Homeಮುಖಪುಟಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಈ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಲ್ಲಿ ತಮ್ಮ ಫೋನ್‌ನಲ್ಲಿ ಆ್ಯಪ್ ಇಲ್ಲದಿರುವುದು ಕಂಡುಬಂದಲ್ಲಿ, ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

- Advertisement -
- Advertisement -

ಕೊರೊನಾ ವೈರಸ್ ಟ್ರ್ಯಾಕಿಂಗ್ ಆ್ಯಪ್ ’ಆರೋಗ್ಯ ಸೇತು’ “ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆ”ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಏಪ್ರಿಲ್ ಆರಂಭದಲ್ಲಿ ಸ್ವಯಂಪ್ರೇರಿತ ಬಳಕೆಗಾಗಿ ಉದ್ದೇಶಿಸಲಾದ ಈ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಲ್ಲಿ ತಮ್ಮ ಫೋನ್‌ನಲ್ಲಿ ಆ್ಯಪ್ ಇಲ್ಲದಿರುವುದು ಕಂಡುಬಂದಲ್ಲಿ, ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

ಈ ಹಿನ್ನೆಲೆಯಲ್ಲಿ “ಆರೋಗ್ಯ ಸೇತು ಅಪ್ಲಿಕೇಶನ್, ಒಂದು ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಖಾಸಗಿ ಕಂಪನಿಗೆ ಇದರ ನಿಯಂತ್ರಣ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆಯಿಲ್ಲದಿರುವುದರಿಂದ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆಯ ಕುರಿತು ಇದು ಗಂಭೀರವಾದ ಪ್ರಶ್ನೆಗಳನ್ನು ಎತ್ತುತ್ತದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ; ಆದರೆ ನಾಗರಿಕರನ್ನು ಅವರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ವಿಷಯಗಳನ್ನು ಪತ್ತೆಹಚ್ಚಲು ಬಳಕೆಯಾಗುವ ವಸ್ತುವಾಗಬಾರದು” ಎಂದು ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದಾರೆ.

ಅಪ್ಲಿಕೇಶನ್‌ನಲ್ಲಿ ಗೌಪ್ಯತೆ ಕಾಳಜಿಗಳ ಬಗ್ಗೆ ಕೆಲವು ತಜ್ಞರು ಹೇಳಿದ್ದನ್ನು ರಾಹುಲ್‌ ಗಾಂಧಿ ಪುನರುಚ್ಚರಿಸಿದ್ದಾರೆ. ಜಿಪಿಎಸ್ ಆಧಾರಿತ ಸ್ಥಳ ದತ್ತಾಂಶವನ್ನು ಬಳಸುವುದು ಒಂದು ಪ್ರಮುಖ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಪರವಾಗಿ ನೀತಿ ಆಯೋಗವು ಆ್ಯಪ್ ಬಳಕೆಯನ್ನು ಸಮರ್ಥಿಸಿಕೊಂಡಿದೆ. ಜಿಪಿಎಸ್ ಡೇಟಾ ಹೊಸ ಹಾಟ್‌ಸ್ಪಾಟ್‌ಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಸ್ಥಳದ ಡೇಟಾವನ್ನು ಅಪ್ಲಿಕೇಶನ್‌ನಿಂದ ವೈಯಕ್ತಿಕ ಆಧಾರದ ಮೇಲೆ ಬಳಸುವ ಬದಲಾಗಿ, ಒಟ್ಟು ಆಧಾರದ ಮೇಲೆ ಬಳಸಲಾಗುತ್ತದೆ ಎಂದು ಅದು ಹೇಳಿದೆ.

ವಿಸ್ತೃತ ಲಾಕ್‌ಡೌನ್‌ ಆರಂಭವಾಗುವ ಮೇ 04 ರಿಂದ ಪ್ರತಿಯೊಬ್ಬ ಖಾಸಗಿ ಕಂಪನಿಯ ಉದ್ಯೋಗಿಯು ತಮ್ಮ ಮೊಬೈಲ್‌ನಲ್ಲಿ ಆ್ಯಪ್ ಹೊಂದಿರಬೇಕು ಎಂದು ಸರ್ಕಾರ ಹೇಳಿದೆ. ಮನೆಯಿಂದ ಕೆಲಸ ಮಾಡುವವರು ಆ್ಯಪ್ ಬಳಸಬೇಕಾಗಿಲ್ಲ. ಮುಂದಿನ ಕೆಲವು ವಾರಗಳಲ್ಲಿ 30 ಕೋಟಿ ಆ್ಯಪ್ ಡೌನ್‌ಲೋಡ್‌ಗಳನ್ನು ಸಾಧಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಕಂಟೈನ್‌ಮೆಂಟ್‌ ವಲಯದಲ್ಲಿರುವವರು ಪ್ರತಿಯೊಬ್ಬರು ಇದನ್ನು ಹೊಂದಿರಲೇಬೇಕಾಗುತ್ತದೆ.

ರಾಹುಲ್‌ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈ ಅಪ್ಲಿಕೇಶನ್ “ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ” ಎಂದು ಹೇಳಿದ್ದಾರೆ.

ಅಲ್ಲದೇ “ದೈನಂದಿನ ಹೊಸ ಸುಳ್ಳು. ಆರೋಗ್ಯ ಸೇತು ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ. ಇದು ದೃಢವಾದ ದತ್ತಾಂಶ ಭದ್ರತಾ ಸಾಮರ್ಥ್ಯ ಹೊಂದಿದೆ. ತಮ್ಮ ಜೀವನದುದ್ದಕ್ಕೂ ಕಣ್ಗಾವಲಿನಲ್ಲಿ ತೊಡಗಿರುವವರಿಗೆ, ತಂತ್ರಜ್ಞಾನವನ್ನು ಹೇಗೆ ಉತ್ತಮವಾಗಿ ಬಳಸಿಕೊಳ್ಳಬಹುದು ಎಂದು ತಿಳಿದಿರುವುದಿಲ್ಲ!” ಎಂದು ರವಿಶಂಕರ್‌ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಈ ಅಪ್ಲಿಕೇಶನ್‌ನ ಬಳಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ಶಿಕ್ಷಣ ಸಂಸ್ಥೆಗಳು ಸಹ ಪ್ರೋತ್ಸಾಹಿಸಿವೆ.

ಭಾರತವು ಶನಿವಾರ 2,411 ಪ್ರಕರಣಗಳನ್ನು ಹೊಂದಿದ್ದು ಒಟ್ಟು 37,776 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 1,223 ಸಾವುಗಳು ಈವರೆಗೆ ವರದಿಯಾಗಿವೆ ಎಂದು ಅದು ಹೇಳಿದೆ. ಕಳೆದ 24 ಗಂಟೆಗಳಲ್ಲಿ ಎಪ್ಪತ್ತೊಂದು ಸಾವುಗಳು ವರದಿಯಾಗಿವೆ.


ಇದನ್ನೂ ಓದಿ: ಲಾಕ್ ಡೌನ್ ನಂತರದ ಪ್ರಥಮ ಆದ್ಯತೆ – ಕೃಷಿ ಮತ್ತು ಗ್ರಾಮೀಣ ವಲಯಗಳ ಪುನಶ್ಚೇತನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...