Homeಮುಖಪುಟವಂಶಾಡಳಿತ ರಾಜಕಾರಣವೇ ಪ್ರಜಾಪ್ರಭುತ್ವದ ಅತಿದೊಡ್ಡ ಶತ್ರು: ನರೇಂದ್ರ ಮೋದಿ

ವಂಶಾಡಳಿತ ರಾಜಕಾರಣವೇ ಪ್ರಜಾಪ್ರಭುತ್ವದ ಅತಿದೊಡ್ಡ ಶತ್ರು: ನರೇಂದ್ರ ಮೋದಿ

ಎಲ್ಲಾ ಕ್ಷೇತ್ರಗಳಂತೆಯೇ ರಾಜಕೀಯವು ಸಹ ಯುವಜನರನ್ನು ಕೇಳುತ್ತಿದೆ. ಅವರ ಯೋಚನೆ, ಶಕ್ತಿ, ಉತ್ಸಾಹ ದೇಶಕ್ಕೆ ಬೇಕಿದೆ ಎಂದು 70 ವರ್ಷದ ಪ್ರಧಾನಿ ಹೇಳಿದ್ದಾರೆ.

- Advertisement -
- Advertisement -

ವಂಶಾಡಳಿತ ರಾಜಕಾರಣವೇ ಪ್ರಜಾಪ್ರಭುತ್ವದ ಅತಿದೊಡ್ಡ ಶತ್ರು ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಅದನ್ನು ಬೇರುಸಮೇತ ಕಿತ್ತು ಹಾಕಲು ಕರೆ ನೀಡಿದ್ದಾರೆ. ಅಲ್ಲದೆ ಇತ್ತೀಚೆಗೆ ಸರ್‌ ನೇಮ್‌ಗಳ ಆಧಾರದಲ್ಲಿ ಚುನಾವಣೆಯಲ್ಲಿ ಗೆಲ್ಲುತ್ತಿರುವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದಿದ್ದಾರೆ.

ಎರಡನೇ ರಾಷ್ಟ್ರೀಯ ಯುವ ಸಮ್ಮೇಳನದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾನತಾಡಿದ ಅವರು “ಯುವಜನರು ರಾಜಕೀಯಕ್ಕೆ ಬರಬೇಕು. ಇಲ್ಲದಿದ್ದಲ್ಲಿ ವಂಶಾಡಳಿತ ರಾಜಕಾರಣ ಎಂಬ ವಿಷ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಎಂದಿದ್ದಾರೆ.

ಇತ್ತೀಚೆಗೆ ಸರ್‌ ನೇಮ್‌ಗಳ ಆಧಾರದಲ್ಲಿ ಚುನಾವಣೆಯಲ್ಲಿ ಗೆಲ್ಲುತ್ತಿರುವವರ ಸಂಖ್ಯೆ ಕ್ಷೀಣಿಸುತ್ತಿದ್ದರೂ ಸಹ ವಂಶಾಡಳಿತ ರಾಜಕಾರಣ ಕೊನೆಗೊಂಡಿಲ್ಲ. ಇಂದಿಗೂ ತಮ್ಮ ಕುಟುಂಬದ ಹಿತಾಸಕ್ತಿಗಾಗಿ ರಾಜಕೀಯ ಮಾಡುತ್ತಿರುವವರು ಇದ್ದಾರೆ ಎಂದು ಮೋದಿಯವರು ವಿರೋಧ ಪಕ್ಷಗಳನ್ನು ಟೀಕಿಸಿದ್ದಾರೆ.

ವಂಶಾಡಳಿತ ರಾಜಕಾರಣ ಮಾಡುತ್ತಿರುವರು ತಾವು ಮತ್ತು ತಮ್ಮ ಕುಟುಂಬದ ಬಗ್ಗೆಯೇ ಯೋಚಿಸುತ್ತಾರೆ ಹೊರತು ದೇಶ ಮೊದಲು ಎನ್ನುವ ಪರಿಪಾಠ ಅವರಲ್ಲಿಲ್ಲ ಎಂದು ಮೋದಿ ಹೇಳಿದ್ದಾರೆ.

ಎಲ್ಲಾ ಕ್ಷೇತ್ರಗಳಂತೆಯೇ ರಾಜಕೀಯವು ಸಹ ಯುವಜನರನ್ನು ಕೇಳುತ್ತಿದೆ. ಅವರ ಯೋಚನೆ, ಶಕ್ತಿ, ಉತ್ಸಾಹ ದೇಶಕ್ಕೆ ಬೇಕಿದೆ ಎಂದು 70 ವರ್ಷದ ಮೋದಿಯವರು ಹೇಳಿದ್ದಾರೆ.

ಮೋದಿಯವರು ಇಂದಿನ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡೇ ಮಾತನಾಡಿದರು. ಆದರೆ ಮೋದಿಯವರು ವಿರೋಧಿಸುತ್ತಿರುವ ವಂಶಾಡಳಿತ ರಾಜಕಾರಣ ಅವರ ಬಿಜೆಪಿ ಪಕ್ಷದಲ್ಲಿಯೂ ಸಹ ದೊಡ್ಡ ಮಟ್ಟದಲ್ಲಿದೆ. ಗೃಹ ಸಚಿವ ಅಮಿತ್ ಶಾ ಮಗ ಜಯ್‌ ಶಾ ಬಿಸಿಸಿಐ ಕಾರ್ಯದರ್ಶಿಯಾಗಿರುವುದು, ಕರ್ನಾಟಕದ ಸಿಎಂ ಮಕ್ಕಳು ಸಕ್ರಿಯ ರಾಜಕಾರಣದಲ್ಲಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿದೆ.


ಇದನ್ನೂ ಓದಿ: ಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...