Homeಮುಖಪುಟಬಿಜೆಪಿ ನನ್ನ ಮೇಲಿನ ಪ್ರಕರಣವನ್ನು ಮತ್ತಷ್ಟು ಜಟಿಲಗೊಳಿಸುತ್ತಿದೆ: ಲಕ್ಷದ್ವೀಪದ ನಿರ್ಮಾಪಕಿ ಆಯಿಷಾ ಸುಲ್ತಾನ

ಬಿಜೆಪಿ ನನ್ನ ಮೇಲಿನ ಪ್ರಕರಣವನ್ನು ಮತ್ತಷ್ಟು ಜಟಿಲಗೊಳಿಸುತ್ತಿದೆ: ಲಕ್ಷದ್ವೀಪದ ನಿರ್ಮಾಪಕಿ ಆಯಿಷಾ ಸುಲ್ತಾನ

- Advertisement -
- Advertisement -

ಟಿವಿ ಕಾರ್ಯಕ್ರಮವೊಂದರ ಚರ್ಚೆಯಲ್ಲಿ ಲಕ್ಷದ್ವೀಪ ಮೂಲದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ನೀಡಿದ ಹೇಳಿಕೆಯ ಆಧಾರದ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲಾಗಿತ್ತು. ಆದರೆ ಬಿಜೆಪಿಯು ನನಗೆ ಪಾಕಿಸ್ತಾನದ ಸಂಪರ್ಕವಿದೆ ಎಂದು ಪ್ರಕರಣವನ್ನು ಮತ್ತಷ್ಟು ಜಟಿಲಗೊಳಿಸುತ್ತಿದೆ ಎಂದು ಆಯಿಷಾ ಸುಲ್ತಾನ ಆರೋಪಿಸಿದ್ದಾರೆ. ಅವರನ್ನು ಮೂರನೆ ಬಾರಿಗೆ ವಿಚಾರಣೆ ನಡೆಸಲಾಗಿದೆ ಎಂದು TNIE ವರದಿ ಮಾಡಿದೆ.

“ವಿವಾದಾತ್ಮಕ ಹೇಳಿಕೆಗೆ ಕಾರಣಕ್ಕೆ ಪೊಲೀಸರು ನನ್ನನ್ನು ವಿಚಾರಣೆ ನಡೆಸಿದ್ದರು. ಆದರೆ ಬಿಜೆಪಿಯ ಸಾಮಾಜಿಕ ಜಾಲತಾಣದ ಅಭಿಯಾನವು ಪ್ರಕರಣವನ್ನು ಮತ್ತಷ್ಟು ಜಟಿಲಗೊಳಿಸಿದೆ. ಪೊಲೀಸರು ನನ್ನ ಫೋನ್ ವಿವರಗಳು, ವಾಟ್ಸಾಪ್ ಕರೆಗಳು ಮತ್ತು ಬ್ಯಾಂಕ್ ವಿವರಗಳನ್ನು ಪರಿಶೀಲಿಸಿದ್ದು, ನನಗೆ ಯಾವುದೇ ವಿದೇಶಿ ಸಂಪರ್ಕವಿದೆಯೇ ಎಂದು ವಿಚಾರಣೆ ನಡೆಸಿದ್ದಾರೆ. ನನ್ನ ಹೇಳಿಕೆಗಳನ್ನು ಪಾಕಿಸ್ತಾನದಲ್ಲಿ ಸಂಭ್ರಮಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರಿಂದ ಈ ವಿಚಾರಣೆ ಮಾಡುವುದು ಅಗತ್ಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ” ಎಂದು ಆಯಿಷಾ ಸುಲ್ತಾನಾ ಹೇಳಿದ್ದಾರೆ.

ಇದನ್ನೂ ಓದಿ: 14 ವರ್ಷ ವನವಾಸದಿಂದ ಮರಳಿ ಬಂದಳೇ ಸೀತೆ?: ಕರೀನಾ, ಆಯಿಷಾ, ಭವ್ಯ ವಿರುದ್ಧ ನಿಂತ ಶಕ್ತಿಗಳು ಯಾವುವು?

