Homeರಾಷ್ಟ್ರೀಯವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

ವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

- Advertisement -
- Advertisement -

ವಿಶ್ವವಿಖ್ಯಾತ ತಾಜ್‌ಮಹಲ್‌ನ 22 ಬೀಗ ಹಾಕಿದ ಕೊಠಡಿಗಳ ಒಳಗೆ ಹಿಂದೂ ವಿಗ್ರಹಗಳು ಅಥವಾ ಧರ್ಮಗ್ರಂಥಗಳ ಇದೆ ಎಂದು ಆರೋಪಿಸಿ ಅದನ್ನು ಪರಿಶೀಲಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯ ಮೂರು ದಿನಗಳ ಮೊದಲು, ಮೇ 9 ರಂದು ತಾಜ್ ಮಹಲ್‌ನಲ್ಲಿನ ಭೂಗತ ಕೊಠಡಿಯಲ್ಲಿನ ಚಿತ್ರಗಳನ್ನು ಭಾರತೀಯ ಪುರಾತತ್ವ ಇಲಾಖೆ ಬಿಡುಗಡೆ ಮಾಡಿತ್ತು.

ಮೇ 12 ರಂದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಅಯೋಧ್ಯೆಯಲ್ಲಿನ ಬಿಜೆಪಿಯ ಮಾಧ್ಯಮ ಘಟಕದ ಉಸ್ತುವಾರಿ ರಜನೀಶ್ ಸಿಂಗ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತ್ತು. ತಾಜ್ ಮಹಲ್ ಶಿವನ ಹಳೆಯ ದೇವಾಲಯವಾಗಿದ್ದು, ಅದನ್ನು ತೇಜೋ ಮಹಾಲಯ ಎಂದು ಕರೆಯಲಾಗುತ್ತದೆ ಎಂದು ಸಿಂಗ್ ವಾದಿಸಿದ್ದರು. ಸ್ಮಾರಕದ “ನೈಜ ಇತಿಹಾಸ”ವನ್ನು ಅಧ್ಯಯನ ಮಾಡಲು ಕೊಠಡಿಗಳನ್ನು ತೆರೆದು ಸತ್ಯಶೋಧನಾ ಸಮಿತಿಯನ್ನು ರಚಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣೆಗೆ ನಿರ್ದೇಶನಗಳನ್ನು ನೀಡಬೇಕು ಎಂದು ಅವರು ಕೋರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ, ನ್ಯಾಯಾಲಯವು ರಜನೀಶ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡು, ಅಂತಹ ವಿಷಯಗಳನ್ನು ಇತಿಹಾಸಕಾರರು, ಶಿಕ್ಷಣ ತಜ್ಞರು ಮತ್ತು ವಿದ್ವಾಂಸರು ಚರ್ಚಿಸಬೇಕು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ತಾಜ್‌ಮಹಲ್‌ನ 22 ಬಾಗಿಲುಗಳನ್ನು ತೆರೆಯಬೇಕೆಂಬ ಬಿಜೆಪಿ ಮುಖಂಡನ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಆದರೆ ಈ ವಿಚಾರಣೆಗೂ ಮೊದಲು ಮೇ 9 ರಂದು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಟ್ವಿಟರ್‌ನಲ್ಲಿ ಜನವರಿ 2022 ರ ತನ್ನ ವರದಿಯನ್ನು ಹಂಚಿಕೊಂಡಿದೆ. ಕೊಠಡಿಗಳ ಬಗ್ಗೆ ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಸಂಸ್ಥೆಯು ಈ ಚಿತ್ರಗಳನ್ನು ಟ್ವೀಟ್ ಮಾಡಿದೆ ಎಂದು ಪ್ರವಾಸೋದ್ಯಮ ಉದ್ಯಮದ ಅಧಿಕಾರಿಗಳು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

“ನದಿ ಭಾಗದ ಭೂಗತ ಕೋಣೆಗಳ ನಿರ್ವಹಣೆಯ ಕೆಲಸವನ್ನು ಮಾಡಲಾಗಿದೆ” ಎಂದು ಈ ವರದಿಯು ಎರಡು ಚಿತ್ರಗಳನ್ನು ಪ್ರಕಟಿಸಿದೆ. ಜೊತೆಗೆ ನಿರ್ವಹಣೆಗೆ ಮೊದಲು ಮತ್ತು ನಂತರ ಹೇಗಿದೆ ಎಂದು ಕೂಡಾ ಅದು ಚಿತ್ರದಲ್ಲಿ ಪ್ರಕಟಿಸಿದೆ.

