Homeಮುಖಪುಟಅವೈಜ್ಞಾನಿಕ ಕ್ಷೇತ್ರ ಪುನರ್ ವಿಂಗಡಣೆಗೆ ಆಕ್ಷೇಪ : ನೆನೆಗುದಿಗೆ ಬಿದ್ದ ಬಿಬಿಎಂಪಿ ವಿಭಜನೆ

ಅವೈಜ್ಞಾನಿಕ ಕ್ಷೇತ್ರ ಪುನರ್ ವಿಂಗಡಣೆಗೆ ಆಕ್ಷೇಪ : ನೆನೆಗುದಿಗೆ ಬಿದ್ದ ಬಿಬಿಎಂಪಿ ವಿಭಜನೆ

- Advertisement -
- Advertisement -

ಬಿಬಿಎಂಪಿ ವಿಭಜನೆ ಕಾರ್ಯವು ನೆನೆಗುದಿಗೆ ಬಿದ್ದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಆಡಳಿತದ ಹಿತ ದೃಷ್ಟಿಯಿಂದ 4-5 ವಿಭಾಗಗಳನ್ನು ಮಾಡಬೇಕೆಂಬ ಬೇಡಿಕೆ ರಾಷ್ಟ್ರಪತಿ ಮುಂದಿದೆ. ರಾಜ್ಯ ಸರ್ಕಾರ  ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ತಿದ್ದುಪಡಿ ಮಸೂದೆ ಅಂಗೀಕರಿಸಿ ರಾಷ್ಟ್ರಪತಿಗಳಿಗೆ ಕಳಿಸಿಕೊಟ್ಟಿದೆ. ಆದರೂ ಈವರೆಗೆ ಅಂಕಿತ ಬಿದ್ದಿಲ್ಲ.ಇದರ ನಡುವೆಯೇ ಬಿಬಿಎಂಪಿ ಕ್ಷೇತ್ರಗಳ ಪುನರ್ ವಿಂಗಡಣೆ ಕರಡನ್ನು ಪ್ರಕಟಿಸಿದ್ದು ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಕ್ಷೇತ್ರಗಳನ್ನು ಮರುವಿಂಗಡಣೆ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳ ವೀಕ್ಷಣೆ ಮಾಡಿಲ್ಲ. ಸ್ಥಳೀಯ ನಿವಾಸಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಕೇಳಿಲ್ಲ. ವಾರ್ಡ್ ಸಮಿತಿಗಳು ಇದ್ದರೂ ಅವುಗಳಿಂದ ಮಾಹಿತಿ ಪಡೆದಿಲ್ಲ. ರಾಜಕೀಯ ಪಕ್ಷಗಳಿಂದಲೂ ಅಭಿಪ್ರಾಯ ಕೇಳಿಲ್ಲ. ಪಾರದರ್ಶಕತೆ ಕಾಪಾಡಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಕಾರ್ಯವನ್ನು ಖಾಸಗಿ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಿದ್ದು ಅವಾಂತರ ಸೃಷ್ಟಿಗೆ ಕಾರಣವಾಗಿದೆ. ಆ ಖಾಸಗಿ ಸಂಸ್ಥೆ ಕೇವಲ ಜನಸಂಖ್ಯೆಯನ್ನಾಧರಿಸಿ ಕ್ಷೇತ್ರ ಪುನರ್ ವಿಂಗಡನೆ ಮಾಡಿದೆಯೇ ಹೊರತು ಸೂಕ್ತವಾಗಿ, ಸಮರ್ಪಕವಾಗಿ ಮತ್ತು ವೈಜ್ಞಾನಿಕವಾಗಿ ರೂಪಿಸಿಲ್ಲ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ.

