Homeಮುಖಪುಟಬಿಜೆಪಿ ಸರ್ಕಾರ ಹೊಸ ಸಂಸತ್ ಭವನವನ್ನು ನಾಮಕಾವಸ್ತೆಗೆ ನಿರ್ಮಿಸಿದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸರ್ಕಾರ ಹೊಸ ಸಂಸತ್ ಭವನವನ್ನು ನಾಮಕಾವಸ್ತೆಗೆ ನಿರ್ಮಿಸಿದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರ ಜನ್ಮದಿನದಂದು (ಮೇ 28) ಹೊಸ ಸಂಸತ್ತನ್ನು ಉದ್ಘಾಟಿಸಲು ಪ್ರಧಾನಿಯವರು ಮುಂದಾಗಿದ್ದಾರೆ. ಇದಕ್ಕೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು, ”ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರಪತಿ ಕಚೇರಿಯನ್ನು ನಾಮಕಾವಸ್ತೆಗೆ ನಿರ್ಮಿಸಿದೆ” ಎಂದು ಸೋಮವಾರ ಆರೋಪಿಸಿದ್ದಾರೆ.

”ಮೋದಿ ಸರ್ಕಾರವು ಚುನಾವಣಾ ಕಾರಣಗಳಿಗಾಗಿ ಮಾತ್ರ ದಲಿತ ಮತ್ತು ಬುಡಕಟ್ಟು ಸಮುದಾಯದ ಮಹಿಳೆಯನ್ನು ಭಾರತದ ರಾಷ್ಟ್ರಪತಿಯಾಗಿ ಆಯ್ಕೆ ಮಾಡಿದೆ. ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೊಸ ಸಂಸತ್ ಭವನದ ಉದ್ಘಾಟನೆಗೆ ಆಹ್ವಾನಿಸುತ್ತಿಲ್ಲ. ಮಾಜಿ ರಾಷ್ಟ್ರಪತಿ, ರಾಮ್ ನಾಥ್ ಕೋವಿಂದ್ ಅವರನ್ನು ಹೊಸ ಸಂಸತ್ತಿನ ಶಂಕುಸ್ಥಾಪನಾ ಸಮಾರಂಭಕ್ಕೆ ಆಹ್ವಾನಿಸಲಾಗಿಲ್ಲ ಎಂದು ಖರ್ಗೆ ಸೋಮವಾರ ಹೇಳಿದರು.

”ಹೊಸ ಸಂಸತ್ ಕಟ್ಟಡವನ್ನು ಮುರ್ಮು ಅವರು ಉದ್ಘಾಟಿಸಿದ್ದರೆ, ಅದು ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಸಾಂವಿಧಾನಿಕ ಔಚಿತ್ಯಕ್ಕೆ ಸರ್ಕಾರದ ಬದ್ಧತೆಯನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

”ನೂತನ ಸಂಸತ್ ಭವನದ ಉದ್ಘಾಟನೆಯನ್ನು ರಾಷ್ಟ್ರಪತಿಗಳೇ ಮಾಡಬೇಕು ಎಂದು ರವಿವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಹೊಸ ಸಂಸತ್ ಕಟ್ಟಡವು ಲೋಕಸಭೆಯ ಚೇಂಬರ್‌ನಲ್ಲಿ 888 ಸದಸ್ಯರು ಮತ್ತು ರಾಜ್ಯಸಭಾ ಚೇಂಬರ್‌ನಲ್ಲಿ 300 ಸದಸ್ಯರು ಕುಳಿತುಕೊಳ್ಳಬಹುದು ಎಂದು ಲೋಕಸಭೆ ಸಚಿವಾಲಯ ತಿಳಿಸಿದೆ. ಉಭಯ ಸದನಗಳ ಜಂಟಿ ಅಧಿವೇಶನದ ಸಂದರ್ಭದಲ್ಲಿ, ಲೋಕಸಭೆಯ ಕೊಠಡಿಯಲ್ಲಿ ಒಟ್ಟು 1,280 ಸದಸ್ಯರಿಗೆ ಅವಕಾಶ ಕಲ್ಪಿಸಬಹುದು.

ಪ್ರಧಾನಿಯವರು ಡಿಸೆಂಬರ್ 10, 2020 ರಂದು ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದರು. ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರ ಜನ್ಮದಿನವಾದ ಮೇ 28 ರಂದು ಪ್ರಧಾನಿಯವರು ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಎಂದು ಲೋಕಸಭೆಯ ಕಾರ್ಯದರ್ಶಿ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟ ಮಾಡುತ್ತಿದ್ದ ಯುವಕನಿಗೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...