Homeಅಂತರಾಷ್ಟ್ರೀಯಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

ಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

- Advertisement -
- Advertisement -

ಮಯಾನ್ಮಾರ್‌‌ನಲ್ಲಿ ಒಂದು ವರ್ಷದವರೆಗೆ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಸೈನ್ಯವು ದೇಶದ ಮೇಲೆ ಹಿಡಿತ ಸಾಧಿಸಿದೆ ಎಂದು ಮಯನ್ಮಾರ್ ಮಿಲಿಟರಿ ಟೆಲಿವಿಷನ್ ತಿಳಿಸಿದೆ. ಮಿಲಿಟರಿ ಒಡೆತನದ ಮೈವಾಡಿ ಟಿವಿಯಲ್ಲಿ ಸೋಮವಾರ ಬೆಳಿಗ್ಗೆ ಈ ಘೋಷಣೆ ಮಾಡಲಾಗಿದೆ. ಸ್ಟೇಟ್ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ ಎಂದು ವರದಿಗಳು ತಿಳಿಸಿವೆ.

ದೇಶದ ರಾಜಧಾನಿ ನಾಯ್ಪಿಟಾವ್‌ನ ಫೋನ್ ಮತ್ತು ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿರುವುದರಿಂದ ಆಂಗ್ ಸಾನ್ ಸೂಕಿ ಅವರನ್ನು ಸಂಪರ್ಕಿಸಲಾಗುತ್ತಿಲ್ಲ ಎಂದು ಅವರ ಪಕ್ಷವಾದ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಾರ್ಟಿ ಹೇಳಿದೆ.

ದೇಶದ ಸೈನ್ಯವು ಆಡಳಿತ ವಹಿಸಿಕೊಂಡಿರುವುದನ್ನು ಅಮೆರಿಕಾ, ಆಸ್ಟ್ರೇಲಿಯಾ ಸೇರಿದಂತೆ ಹಲವಾರು ದೇಶಗಳು ಕಳವಳ ವ್ಯಕ್ತಪಡಿಸಿದ್ದು, ಸೈನ್ಯಕ್ಕೆ ದೇಶದ ಕಾನೂನನ್ನು ಗೌರವಿಸುವಂತೆ ಒತ್ತಾಯಿಸಿವೆ.

ಇದನ್ನೂ ಓದಿ: ಇತ್ತೀಚಿನ ಭಾರತ-ಚೈನಾ ಗಡಿ ಘರ್ಷಣೆಗಳು: ಗಡಿ ನಿರ್ಧರಿಸಲು ಭಾರತವು ಚೌಕಾಶಿ ಮಾತುಕತೆಗೆ ತಯಾರಾಗಬೇಕು

“ಬರ್ಮಾದಲ್ಲಿ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಮತ್ತು ಇತರ ಅಧಿಕಾರಿಗಳ ಬಂಧನ ಸೇರಿದಂತೆ, ದೇಶವನ್ನು ಸೈನ್ಯವು ತೆಕ್ಕೆಗೆ ಪಡಿದುಕೊಂಡಿದೆ ಎಂಬ ಸುದ್ದಿಗಳಿಂದ ಅಮೆರಿಕ ಕಳವಳಗೊಂಡಿದೆ” ಎಂದು ಶ್ವೇತಭವನದ ವಕ್ತಾರ ಜೆನ್ ಸಾಕಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವರದಿಯಾದ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷ ಜೋ ಬಿಡನ್ ಅವರಿಗೆ ವಿವರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಚುನಾವಣಾ ಫಲಿತಾಂಶವನ್ನು ಬದಲಿಸುವ ಅಥವಾ ಮ್ಯಾನ್ಮಾರ್‌ನ ಪ್ರಜಾಪ್ರಭುತ್ವಕ್ಕೆ ಅಡ್ಡಿಯುಂಟುಮಾಡುವ ಯಾವುದೇ ಪ್ರಯತ್ನವನ್ನು ಅಮೆರಿಕ ವಿರೋಧಿಸುತ್ತದೆ ಮತ್ತು ಈ ಕ್ರಮಗಳನ್ನು ಹಿಂಪಡೆಯದಿದ್ದರೆ ಘಟನೆಗೆ ಜವಾಬ್ದಾರರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರಿಸ್ ಪೇನ್ ಅವರು ಸೂಕಿ ಅವರನ್ನು ಬಿಡುಗಡೆ ಮಾಡಲು ಕರೆ ನೀಡಿದ್ದಾರೆ. “ನವೆಂಬರ್ 2020 ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶಗಳಿಗೆ ಅನುಗುಣವಾಗಿ ರಾಷ್ಟ್ರೀಯ ಅಸೆಂಬ್ಲಿಯ ಶಾಂತಿಯುತ ಪುನರ್ನಿರ್ಮಾಣವನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೇಪಾಳ ಹಾಗೂ ಪಾಕಿಸ್ತಾನಕ್ಕಿಂತ ಭಾರತದ ಕನಿಷ್ಠ ವೇತನ ಕಡಿಮೆ: ವಿಶ್ವ ಸಂಸ್ಥೆ ವರದಿ