ಈ ನಡುವೆ, ಲಕ್ಷದ್ವೀಪ ಪೊಲೀಸರು ಆಯಿಷಾ ಅವರನ್ನು ಗುರುವಾರ ಮೂರನೇ ಸುತ್ತಿನ ವಿಚಾರಣೆ ನಡೆಸಿದ್ದು ನಂತರ ಅವರನ್ನು ದ್ವೀಪದಿಂದ ಹೊರಗೆ ಹೊಗಲು ಅನುಮತಿ ನೀಡಿದ್ದಾರೆ. ತನ್ನ ಏಳು ದಿನಗಳ ಕಡ್ಡಾಯ ಕ್ವಾರಂಟೈನ್‌‌ ಅನ್ನು ಶುಕ್ರವಾರ ಕೊನೆಗೊಳಿಸಿ, ಶನಿವಾರ ಕೊಚ್ಚಿಗೆ ತೆರಳಲಿದ್ದೇನೆ ಎಂದು ಆಯಿಷಾ ಹೇಳಿದ್ದಾರೆ. ಈ ಮೊದಲು ಜೂನ್ 20 ಮತ್ತು 23 ರಂದು ಪೊಲೀಸರು ಆಯಿಷಾ ಅವರನ್ನು ವಿಚಾರಣೆ ನಡೆಸಿದ್ದರು.

“ಪ್ರಕರಣವು ತನಿಖೆಯ ಹಂತದಲ್ಲಿದೆ. ನಾವು ಆಯಿಷಾ ಅವರ ಹೇಳಿಕೆಯನ್ನು ದಾಖಲಿಸಿದ್ದೇವೆ. ದೂರಿನ ಆಧಾರದಲ್ಲಿ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಿದೆ. ಈ ಸಂಬಂಧಿತ ನಾವು ವಿಷಯಗಳ ಬಗ್ಗೆ ತನಿಖೆ ನಡೆಸಬೇಕಾಗಿದ್ದು, ಸಾಕ್ಷಿಗಳನ್ನು ಪರೀಶೀಲಿಸಬೇಕಾಗುತ್ತದೆ. ತನಿಖೆ ಪ್ರಗತಿಯಲ್ಲಿರುವುದರಿಂದ ಅದರ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ಲಕ್ಷದ್ವೀಪ ಎಸ್ಪಿ ಶರತ್‌ ಕುಮಾರ್‌ ಸಿನ್ಹಾ ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ: ಆಯಿಷಾ ಸುಲ್ತಾನಾ

ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ, “ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ಒಕ್ಕೂಟ ಸರ್ಕಾರವು ‘ಜೈವಿಕ ಅಸ್ತ್ರ’ ರೂಪದಲ್ಲಿ ಪ್ರಯೋಗಿಸಿದೆ” ಎಂದು ಹೇಳಿದ್ದರು. ಇದರ ವಿರುದ್ದ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಆಯಿಷಾ ಸುಲ್ತಾನ ಅವರು ಟಿವಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಶೂನ್ಯ ಕೊರೊನಾವಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ” ಎಂದು ಹೇಳಿದ್ದರು. ಇದನ್ನು ಬಿಜೆಪಿ ವಿವಾದವನ್ನಾಗಿ ಮಾಡಿತ್ತು.

ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಹೊಸ ನಿಯಮಗಳ ವಿರುದ್ದ, ಹಲವು ತಿಂಗಳಿಗಿಂತಲೂ ಹೆಚ್ಚು ಕಾಲದಿಂದ ದ್ವೀಪವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸ ನೀತಿಗಳು ದ್ವೀಪವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಆಕ್ರೋಶಕ್ಕೆ ಮಣಿದು RTI ವಿನಾಯಿತಿ ಆದೇಶ ರದ್ದು ಮಾಡಿದ ತಮಿಳುನಾಡು ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ಹಿಂಪಡೆದುಕೊಂಡಿದೆ. ಸಾರ್ವಜನಿಕ (ಕಾನೂನು...

‘ಕೊಂದವರು ಯಾರು?’: ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ವ್ಯವಸ್ಥಿತ ಲೈಂಗಿಕ ದೌರ್ಜನ್ಯ, ನಿಗೂಢ ಕೊಲೆಗಳು ಹಾಗೂ ಸಂತ್ರಸ್ತ ಕುಟುಂಬಗಳ ಸುದೀರ್ಘ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ...

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...