಗಿರಿ, ಮತ್ತು ಶಂಕರಪುರಂ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಲಿದೆ.

234 ಸದಸ್ಯರ ತಮಿಳುನಾಡು ವಿಧಾನಸಭೆಗೆ ಚುನಾವಣೆ ಏಪ್ರಿಲ್ 6 ರಂದು ನಡೆಯಲಿದ್ದು, ಮತ ಎಣಿಕೆ ಮೇ 2 ರಂದು ನಡೆಯಲಿದೆ.


ಇದನ್ನೂ ಓದಿ: ಹತ್ರಾಸ್ ಪ್ರಕರಣ: ಸಿಎಎ ವಿರೋಧಿ ಮಹಿಳಾ ನಾಯಕಿಯರಿಗೆ ನೋಟಿಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವರದಿ ಪೂರ್ವಾಗ್ರಹ ಪೀಡಿತ ವಾಗಿದೆ. ಈ ಮೈತ್ರಿಯಲ್ಲಿ 6 ಸ್ಥಾನ ಪಡೆದಿರುವ ಪ್ರಮುಖ ಪಕ್ಷ SDPI ಬಗ್ಗೆ ಮರೆತಂತೆ ನಟಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...