ಮ್ಯಾಯನ್ಮಾರ್‌‌‌ನಲ್ಲಿ ಕಳೆದ ವರ್ಷ ಚುನಾವಣೆ ನಡೆದಿದ್ದು, ಈ ಚುನಾವಣೆಯ ನಂತರ ಚುನಾಯಿತ ಸಂಸದರು ಸಂಸತ್ತಿನ ಮೊದಲ ಅಧಿವೇಶನಕ್ಕಾಗಿ ರಾಜಧಾನಿ ನಾಯ್ಪಿಟಾವ್‌ನಲ್ಲಿ ಸೋಮವಾರ ಒಟ್ಟುಗೂಡಬೇಕಿತ್ತು.

75 ವರ್ಷದ ಆಂಗ್ ಸಾನ್ ಸೂಕಿ ದೇಶದ ಅತ್ಯಂತ ಪ್ರಬಲ ರಾಜಕಾರಣಿಯಾಗಿದ್ದು, ದೇಶದ ಮಿಲಿಟರಿ ಆಡಳಿತದ ವಿರುದ್ಧ ದಶಕಗಳಿಂದ ಅಹಿಂಸಾತ್ಮಕ ಹೋರಾಟವನ್ನು ಮುನ್ನಡೆಸಿದ್ದರು. ನವೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಸಂಸತ್ತಿನ ಕೆಳ ಮತ್ತು ಮೇಲ್ಮನೆಗಳಲ್ಲಿ ಸೂಕಿ ಅವರ ಪಕ್ಷವು 476 ಸ್ಥಾನಗಳಲ್ಲಿ 396 ಸ್ಥಾನಗಳನ್ನು ಪಡೆದುಕೊಂಡಿತ್ತು.

ಆದರೆ 2008 ರ ಮಿಲಿಟರಿ ಕರಡು ಸಂವಿಧಾನದಡಿಯಲ್ಲಿ ಸೈನ್ಯವು ಒಟ್ಟು ಸ್ಥಾನಗಳಲ್ಲಿ 25% ಸ್ಥಾನಗಳಲ್ಲಿ ಹಿಡಿತ ಹೊಂದಿದೆ. ಅಲ್ಲದೆ ಹಲವಾರು ಪ್ರಮುಖ ಮಂತ್ರಿ ಸ್ಥಾನಗಳ ನೇಮಕಾತಿಯನ್ನು ಕೂಡಾ ಸೈನ್ಯಕ್ಕೆ ಮೀಸಲಿಡಲಾಗಿದೆ. ಟಾಟ್ಮಾಡಾವ್ ಎಂದು ಕರೆಯಲ್ಪಡುವ ಸೈನ್ಯವು, ಚುನಾವಣೆಯಲ್ಲಿ ಭಾರಿ ಮತದಾನದ ವಂಚನೆ ಕಂಡುಬಂದಿದೆ ಎಂದು ಆರೋಪಿಸಿದೆಯಾದರೂ, ಅದಕ್ಕೆ ಪುರಾವೆ ನೀಡಲು ವಿಫಲವಾಗಿದೆ ಎಂದು ವರದಿಯಾಗಿದೆ. ದೇಶದ ಕೇಂದ್ರ ಚುನಾವಣಾ ಆಯೋಗ ಕಳೆದ ವಾರ ಈ ಆರೋಪಗಳನ್ನು ತಿರಸ್ಕರಿಸಿತ್ತು.

ಇದನ್ನೂ ಓದಿ: ಅಮಿತ್ ಶಾ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಪ್ರಯತ್ನಿಸುತ್ತಿದ್ದಾರೆ: ಟಿಎಂಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...