ಕ್ಷೇತ್ರ ಪುನರ್ ವಿಂಗಡಣೆಗೆ ಬೇಕಾದ ಮಾರ್ಗಸೂಚಿಯನ್ನು ಅನುಸರಿಸಿಲ್ಲ. ವಾರ್ಡ್ ಗಡಿ ನಿರ್ಧರಿಸುವಾಗ ರಾಜಕಾಲುವೆ, ಮಳೆನೀರು ಕಾಲುವೆ ಮತ್ತು ಮುಖ್ಯರಸ್ತೆಗಳನ್ನು ಪರಿಗಣಿಸಿಲ್ಲ. ಈಗಿರುವ ಕ್ಷೇತ್ರ ಪುನರ್ ವಿಂಗಡಣೆ ಕರಡಿನಲ್ಲೂ ಒಂದು ಬಿಬಿಎಂಪಿ ವಾರ್ಡ್ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸೇರ್ಪಡೆಯಾಗಿದೆ. 45 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ಎಂಬುದು ಸದುದ್ದೇಶದಿಂದ ಕೂಡಿದ್ದರೂ ಈಗಿರುವ ಕಾಯ್ದೆಯಲ್ಲಿ ಸರಿಪಡಿಸಲು ಅಸಾಧ್ಯ. ಕ್ಷೇತ್ರಗಳು ಅವೈಜ್ಞಾನಿಕತೆಯಿಂದ ಕೂಡಿವೆ. ಇದನ್ನು ಕೂಡಲೇ ಸರಿಪಡಿಸಬೇಕು  ಅದುವರೆಗೂ ವಾರ್ಡ್ ಪುನರ್ ರಚನೆ ತಡೆಹಿಡಿಯಬೇಕು ಎಂದು  ಸಿಪಿಎಂ ಮುಖಂಡ ಕೆ.ಎನ್.ಉಮೇಶ್ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಬಿ.ಎಸ್.ಪಾಟೀಲ್ ನೇತೃತ್ವದ ಸಮಿತಿ ಅಧ್ಯಯನ ಮಾಡಿ ನೀಡಿರುವ ವರದಿಯನ್ನೂ ಪರಿಗಣಿಸಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಟ್ಟದಷ್ಟು ಸಮಸ್ಯೆಗಳು ಇವೆ. ಅವುಗಳ ಪರಿಹಾರಕ್ಕಾಗಿ ಕ್ಷೇತ್ರಗಳನ್ನು ವೈಜ್ಞಾನಿಕವಾಗಿ ಪುನರ್ ವಿಂಗಡಿಸುವ ಕೆಲಸ ಮಾಡಬಹುದಿತ್ತು. ಕೆಎಂಸಿಎಆರ್ ಮಸೂದೆಗೆ ಇದುವರೆಗೂ ಅಂಕಿತ ದೊರಕಿಲ್ಲ. ಬಿಬಿಎಂಪಿ ವಿಭಜನೆಗೆ ಜೆಡಿಎಸ್ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಿತ್ತು. ಇದರ ನಡುವೆಯೇ ಮಸೂದೆ ಅಂಗೀಕರಿಸಿ ರಾಷ್ಟ್ರಪತಿಗೆ ಕಳಿಸಿ ವರ್ಷಗಳೇ ಕಳೆದರೂ ಅಂಕಿತ ಬಿದ್ದಿಲ್ಲ. ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ತಿದ್ದುಪಡಿ ಮಸೂದೆ ಕಾಯ್ದೆಯಾಗಿದ್ದರೆ 10 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ನಂತೆ ಪುನರ್ ವಿಂಗಡೆ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅನುಕೂಲವಾಗುತ್ತಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಉದ್ದೇಶಿತ ಕ್ಷೇತ್ರ ಮರು ವಿಂಗಡಣೆಯ ಪ್ರಸ್ತಾಪದಲ್ಲಿ ಅನೇಕ ಗಂಭೀರ ಲೋಪದೋಷಗಳು ಕಂಡುಬಂದಿವೆ. ಪಾಲಿಕೆಯು ಸದುದ್ದೇಶದಿಂದ ಮಾಡಲಾಗಿರುವ ಕ್ರಮ ಗುಣಾತ್ಮಕ ಫಲಿತಾಂಶಗಳನ್ನು ನೀಡುವ ಬದಲು ಅಭಿವೃದ್ಧಿಗೆ ತೊಡಕಾಗಬಹುದಾದ ಸಾಧ್ಯತೆಯೇ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೆಎಂಸಿಎಆರ್ ಗೆ ಅಂಕಿತ ಪಡೆದು ಅದರ ಆಧಾರದಲ್ಲಿ  ಬಿಬಿಎಂಪಿಯನ್ನು ಪುನರ್ ರಚಿಸಿ ಚಿಕ್ಕವಾರ್ಡ್‌ಗಳ ರಚನೆಗೆ ಅನುವುಗೊಳಿಸಬೇಕೆಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೆಂಗಳೂರು ನಿವಾಸಿ ಡಾ.ಭಾನು ಪ್ರಕಾಶ್, ಸ್ಲಂಗಳನ್ನು ಮೂರ್ನಾಲ್ಕು ಭಾಗ ಮಾಡಿದ್ದಾರೆ. ಮುಸ್ಲಿಮರು, ದಲಿತರು ಮತ್ತು ತಮಿಳರು ಹೆಚ್ಚು ಇರುವ ಪ್ರದೇಶಗಳಲ್ಲಿ ಅವರನ್ನು ಮೂರು ವಾರ್ಡ್‌ಗೆ ಹಂಚಿಕೆ ಮಾಡಿದ್ದಾರೆ. ಇದರಿಂದ ಈ ಸಮುದಾಯ ತನಗೆ ಬೇಕಾದ ಕಾರ್ಪೋರೇಟರ್ ಅನ್ನು ಆಯ್ಕೆ ಮಾಡಿಕೊಳ್ಳಲಾಗದಂತೆ ಕ್ರಮ ವಹಿಸಲಾಗಿದೆ. ಒಂದು ಗಲ್ಲಿ ಒಂದು ವಾರ್ಡ್ ಸೇರಿದರೆ ಎದುರು ಮನೆ ಮತ್ತೊಂದು ವಾರ್ಡ್‌ಗೆ ಸೇರಿದೆ. ಕುಡಿಯುವ ನೀರಿನ ಪೈಪ್ ಲೈನ್ ಒಂದೇ ಆಗಿರುತ್ತದೆ. ನೀರು ಬರದಿದ್ದರೆ ಯಾರಿಗೆ ಪೋನ್ ಮಾಡಬೇಕು ಎಂಬ ಸಮಸ್ಯೆ ಕಾಡುತ್ತದೆ. ದಲಿತರು, ಮುಸ್ಲಿಮರು, ತಮಿಳರು ಹೆಚ್ಚಾಗಿರುವ ನಾಲ್ಕು ಓಣಿಗಳನ್ನು ಕಟ್ ಮಾಡಿ ಬೇರೆ ವಾರ್ಡ್‌ಗೆ ಸೇರಿಸಿದ್ದಾರೆ. ಇದರ ಹಿಂದೆ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುವಂತೆ ತಂತ್ರ ಹೆಣೆಯಲಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...