Homeಮುಖಪುಟಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

- Advertisement -
- Advertisement -

ಅಸ್ಸಾಂನ ದರ್‍ರಾಂಗ್‌ ಜಿಲ್ಲೆಯಲ್ಲಿ ಪೊಲೀಸರ ಗುಂಡಿಗೆ ಮೃತಪಟ್ಟ ವ್ಯಕ್ತಿಯ ಮೇಲೆ ಪೊಲೀಸರ ಸಮ್ಮುಖದಲ್ಲೇ ಅಮಾನವೀಯವಾಗಿ ಹಲ್ಲೆ ನಡೆಸಿದ ಫೋಟೊ ಪತ್ರಕರ್ತನನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ಗುರುವಾರ ಸಂಜೆ ತಿಳಿಸಿದ್ದಾರೆ. ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದಾಗ ಘಟನೆ ನಡೆದಿದ್ದು, ಅದಕ್ಕಾಗಿ ಪೊಲೀಸರು ಸಂಪೂರ್ಣ ಗಲಭೆ ವಿರೋಧಿ ಧಿರಿಸು ಧರಿಸಿ, ರೈಫಲ್ ಮತ್ತು ಲಾಠಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ನಿನ್ನೆಯ ಘಟನೆಯಲ್ಲಿ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ಅತಿಕ್ರಮಣ ವಿರೋಧಿ ಪ್ರಕ್ರಿಯೆ ನಡೆಯುತ್ತಿದ್ದಾಗ ಕೈಯ್ಯಲ್ಲೊಂದು ಕೋಲು ಹಿಡಿದುಕೊಂಡು, ಪೊಲೀಸರನ್ನು ಅಟ್ಟಿಸಿಕೊಂಡು ಬಂದಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಲಾಗಿತ್ತು. ಗುಂಡು ಬೀಳುತ್ತಿದ್ದಂತೆ ನೆಲಕ್ಕೆ ಉರುಳಿದ ಪ್ರತಿಭಟನಾಕಾರನ ಮೇಲೆ ಪೊಲೀಸರು ಗುಂಪಾಗಿ ತೆರಳಿ ತೀವ್ರವಾಗಿ ಥಳಿಸಿದ್ದರು. ಈ ವೇಳೆ ಅಲ್ಲಿಯೆ ಇದ್ದ ಫೋಟೋ ಜರ್ನಲಿಸ್ಟ್‌‌ ಕೂಡಾ ಅಮಾನವೀಯವಾಗಿ ಹಲ್ಲೆ ನಡೆಸಿದ್ದನು. ಪೊಲೀಸರು ಅವನನ್ನು ತಡೆದು ದೂರ ಕರೆದುಕೊಂಡು ಬಂದ ನಂತರ ಕೂಡಾ ದೂರದಿಂದ ಮತ್ತೆ ಹಾರಿ ಬಂದು ನಿಶ್ಚಲವಾಗಿ ನೆಲಕ್ಕೆ ಬಿದ್ದಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದನು.

ಇದನ್ನೂ ಓದಿ: ಮನೆ ತೆರವು ವಿರೋಧಿಸಿ ಪ್ರತಿಭಟಿಸಿದ ವ್ಯಕ್ತಿಯನ್ನು ಹೊಡೆದುರುಳಿಸಿದ ಅಸ್ಸಾಂ ಪೊಲೀಸ್‌‌

 

ಅಸ್ಸಾಂ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಪತ್ರಕರ್ತ ಬಿಜೋಯ್ ಬೋನಿಯಾ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಲೀಸರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡ ಅಸ್ಸಾಂನ ವಿಶೇಷ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್, ಫೋಟೋ ಪತ್ರಕರ್ತನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

“ಎಲ್ಲೆಲ್ಲಿ SOP ಗಳು [ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳು] ಮತ್ತು ಪ್ರೋಟೋಕಾಲ್‌ಗಳ ಉಲ್ಲಂಘನೆಯಾಗುತ್ತದೆಯೋ ಅಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಈ ವಿಡಿಯೊ ನೋಡಿದ ನಂತರ ನಾನು ಹೇಳಬಹುದಾದ ಏಕೈಕ ವಿಷಯವೆಂದರೆ, ಪತ್ರಕರ್ತನ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

ಪತ್ರಕರ್ತನ ಬಂಧನವಾಗಿದೆ ಎಂದು ಅಸ್ಸಾಂ ಡಿಜಿಪಿ ಟ್ವೀಟ್ ಮಾಡಿದ್ದಾರೆ. “ಪ್ರಸ್ತುತ ಸಿಪಜ್ಹಾರ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ವೈರಲ್ ವಿಡಿಯೋದಲ್ಲಿ ಗಾಯಗೊಂಡ ವ್ಯಕ್ತಿಯ ಮೇಲೆ ಹಲ್ಲೆ ಮಾಡುತ್ತಿದ್ದ ಕ್ಯಾಮರಾಮ್ಯಾನ್ ಅನ್ನು ಬಂಧಿಸಲಾಗಿದೆ. ಸಿಎಂ ಹಿಮಂತ ಬಿಸ್ವಾ ಅವರ ಆದೇಶದಂತೆ ಈ ಬಗ್ಗೆ ತನಿಖೆ ನಡೆಸುವಂತೆ ಸಿಐಡಿಗೆ ಕೇಳಿದ್ದೇನೆ. ಕ್ಯಾಮರಾಮನ್ ಬಿಜೋಯ್ ಬೋನಿಯಾ ಅಸ್ಸಾಂ ಸಿಐಡಿಯ ವಶದಲ್ಲಿದ್ದಾನೆ” ಎಂದು ಹೇಳಿದ್ದಾರೆ.

ಹಲ್ಲೆ ನಡೆಸಿರುವ ವ್ಯಕ್ತಿ ಸರ್ಕಾರಿ ಛಾಯಾಗ್ರಾಹಕ ಎಂದು ಎನ್‌ಡಿಟಿವಿ ದೃಢಪಡಿಸಿದೆ. ಆತ ಸ್ಥಳದಲ್ಲಿದ್ದು, ಘರ್ಷನೆಯನ್ನು ಚಿತ್ರೀಕರಿಸುತ್ತಿದ್ದ ಎಂದು ಅದು ಹೇಳಿದೆ. ಆತನನ್ನು ಗುರುತಿಸಿರುವ ಇತರ ಕೆಲವು ಮಾಧ್ಯಮಗಳು, ಆತ ದರ್ರಾಂಗ್ ಜಿಲ್ಲಾಡಳಿತದ ಛಾಯಾಗ್ರಾಹಕ ಎಂದು ಹೇಳಿವೆ.

ಗುವಾಹಟಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ಹತ್ಯೆ ಮತ್ತು ಘಟನೆಗೆ ಕಾರಣವಾದ ಸನ್ನಿವೇಶಗಳ ಕುರಿತು ತನಿಖೆ ನಡೆಸುವಂತೆ ಅಸ್ಸಾಂ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: ರಾಜಸ್ಥಾನ: ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ, ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shame on these police and Media persons who are killing the poor innocent civilians. This is nothing but hitlerism and goonda Raj. This must stop and justice should be given to the poor citizens of Assam.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...