Homeರಾಷ್ಟ್ರೀಯಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ...

ಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರದ ನಾಲ್ಕು ದಿನಗಳ ನಂತರ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ಬಿಜೆಪಿ ನಾಯಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಿಜೆಪಿ ಯುವ ಘಟಕದ ಪದಾಧಿಕಾರಿ ಹರ್ಷಿತ್ ಶ್ರೀವಾಸ್ತವ ತನ್ನ ಆಕ್ಷೇಪಾರ್ಹ ಪೋಸ್ಟ್‌ಗಳ ಮೂಲಕ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಧಾರ್ಮಿಕ ಭಾವನೆಗಳೊಂದಿಗೆ ಚೆಲ್ಲಾಟವಾಡಲು ಪ್ರಯತ್ನಿಸುವವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಕಾನ್ಪುರ ಪೊಲೀಸ್ ಕಮಿಷನರ್ ವಿಜಯ್ ಮೀನಾ ಹೇಳಿದ್ದಾರೆ. ವಿವಾದ ಹೆಚ್ಚಾದ ನಂತರ ಹರ್ಷಿತ್‌ ಶ್ರೀವಾಸ್ತವ ಅವರ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಡಿಲಿಟ್ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ನಾಯಕಿ ನೂಪುರ್ ಶರ್ಮಾ ಟಿವಿ ಚರ್ಚೆಯ ವೇಳೆ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಕೆಯನ್ನು ಪ್ರತಿಭಟಿಸಿ ಕಳೆದ ಶುಕ್ರವಾರ ಕಾನ್ಪುರ ಬಂದ್‌ಗೆ ಕರೆ ನೀಡಲಾಗಿತ್ತು. ಈ ವೇಳೆ ಅಲ್ಲಿನ ಕೆಲವು ಭಾಗಗಳಲ್ಲಿ ಹಿಂಸಾಚಾರವು ಪ್ರಾರಂಭವಾಯಿತು. ಎರಡು ಗುಂಪುಗಳ ಸದಸ್ಯರು ಘರ್ಷಣೆಯಲ್ಲಿ ಏರ್ಪಟ್ಟು, ಪರಸ್ಪರ ಕಲ್ಲುಗಳ ತೂರಾಟ ನಡೆಸಿದ್ದರು.

ಇದನ್ನೂ ಓದಿ: ಆರೆಸ್ಸೆಸ್ಸಿನಲ್ಲಿ ದಲಿತರ ಸ್ಥಾನ ಏನು ಎಂಬುವುದಕ್ಕೆ ಛಲವಾದಿ ನಾರಾಯಣ ಸ್ವಾಮಿ ಉತ್ತರ: ಸಿದ್ದರಾಮಯ್ಯ

ಪ್ರವಾದಿಯವರ ಕುರಿತಾದ ಹೇಳಿಕೆಗಳಿಗಾಗಿ ಬಿಜೆಪಿ ಭಾನುವಾರ ನೂಪುರ್‌‌ ಶರ್ಮಾ ಅವರನ್ನು ಅಮಾನತುಗೊಳಿಸಿದೆ. ಜೊತೆಗೆ ದೆಹಲಿ ಘಟಕದ ಮಾಧ್ಯಮ ಮುಖ್ಯಸ್ಥ ನವೀನ್ ಜಿಂದಾಲ್ ಅವರನ್ನು ಉಚ್ಚಾಟಿಸಿದೆ. ಪ್ರವಾದಿ ವಿರುದ್ಧದ ಟೀಕೆಗಳಿಗೆ ವಿಶ್ವದಾದ್ಯಂತ ಭಾರೀ ಆಕ್ರೋಶ ಉಂಟಾಗಿದ್ದು, ಸುಮಾರು 16 ದೇಶಗಳು ಖಂಡಿಸಿವೆ.

ಸೋಮವಾರ ಕಾನ್ಪುರ ಪೊಲೀಸರು ಹಿಂಸಾಚಾರದಲ್ಲಿ ಭಾಗಿಯಾದವರ 40 ಚಿತ್ರಗಳನ್ನು ಬಿಡುಗಡೆ ಮಾಡಿದ್ದರು. ಸಿಸಿಟಿವಿ ಮತ್ತು ಮೊಬೈಲ್ ಫೋನ್‌ಗಳಲ್ಲಿ ಸೆರೆಯಾಗಿರುವ ಘಟನೆಯ ದೃಶ್ಯಗಳ ಆಧಾರದಲ್ಲಿ ಪೊಲೀಸರು ಆರೋಪಿಗಳ ಚಿತ್ರಗಳನ್ನು ಸಂಗ್ರಹಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ಹಿಂಸಾಚಾರದಲ್ಲಿ ಸುಮಾರು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಈ ವರೆಗೆ 50 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಗಲಭೆಯಲ್ಲಿ 1,500 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿಯವರೆಗೂ ಮುಸ್ಲಿಮರ ವಿರುದ್ಧ ಹರಿಹಾಯುತ್ತಿದ್ದ ಬ್ರಾಹ್ಮಣರ ನೇತೃತ್ವದ ಆರ್.ಎಸ್.ಎಸ್., ಭಜರಂಗದಳ ಹಿಂದೂಪರವೆಂದು ಬೊಬ್ಬೆ ಹಾಕುತ್ತಿರುವ ಬಿ.ಜೆ.ಪಿ. ಬೆಂಬಲಿತ ಸಂಘಟನೆಗಳಿಗೆ ಜಾಗತಿಕ ಮಟ್ಟದಲ್ಲಿ ಎದ್ದಿರುವ ಕೂಗು ನುಂಗಲಾರದ ತುತ್ತಾಗಿದೆ. ಅದನ್ನು ಅರಗಿಸಿಕೊಳ್ಳಲು ಇಷ್ಟಕ್ಕೆಲ್ಲ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ನಾಟಕವಾಡುತ್ತಿದ್ದಾರೆ. ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿರುವ ಎಷ್ಟು ಜನರ ಮೇಲೆ ಇವರು ಕ್ರಮ ತೆಗೆದುಕೊಂಡಿದ್ದಾರೆ? ಪ್ರಬಲ ವಿರೋಧ ಎದುರಾದರೆ ಇಂತಹ ನಾಟಕವಾಡುವುದು ಜಗತ್ತಿಗೇ ಗೊತ್ತಿರುವ ವಿಚಾರ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...