“ಹಾಳಾಗಿರುವ ಸುಣ್ಣದ ಮೇಲ್ಪದರವನ್ನು ತೆಗೆದು, ಅದಕ್ಕೆ ಮತ್ತೆ ಸಾಂಪ್ರದಾಯಿಕ ಸುಣ್ಣದ ಸಂಸ್ಕರಣೆಯನ್ನು ಹಾಕುವ ಮೂಲಕ ಸುಣ್ಣವನ್ನು ಬಳಿಯಲಾಯಿತು” ಎಂದು ಅದು ಹೇಳಿದೆ.

ತಾಜ್ ಮಹಲ್‌ನ ಭೂಗತ ಕೊಠಡಿಗಳಲ್ಲಿ ಕೈಗೊಂಡಿರುವ ನಿರ್ವಹಣಾ ಕಾರ್ಯಗಳ ಚಿತ್ರಗಳು.(ನಿರ್ವಹಣೆಗೂ ಮೊದಲು ಮತ್ತು ನಂತರ)

ಮೊಘಲ್ ರಾಜ ಷಹಜಹಾನ್ 1632 ರಲ್ಲಿ ತಾಜ್ ಮಹಲ್ ನಿರ್ಮಾಣವನ್ನು ನಿಯೋಜಿಸಿದನು. ಯೋಜನೆಯು 1653 ರಲ್ಲಿ ಪೂರ್ಣಗೊಂಡಿತು. ಆದರೆ ಕೆಲವು ಹಿಂದುತ್ವದ ಹುಸಿ ಇತಿಹಾಸಕಾರರು ಸ್ಮಾರಕವು ಷಹಜಹಾನ್‌‌ಗಿಂತ ಮೊದಲೇ ಅದರಲ್ಲೂ ಭಾರತದಲ್ಲಿ ಮುಸ್ಲಿಂ ಆಳ್ವಿಕೆಯು ಪ್ರಾರಂಭವಾಗುವ ಮೊದಲೇ ನಿರ್ಮಿಸಲಾಗಿತ್ತು ಎಂದು ಸುಳ್ಳೇ ಸುಳ್ಳು ಪ್ರತಿಪಾದಿಸುತ್ತಿದ್ದಾರೆ.

ಇದನ್ನೂ ಓದಿ: ತಾಜ್‌ಮಹಲ್ ಆವರಣದಲ್ಲಿ ಶಿವಪೂಜೆ: ಹಿಂದೂ ಮಹಾಸಭಾ ಕಾರ್ಯಕರ್ತರ ಬಂಧನ

ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಆಗ್ರಾ ಸರ್ಕಲ್ ಘಟಕದ ಅಧಿಕಾರಿಯೊಬ್ಬರು, “ವರದಿಯಲ್ಲಿ ಪ್ರಕಟವಾದ ಚಿತ್ರಗಳು ಕಳೆದ ಡಿಸೆಂಬರ್‌ ತಿಂಗಳದ್ದಾಗಿದೆ. ಅದರ ನಂತರವೂ ಅಲ್ಲಿ ಕೆಲಸಗಳು ನಡೆದಿದೆ. ಮತ್ತು ಅದರ ಚಿತ್ರಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ. ಅದರೆ ಸಂಸ್ಥೆಯು ತನ್ನ ಮುಂದಿನ ವರದಿಯಲ್ಲಿ ಅದನ್ನು ಪ್ರಕಟಿಸುತ್ತಾರೆಯೆ ಎಂದು ಸಂಪಾದಕೀಯ ನಿರ್ಧಾರಿಸುತ್ತದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...