Homeಕರ್ನಾಟಕಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ವಿವಿಧ ವಾಹನಗಳಿಗೆ ನಿಷೇಧ ಹೇರಿದ ಪ್ರಾಧಿಕಾರ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ವಿವಿಧ ವಾಹನಗಳಿಗೆ ನಿಷೇಧ ಹೇರಿದ ಪ್ರಾಧಿಕಾರ

- Advertisement -
- Advertisement -

ವಿವಾದಗಳಿಂದ ಸುದ್ದಿಯಾಗುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ(ರಾಷ್ಟ್ರೀಯ ಹೆದ್ದಾರಿ-75)ನಲ್ಲಿ ಸಂಚಾರ ಮಾಡುವವರಿಗೆ ವಿಶೇಷ ಸೈಚನೆಯೊಂದು ಹೊರಬಂದಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ಹೆದ್ದಾರಿಯಲ್ಲಿ ಬೈಕ್, ಆಟೊ, ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದೆ.

ಜುಲೈ 12ರಂದು ಈ ಕುರಿತು ಗೆಜೆಟ್‌ ಅಧಿಸೂಚನೆ ಹೊರಡಿಸಿದ್ದು, ಮೋಟಾರು ವಾಹನ ಕಾಯ್ದೆಯ ಅನ್ವಯ ಪ್ರಾಧಿಕಾರವು ಈ ಕ್ರಮಕ್ಕೆ ಮುಂದಾಗಿದೆ. ಹೊಸ ಆದೇಶವು ಆಗಸ್ಟ್ 1ರಿಂದ ಜಾರಿಗೆ ಬರಲಿದೆ.

ಎಕ್ಸ್‌ಪ್ರೆಸ್ ವೇ ಆರಂಭವಾದಾಗಲೇ ಬೈಕ್, ಆಟೊ ಹಾಗೂ ಕೃಷಿಗೆ ಬಳಸುವ ವಾಹನಗಳ ಸಂಚಾರವನ್ನು ನಿಷೇಧಿಸಬೇಕು ಎಂಬು ಮಾತುಗಳು ಕೇಳಿ ಬಂದಿತ್ತು. ಆಗ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಆ ನಂತರ ವಿಷಯ ತಣ್ಣಗಾಗಿತ್ತು. ಪ್ರಾಧಿಕಾರ ಪ್ರಸ್ತಾವ ಸಿದ್ಧಪಡಿಸಿ ಕೇಂದ್ರ ಭೂ ಸಾರಿಗೆ ಸಚಿವಾಲಯಕ್ಕೆ ಕಳಿಸಿ ಕೊಟ್ಟಿತ್ತು.

ಈ ಹೆದ್ದಾರಿಯಲ್ಲಿ ಸಂಚಾರ ಆರಂಭವಾದಾಗಿನಿಂದ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಲೇ ಇವೆ. ಹಾಗಾಗಿ ಈ ಪ್ರಸ್ತಾವದ ಕುರಿತ ಚರ್ಚೆ ಮುನ್ನೆಲೆಗೆ ಬಂದಿತ್ತು. ಉನ್ನತ ಮಟ್ಟದ ಅಧಿಕಾರಿಗಳ ಹಂತದಲ್ಲಿ ಪರಿಶೀಲನೆ ನಡೆದಿತ್ತು. ಇದೀಗ ಅಧಿಕಾರಿಗಳು ಪ್ರಸ್ತಾವಕ್ಕೆ ಹಸಿರು ನಿಶಾನೆ ತೋರಿದ್ದು, ಗೆಜೆಟ್‌ ಅಧಿಸೂಚನೆಯೂ ಆಗಿದೆ. ಇತ್ತೀಚೆಗಷ್ಟೇ ಪ್ರಾಧಿಕಾರದ ತಜ್ಞರ ಸಮಿತಿ ಎಕ್ಸ್‌ಪ್ರೆಸ್ ವೇಗೆ ಭೇಟಿ ನೀಡಿ, ಸುರಕ್ಷತೆ ಮತ್ತು ಅಪಘಾತ ತಡೆ ಕ್ರಮಗಳ ಕುರಿತು ಪರಿಶೀಲನೆ ನಡೆಸಿತ್ತು. ಹೊಸ ಆದೇಶವನ್ನು ಆಗಸ್ಟ್ 1ರಿಂದ ಜಾರಿ ಮಾಡಲಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು: ಸಾವಿನ ಹೆದ್ದಾರಿಯಾಗುತ್ತಿದೆಯಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...