Homeಮುಖಪುಟಅಯೋಧ್ಯೆ ಶಂಕುಸ್ಥಾಪನೆ ಸಮಾರಂಭದಲ್ಲಿ ದಲಿತರ ಕಡೆಗಣನೆ: ಅಪ್ನಾ ದಳದ ಶಾಸಕ ಆರೋಪ

ಅಯೋಧ್ಯೆ ಶಂಕುಸ್ಥಾಪನೆ ಸಮಾರಂಭದಲ್ಲಿ ದಲಿತರ ಕಡೆಗಣನೆ: ಅಪ್ನಾ ದಳದ ಶಾಸಕ ಆರೋಪ

ದೇವಾಲಯ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತೋರಿಸಿದ ಆತುರವನ್ನು ಬಡವರಿಗೆ ಮನೆ ಮತ್ತು ಪಿಂಚಣಿ ನೀಡುವ ಬಗ್ಗೆಯೂ ತೋರಿಸಬೇಕು ಎಂದಿದ್ದಾರೆ.

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನಾ ಸಮಾರಂಭವು ನಾಳೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ದಲಿತರನ್ನು ಕಡೆಗಣಿಸಲಾಗಿದೆ ಎಂದು ಅಪ್ನಾ ದಳ (ಎಸ್) ಶಾಸಕ ಚೌಧರಿ ಅಮರ್ ಸಿಂಗ್ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಾಲಯ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತೋರಿಸಿದ ಆತುರವನ್ನು ಬಡವರಿಗೆ ಮನೆ ಮತ್ತು ಪಿಂಚಣಿ ನೀಡುವ ಬಗ್ಗೆಯೂ ತೋರಿಸಬೇಕು ಎಂದಿದ್ದಾರೆ.

ಅಯೋಧ್ಯ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಹಾಜರಾಗುವುದರಿಂದ ದಲಿತರು ಮತ್ತು ಹಿಂದುಳಿದವರು ವಂಚಿತರಾಗಿದ್ದಾರೆ. ದೇವಾಲಯಕ್ಕಾಗಿ ಪರಿಶ್ರಮಿಸಿದವರ ಮುಖ ಕಾಣುತ್ತಿಲ್ಲ. ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ಶಾಸಕರು ದೂರಿದ್ದಾರೆ.

ದೇವಾಲಯ ನಿರ್ಮಾಣಕ್ಕಾಗಿ ರಚಿಸಲಾದ ಟ್ರಸ್ಟ್‌ನಲ್ಲಿ ಹಿಂದುಳಿದ, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಜನರಿಲ್ಲ. ಇದರಿಂದ ರಾಮ ಕೇವಲ ಬಿಜೆಪಿಯವರಿಗೆ ಮಾತ್ರವೇ ಎಂದು ಟೀಕಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ಆಹ್ವಾನಿಸಬೇಕು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರಾಮ ಎಲ್ಲರಿಗೂ ಸೇರಿದವನು, ಅಯೋಧ್ಯೆ ಕಾರ್ಯಕ್ರಮ ರಾಷ್ಟ್ರೀಯ ಏಕತೆಗೆ ದಾರಿಯಾಗಲಿ: ಪ್ರಿಯಾಂಕ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

0
ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ...