Homeಮುಖಪುಟಸಂವಿಧಾನದ ಮೂಲ ರಚನೆಯು ದಿಕ್ಕು ತೋರುವ ನಕ್ಷತ್ರದಂತೆ: ಸಿಜೆಐ ಚಂದ್ರಚೂಡ್

ಸಂವಿಧಾನದ ಮೂಲ ರಚನೆಯು ದಿಕ್ಕು ತೋರುವ ನಕ್ಷತ್ರದಂತೆ: ಸಿಜೆಐ ಚಂದ್ರಚೂಡ್

- Advertisement -
- Advertisement -

ನ್ಯಾಯಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಪ್ರತ್ಯೇಕಿಸುವ ಸಂವಿಧಾನದ ಮೂಲ ರಚನೆಯ ಸಿದ್ಧಾಂತವು ದಿಕ್ಕು ತೋರಿಸುವ ಧ್ರುವ ನಕ್ಷತ್ರದಂತೆ ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶನಿವಾರ ಹೇಳಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

1973ರ ಕೇಶವಾನಂದ ಭಾರತಿ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ಮಹತ್ವದ ತೀರ್ಪನ್ನು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಟೀಕಿಸಿದ ಕೆಲವು ದಿನಗಳ ನಂತರ ಚಂದ್ರಚೂಡ್ ಅವರ ಹೇಳಿಕೆಗಳು ಹೊರಬಿದ್ದಿವೆ.

7-6 ಬಹುಮತದೊಂದಿಗೆ 13 ನ್ಯಾಯಾಧೀಶರ ಪೀಠವು, “ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿಗೆ ಅಧಿಕಾರವಿದೆ. ಆದರೆ ಅದರ ಮೂಲ ರಚನೆಯನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದಿದ್ದು ಐತಿಹಾಸಿಕ ತೀರ್ಪಾಗಿದೆ.

ಜನವರಿ 11ರಂದು ಧಂಕರ್ ಮಾತನಾಡುತ್ತಾ, “ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವು ಬೇರೆ ಯಾವುದೇ ಸಂಸ್ಥೆಯ ಮೇಲೆ ಅವಲಂಬಿತವಾಗಿದೆಯೇ? ಇದಕ್ಕೆ ನಮ್ಮ ಸ್ಟಾಂಪ್ ಬೇಕು ಎಂದು ಯಾವುದೇ ಸಂಘಟನೆ ಅಥವಾ ಸಂಸ್ಥೆ ಹೇಳಬಹುದೇ?” ಎಂದು ಪ್ರಶ್ನಿಸಿದ್ದರು.

ಕೇಶವಾನಂದ ಭಾರತಿಯವರನ್ನು ಪ್ರತಿನಿಧಿಸಿದ ವಕೀಲ ನಾನಿ ಪಾಲ್ಖಿವಾಲಾ ಅವರನ್ನು ಚಂದ್ರಚೂಡ್ ಅವರು ಸ್ಮರಿಸಿದ್ದಾರೆ. ಕೇರಳದ 1969ರ ಭೂ ಸುಧಾರಣೆಗಳನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದಾಗ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

“ನಮ್ಮ ಸಂವಿಧಾನದ ಮೂಲ ರಚನೆಯು ಧ್ರುವ ನಕ್ಷತ್ರದಂತೆ, ಸಂವಿಧಾನದ ವ್ಯಾಖ್ಯಾನಕಾರರು ಮತ್ತು ಅನುಷ್ಠಾನಕಾರರಿಗೆ ಮಾರ್ಗದರ್ಶನ ನೀಡುತ್ತದೆ, ನಿರ್ದಿಷ್ಟ ನಿರ್ದೇಶನವನ್ನು ನೀಡುತ್ತದೆ” ಎಂದು ಚಂದ್ರಚೂಡ್ ಹೇಳಿದ್ದಾರೆ.

