Homeಮುಖಪುಟಜಾಹೀರಾತಿಗೆ ಸ್ಪಷ್ಟನೆ ನೀಡಿ ತನ್ನ ನಿಲುವನ್ನು ತಾನೇ ಉಲ್ಲಂಘಿಸಿತೆ ‘ಎಕ್ಸ್‌ಪ್ರೆಸ್‌’?

ಜಾಹೀರಾತಿಗೆ ಸ್ಪಷ್ಟನೆ ನೀಡಿ ತನ್ನ ನಿಲುವನ್ನು ತಾನೇ ಉಲ್ಲಂಘಿಸಿತೆ ‘ಎಕ್ಸ್‌ಪ್ರೆಸ್‌’?

ಜಾಹೀರಾತಿಗೂ ಹಾಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು 2019ರಲ್ಲಿ ಘೋಷಿಸಿಕೊಂಡಿದ್ದ "ಇಂಡಿಯನ್ ಎಕ್ಸ್‌ಪ್ರೆಸ್‌"- ದಿ ವೈರ್ ಜಾಲತಾಣದ ವರದಿಯಲ್ಲಿ ಉಲ್ಲೇಖ

- Advertisement -
- Advertisement -

ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಭಾನುವಾರದ ಆವೃತ್ತಿಯಾದ ‘ದಿ ಸಂಡೇ ಎಕ್ಸ್‌ಪ್ರೆಸ್‌’ನಲ್ಲಿ ಪ್ರಕಟವಾಗಿರುವ ಉತ್ತರ ಪ್ರದೇಶ ಸರ್ಕಾರದ ಜಾಹೀರಾತಿನಲ್ಲಿ ಕೊಲ್ಕತ್ತ ಎಂಎಎ ಮೇಲ್ಸೇತುವೆ ಚಿತ್ರ ಬಳಸಿರುವ ಸಂಬಂಧ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಪತ್ರಿಕೆ ಸ್ಪಷ್ಟನೆಯನ್ನೂ ನೀಡಿದೆ. ಆಗಿರುವ ಪ್ರಮಾದಕ್ಕೆ ವಿಷಾದಿಸಿರುವ ಎಕ್ಸ್‌ಪ್ರೆಸ್‌, “ಇದು ಪತ್ರಿಕೆಯ ಮಾರುಕಟ್ಟೆ ವಿಭಾಗದಿಂದ ಆಗಿರುವ ತಪ್ಪು” ಎಂದು ಹೇಳಿದೆ.

ಪತ್ರಿಕೋದ್ಯಮದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗೆ ಮಹತ್ವದ ಸ್ಥಾನವಿದೆ. ಅಂತೆಯೇ ಅದು ತನ್ನ ಜಾಹೀರಾತು ನಿಲುವನ್ನೂ ಈ ಹಿಂದೆಯೇ ಸ್ಪಷ್ಟಪಡಿಸಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ ನೀಡಿರುವ ಸ್ಪಷ್ಟನೆಯನ್ನು ಉಲ್ಲೇಖಿಸಿ ವರದಿ ಮಾಡಿರುವ ‘ದಿ ವೈರ್‌’ ಸುದ್ದಿ ಜಾಲತಾಣವು, “ತನ್ನ ನಿಲುವಿಗೇ ವಿರುದ್ಧವಾಗಿ ಎಕ್ಸ್‌ಪ್ರೆಸ್‌ ಸ್ಪಷ್ಟನೆ ನೀಡಿದೆ” ಎಂಬ ಅಭಿಪ್ರಾಯ ತಾಳಿದೆ. 2019ರಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್, “ಪತ್ರಿಕೆಯಲ್ಲಿ ಪ್ರಕಟವಾಗುವ ಯಾವುದೇ ಜಾಹೀರಾತಿಗೆ ಪತ್ರಿಕೆ ಜವಾಬ್ದಾರರಾಗಿವುದಿಲ್ಲ” ಎಂದು ಘೋಷಿಸಿಕೊಂಡಿರುವುನ್ನು  ದಿ ವೈರ್‌ ನೆನಪಿಸಿದೆ.

ಎಕ್ಸ್‌ಪ್ರೆಸ್ ಪ್ರಕಟಿಸಿರುವ “2019ರ ರೇಟ್ ಕಾರ್ಡ್ (ಪುಟ 10)ರಲ್ಲಿ “ಯಾವುದೇ ಜಾಹೀರಾತಿಗೆ ಹಾಗೂ ಅದರಲ್ಲಿನ ಸಂಗತಿಗೆ ಯಾವುದೇ ರೀತಿಯಲ್ಲೂ ನಾವು (ಎಕ್ಸ್‌ಪ್ರೆಸ್) ಜವಾಬ್ದಾರರಾಗಿರುವುದಿಲ್ಲ” ಎಂದು ಘೋಷಿಸಿಕೊಳ್ಳಲಾಗಿದೆ.

“ಜಾಹೀರಾತಿನಲ್ಲಿನ ವಿಷಯ ಸರಿಯಾಗಿದೆ, ಪ್ರಚಲಿವಾಗಿದೆ, ಸಂಪೂರ್ಣವಾಗಿದೆ, ಯಾವುದೇ ಸುಳ್ಳನ್ನು ಹೊಂದಿರುವುದಿಲ್ಲ ಎಂಬುದಕ್ಕೆ ಜಾಹೀರಾತುದಾರರು ಪ್ರತಿನಿಧಿಗಳಾಗಿರುತ್ತಾರೆ. ಜಾಹೀರಾತಿನಲ್ಲಿ ಬಳಸಿರುವ ಚಿತ್ರ, ಲೋಗೋ, ಬರಹ ಇತ್ಯಾದಿಗಳ್ಯಾವುವು ಮೂರನೇ ವ್ಯಕ್ತಿಯದ್ದಾಗಿರುವುದಿಲ್ಲ ಹಾಗೂ ಬೌದ್ಧಿಕ ಆಸ್ತಿಯನ್ನು ಉಲ್ಲಂಘಿಸಿರುವುದಿಲ್ಲ. ಅಸಭ್ಯ, ಅಶ್ಲೀಲ ಅಥವಾ ಅವಹೇಳನಕಾರಿಯಾಗಿ ಇರುವುದಿಲ್ಲ. ನಾವು ಯಾವುದೇ ರೀತಿಯಲ್ಲಿ ಜಾಹೀರಾತು ಅಥವಾ ಅದರ ವಿಷಯಕ್ಕೆ ಜವಾಬ್ದಾರರಾಗಿರುವುದಿಲ್ಲ” ಎಂದು ಎಕ್ಸ್‌‌ಪ್ರೆಸ್‌ ಹೇಳಿಕೊಂಡಿದೆ.

ತನ್ನ ನಿಲುವಿಗೆ ವಿರುದ್ಧವಾದ ಸ್ಪಷ್ಟನೆಯನ್ನು ಭಾನುವಾರ ಪ್ರಕಟವಾಗಿರುವ ಜಾಹೀರಾತಿನ ಸಂಬಂಧ ಎಕ್ಸ್‌ಪ್ರೆಸ್ ನೀಡಿದೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....