“ನಮ್ಮ ಸಂವಿಧಾನದ ಮೂಲ ರಚನೆ ಅಥವಾ ತತ್ವವು ಸಂವಿಧಾನದ ಶ್ರೇಷ್ಠತೆ, ಕಾನೂನಿನ ನಿಯಮ, ಅಧಿಕಾರಗಳ ಪ್ರತ್ಯೇಕತೆ, ನ್ಯಾಯಾಂಗ ವಿಮರ್ಶೆ, ಜಾತ್ಯತೀತತೆ, ಫೆಡರಲಿಸಂ, ಸ್ವಾತಂತ್ರ್ಯ, ವ್ಯಕ್ತಿಯ ಘನತೆ, ರಾಷ್ಟ್ರದ ಏಕತೆ, ಸಮಗ್ರತೆಯ ಮೇಲೆ ಆಧಾರಿತವಾಗಿದೆ” ಎಂದಿದ್ದಾರೆ.

“ಸಂವಿಧಾನದ ಆತ್ಮವನ್ನು ಹಾಗೇ ಇಟ್ಟುಕೊಂಡು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ಪಠ್ಯವನ್ನು ವ್ಯಾಖ್ಯಾನಿಸುವುದರಲ್ಲಿ ನ್ಯಾಯಾಧೀಶರ ಕುಶಲತೆ ಅಡಗಿದೆ” ಎಂದು ಚಂದ್ರಚೂಡ್ ಹೇಳಿರುವುದರಲ್ಲಿ ಲೈವ್ ಲಾ ವರದಿ ಮಾಡಿದೆ.

ಕೇಂದ್ರ ಸರ್ಕಾರ v/s ನ್ಯಾಯಾಂಗ

ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ನ್ಯಾಯಾಂಗದ ನಡುವೆ ವಿವಾದ ಉಂಟಾಗಿರುವ ಬೆನ್ನಲ್ಲೇ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಹೇಳಿಕೆಗಳು ಹೊರಬಂದಿವೆ.

ಕಾನೂನು ಸಚಿವ ಕಿರಣ್ ರಿಜಿಜು ಅವರು ಹಲವಾರು ಸಂದರ್ಭಗಳಲ್ಲಿ ಹೇಳಿಕೆಗಳನ್ನು ನೀಡುತ್ತಾ, “ಪ್ರಸ್ತುತ ಇರುವ ಕೊಲಿಜಿಯಂ ವ್ಯವಸ್ಥೆಯನ್ನು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯ್ದೆಯ ಮೂಲಕ ಬದಲಾಯಿಸಬೇಕು” ಎಂದು ಪುನರುಚ್ಚರುಚ್ಚರಿಸುತ್ತಿದ್ದಾರೆ. ಈ ಕಾಯ್ದೆಯನ್ನು 2015ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ತಿಂಗಳ ನಂತರ ಸಂಸತ್ತಿನಲ್ಲಿ ಕಾನೂನನ್ನು ಅಂಗೀಕರಿಸಲಾಯಿತು. ಆದರೆ, ನ್ಯಾಯಾಲಯವು ಕಾನೂನನ್ನು ಅಸಾಂವಿಧಾನಿಕ ಎಂದು ಪರಿಗಣಿಸಿತು.

ಮುಖ್ಯ ನ್ಯಾಯಮೂರ್ತಿ, ಇಬ್ಬರು ಹಿರಿಯ ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿಗಳು ಮತ್ತು ಕಾನೂನು ಸಚಿವರು, ಸಿಜೆಐ, ಪ್ರಧಾನಿ ಹಾಗೂ ವಿರೋಧ ಪಕ್ಷದ ನಾಯಕರಿಂದ ನಾಮನಿರ್ದೇಶನಗೊಂಡ ಇತರ ಇಬ್ಬರು ಗಣ್ಯ ವ್ಯಕ್ತಿಗಳನ್ನು ಒಳಗೊಂಡ ಸಂಸ್ಥೆಯ ಮೂಲಕ ನ್ಯಾಯಾಂಗ ನೇಮಕಾತಿಗಳನ್ನು ಮಾಡಬೇಕೆಂದು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ಕಾಯ್ದೆಯು ಹೇಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...